Women's T20 World Cup: ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಬ್ಯಾಟಿಂಗ್ ಆಯ್ಕೆ: ಆಂಗ್ಲರನ್ನು ಮಣಿಸ್ತಾರ ಆತಿಥೇಯರು?

ದಕ್ಷಿಣ ಆಫ್ರಿಕಾದ ಕೇಪ್‌ಟೌನ್‌ನ ನ್ಯೂಲ್ಯಾಂಡ್ಸ್ ಅಂಗಳದಲ್ಲಿ ನಡೆಯುತ್ತಿರುವ ಟಿ20 ಮಹಿಳಾ ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಟಾಸ್ ಗೆದ್ದಿರುವ ಆತಿಥೇಯ ದಕ್ಷಿಣ ಆಫ್ರಿಕಾ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
ಸಾಕಷ್ಟು ಹೋರಾಟದ ಮೂಲಕ ಸೆಮಿಫೈನಲ್‌ಗೆ ಪ್ರವೇಶ ಪಡೆದುಕೊಂಡಿರುವ ದಕ್ಷಿಣ ಆಫ್ರಿಕಾ ತವರಿನ ಪರಿಸ್ಥಿತಿಯ ಲಾಭ ಪಡೆಯುವ ಮೂಲಕ ಬಲಿಷ್ಠ ಇಂಗ್ಲೆಂಡ್ ತಂಡವನ್ನು ಮಣಿಸುವ ಲೆಕ್ಕಾಚಾರದಲ್ಲಿದೆ. ಇಂದು ಗೆಲ್ಲುವ ತಂಡ ಫೈನಲ್‌ನಲ್ಲಿ ಆಸ್ಟ್ರೇಲಿಯಾ ತಂಡವನ್ನು ಎದುರಿಸಲಿದೆ.
ಗುರುವಾರ ನಡೆದ ಮಹಿಳಾ ಟಿ20 ವಿಶ್ವಕಪ್‌ನ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಭಾರತದ ವಿರುದ್ಧ 5 ರನ್‌ಗಳ ರೋಚಕ ಜಯ ಸಾಧಿಸುವ ಮೂಲಕ ಸತತ 7ನೇ ಬಾರಿ ಫೈನಲ್‌ಗೆ ಪ್ರವೇಶ ಪಡೆದುಕೊಂಡಿದೆ.
ಲೀಗ್ ಹಂತದಲ್ಲಿ ಆಡಿದ ನಾಲ್ಕು ಪಂದ್ಯಗಳನ್ನು ಗೆಲ್ಲುವ ಮೂಲಕ ಇಂಗ್ಲೆಂಡ್ ಅಜೇಯವಾಗಿ ಸೆಮಿಫೈನಲ್‌ಗೆ ಪ್ರವೇಶ ಪಡೆದುಕೊಂಡಿದೆ. ಎಲ್ಲಾ ಪಂದ್ಯಗಳನ್ನು ಗೆದ್ದಿರುವ ಅವರು ದಕ್ಷಿಣ ಆಫ್ರಿಕಾ ವಿರುದ್ಧ ಗೆಲ್ಲುವ ಉತ್ಸಾಹದಲ್ಲಿದ್ದಾರೆ.
ಸೆಮಿಫೈನಲ್ ಪಂದ್ಯಕ್ಕಾಗಿ ಇಂಗ್ಲೆಂಡ್ ಪ್ಲೇಯಿಂಗ್ ಇಲೆವೆನ್‌ನಲ್ಲಿ ಒಂದು ಬದಲಾವಣೆ ಮಾಡಲಾಗಿದೆ. ಫ್ರೇಯಾ ಡೇವಿಸ್ ಬದಲಾಗಿ ಲಾರೆನ್ ಬೆಲ್ ಅವರು ತಂಡದಲ್ಲಿ ಅವಕಾಶ ಪಡೆದುಕೊಂಡಿದ್ದಾರೆ. ದಕ್ಷಿಣ ಆಫ್ರಿಕಾ ತಂಡ ಲೀಗ್ ಹಂತದಲ್ಲಿ ಕೊನೆಯ ಪಂದ್ಯದಲ್ಲಿ ಆಡಿದ ತಂಡವನ್ನೇ ಉಳಿಸಿಕೊಂಡಿದೆ.

ನ್ಯೂ ಲ್ಯಾಂಡ್ಸ್ ಪಿಚ್ ವರದಿ
ಕೇಪ್‌ಟೌನ್‌ನ ನ್ಯೂಲ್ಯಾಂಡ್ಸ್ ಪಿಚ್ ಬ್ಯಾಟರ್ ಗಳಿಗೆ ಹೆಚ್ಚಿನ ನೆರವು ನೀಡಲಿದೆ. ಆಸ್ಟ್ರೇಲಿಯಾ ಸೆಮಿಫೈನಲ್ ಪಂದ್ಯದಲ್ಲಿ 172 ರನ್ ಗಳಿಸಿತ್ತು, ಇದಕ್ಕುತ್ತರವಾಗಿ ಭಾರತ ಕೂಡ ಹೋರಾಟ ನೀಡಿ 167 ರನ್ ಗಳಿಸಿ ಕಡಿಮೆ ಅಂತರದಲ್ಲಿ ಸೋಲೊಪ್ಪಿಕೊಂಡಿತ್ತು.
ಇಂಗ್ಲೆಂಡ್ ಮತ್ತು ದಕ್ಷಿಣ ಆಫ್ರಿಕಾ ತಂಡಗಳಲ್ಲಿ ಸ್ಫೋಟಕ ಬ್ಯಾಟರ್ ಗಳು ಇದ್ದು, ಇಂದಿನ ಪಂದ್ಯ ಕೂಡ ಹೈ ಸ್ಕೋರಿಂಗ್ ಗೇಮ್ ಆಗುವ ಸಾಧ್ಯತೆ ಇದೆ.

ಉಭಯ ತಂಡಗಳ ಆಡುವ ಬಳಗ
ದಕ್ಷಿಣ ಆಫ್ರಿಕಾ : ಲಾರಾ ವೊಲ್ವಾರ್ಟ್, ತಜ್ಮಿನ್ ಬ್ರಿಟ್ಸ್, ಮಾರಿಜಾನ್ ಕಪ್, ಸುನೆ ಲೂಸ್(ನಾಯಕಿ), ಕ್ಲೋಯ್ ಟ್ರಯಾನ್, ನಾಡಿನ್ ಡಿ ಕ್ಲರ್ಕ್, ಅನ್ನೆಕೆ ಬಾಷ್, ಸಿನಾಲೊ ಜಫ್ತಾ (ವಿಕೆಟ್ ಕೀಪರ್), ಶಬ್ನಿಮ್ ಇಸ್ಮಾಯಿಲ್, ಅಯಾಬೊಂಗಾ ಖಾಕಾ, ನಾನ್ಕುಲುಲೆಕೊ ಮ್ಲಾಬಾ
ಇಂಗ್ಲೆಂಡ್ : ಡೇನಿಯಲ್ ವ್ಯಾಟ್, ಸೋಫಿಯಾ ಡಂಕ್ಲಿ, ಆಲಿಸ್ ಕ್ಯಾಪ್ಸೆ, ನ್ಯಾಟ್ ಸ್ಕೈವರ್-ಬ್ರಂಟ್, ಹೀದರ್ ನೈಟ್ (ನಾಯಕ), ಆಮಿ ಜೋನ್ಸ್ (ವಿಕೆಟ್ ಕೀಪರ್), ಸೋಫಿ ಎಕ್ಲೆಸ್ಟೋನ್, ಕ್ಯಾಥರೀನ್ ಸ್ಕೈವರ್-ಬ್ರಂಟ್, ಷಾರ್ಲೆಟ್ ಡೀನ್, ಸಾರಾ ಗ್ಲೆನ್, ಲಾರೆನ್ ಬೆಲ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications