ಮಹಿಳಾ ವಿಶ್ವಕಪ್ 2022 ಪಂದ್ಯಗಳ ನೇರ ಪ್ರಸಾರ ವೀಕ್ಷಿಸಲು ಹೀಗೆ ಮಾಡಿ

ಈ ಬಾರಿಯ ಮಹಿಳಾ ವಿಶ್ವಕಪ್ ಟೂರ್ನಿ ಮಾರ್ಚ್ 4ರಿಂದ ಆರಂಭವಾಗುತ್ತಿದ್ದು, ಸಂಪೂರ್ಣ ಟೂರ್ನಿ ನ್ಯೂಜಿಲೆಂಡ್‌ನಲ್ಲಿ ನಡೆಯಲಿದೆ. ಈ ಬಾರಿಯ ಟೂರ್ನಿಯ ಚೊಚ್ಚಲ ಪಂದ್ಯ ಮಾರ್ಚ್ 4ರಂದು ಟೌರಂಗಾದ ಬೇ ಓವಲ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನ್ಯೂಜಿಲೆಂಡ್ ಮತ್ತು ವೆಸ್ಟ್ ಇಂಡೀಸ್ ತಂಡಗಳ ನಡುವೆ ನಡೆಯಲಿದೆ. ಇನ್ನು ಟೂರ್ನಿಯಲ್ಲಿ ಪಾಲ್ಗೊಳ್ಳಲು ಭಾರತ ಮಹಿಳಾ ಕ್ರಿಕೆಟ್ ತಂಡ ಸೇರಿದಂತೆ ವಿಶ್ವದ ಹಲವಾರು ಮಹಿಳಾ ಕ್ರಿಕೆಟ್ ತಂಡಗಳು ಈಗಾಗಲೇ ನ್ಯೂಜಿಲೆಂಡ್ ತಲುಪಿದ್ದು, ಅಭ್ಯಾಸಗಳಲ್ಲಿ ಆಟಗಾರ್ತಿಯರು ಪಾಲ್ಗೊಳ್ಳುತ್ತಿದ್ದಾರೆ. ಇನ್ನು ಟೂರ್ನಿಯ ಉದ್ಘಾಟನಾ ಪಂದ್ಯ ನ್ಯೂಜಿಲೆಂಡ್ ಮತ್ತು ವೆಸ್ಟ್ ಇಂಡೀಸ್ ತಂಡಗಳ ನಡುವೆ ನಡೆದರೆ, ಮಾರ್ಚ್ 5ರಂದು ಹಾಲಿ ಚಾಂಪಿಯನ್ಸ್ ಇಂಗ್ಲೆಂಡ್ ವನಿತೆಯರು ತಮ್ಮ ಬದ್ಧ ವೈರಿಯಾದ ಆಸ್ಟ್ರೇಲಿಯಾ ಮಹಿಳಾ ತಂಡವನ್ನು ಎದುರಿಸಲಿದ್ದಾರೆ ಮತ್ತು ಮಾರ್ಚ್ 6ರಂದು ಭಾರತ ವನಿತೆಯರ ತಂಡ ತನ್ನ ಬದ್ಧ ವೈರಿಯಾದ ಪಾಕಿಸ್ತಾನ ವನಿತೆಯರ ತಂಡದ ವಿರುದ್ಧ ಸೆಣಸಾಟ ನಡೆಸಲಿದೆ.
ಈ ಬಾರಿ ನ್ಯೂಜಿಲೆಂಡ್ ನೆಲದಲ್ಲಿ ನಡೆಯುತ್ತಿರುವ ಮಹಿಳಾ ವಿಶ್ವಕಪ್ ಟೂರ್ನಿ 12ನೇ ಆವೃತ್ತಿಯ ವಿಶ್ವಕಪ್ ಟೂರ್ನಿಯಾಗಿದ್ದು 1 ಫೈನಲ್ ಹಾಗೂ 2 ಸೆಮಿಫೈನಲ್ ಪಂದ್ಯಗಳು ಸೇರಿದಂತೆ ಒಟ್ಟು 31 ಪಂದ್ಯಗಳು ನಡೆಯಲಿವೆ. ಹಾಗೂ ಈ ಬಾರಿಯ ವಿಶ್ವಕಪ್ ಟೂರ್ನಿ ಒಟ್ಟು 31 ದಿನಗಳ ಕಾಲ ಜರುಗಲಿದ್ದು, ಆಕ್ಲೆಂಡ್, ಕ್ರಿಸ್ಟ್ ಚರ್ಚ್, ಡ್ಯುನೆಡಿನ್, ಹ್ಯಾಮಿಲ್ಟನ್, ಟೌರಂಗಾ ಮತ್ತು ಬೆಲ್ಲಿಂಗ್ ಟನ್ ನಗರಗಳಲ್ಲಿ ಪಂದ್ಯಗಳು ನಡೆಯಲಿವೆ. ಈ ಟೂರ್ನಿಯಲ್ಲಿ ಭಾಗವಹಿಸಲಿರುವ ಒಟ್ಟು 8 ತಂಡಗಳು ಲೀಗ್ ಹಂತದ ಪಂದ್ಯಗಳಲ್ಲಿ ಪರಸ್ಪರ 1 ಪಂದ್ಯದಲ್ಲಿ ಸೆಣಸಾಟ ನಡೆಸಲಿದ್ದು, ಎಲ್ಲಾ ಪಂದ್ಯಗಳು ಮುಕ್ತಾಯವಾದ ನಂತರ ಅಂಕಪಟ್ಟಿಯಲ್ಲಿ ಟಾಪ್ 4 ಸ್ಥಾನಗಳನ್ನು ಪಡೆದುಕೊಳ್ಳುವ ತಂಡಗಳು ಸೆಮಿಫೈನಲ್ ಸುತ್ತಿಗೆ ಅರ್ಹತೆ ಪಡೆದುಕೊಳ್ಳಲಿವೆ.
ಹೀಗೆ ಈ ಬಾರಿಯ ಮಹಿಳಾ ವಿಶ್ವಕಪ್ ಟೂರ್ನಿ ಆರಂಭಕ್ಕೆ ಇದೀಗ ಕ್ಷಣಗಣನೆ ಆರಂಭವಾಗಿದ್ದು, ಪಂದ್ಯಗಳು ಯಾವಾಗ ಆರಂಭವಾಗಲಿವೆ, ಈ ಪಂದ್ಯಗಳನ್ನು ಭಾರತದಲ್ಲಿ ದೂರದರ್ಶನದ ಮೂಲಕ ವೀಕ್ಷಿಸುವುದು ಹೇಗೆ ಹಾಗೂ ಮೊಬೈಲ್ ಅಪ್ಲಿಕೇಷನ್ ಮೂಲಕ ವೀಕ್ಷಿಸುವುದು ಹೇಗೆ ಎಂಬುದರ ಕುರಿತಾದ ಮಾಹಿತಿ ಈ ಕೆಳಕಂಡಂತಿದೆ..
ಈ ಬಾರಿಯ ಮಹಿಳಾ ವಿಶ್ವಕಪ್ ಆರಂಭ ಯಾವಾಗ?
12ನೇ ಮಹಿಳಾ ವಿಶ್ವಕಪ್ ಟೂರ್ನಿ ಇದೇ ಮಾರ್ಚ್ 4ರಂದು ನಡೆಯಲಿರುವ ನ್ಯೂಜಿಲೆಂಡ್ ಮಹಿಳಾ ತಂಡ ಮತ್ತು ವೆಸ್ಟ್ ಇಂಡೀಸ್ ಮಹಿಳಾ ತಂಡಗಳ ನಡುವಿನ ಉದ್ಘಾಟನಾ ಪಂದ್ಯದ ಮೂಲಕ ಆರಂಭಗೊಳ್ಳಲಿದೆ. ಈ ಬಾರಿಯ ಟೂರ್ನಿ ಸಂಪೂರ್ಣವಾಗಿ ನ್ಯೂಜಿಲೆಂಡ್ ನೆಲದಲ್ಲಿ ನಡೆಯಲಿದ್ದು, ಉದ್ಘಾಟನಾ ಪಂದ್ಯ ಟೌರಂಗಾದಲ್ಲಿ ನಡೆಯಲಿದೆ.
ಭಾರತದಲ್ಲಿ ದೂರದರ್ಶನದ ಮೂಲಕ ಟೂರ್ನಿ ವೀಕ್ಷಿಸುವುದು ಹೇಗೆ?
ಈ ಬಾರಿಯ ಐಸಿಸಿ ಮಹಿಳಾ ವಿಶ್ವಕಪ್ ಟೂರ್ನಿಯ ಪಂದ್ಯಗಳನ್ನು ಭಾರತದಲ್ಲಿ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ನೇರ ಪ್ರಸಾರ ಮಾಡುವ ಹಕ್ಕನ್ನು ಪಡೆದುಕೊಂಡಿದ್ದು, ಸ್ಟಾರ್ ಸ್ಪೋರ್ಟ್ಸ್ 2/ಎಚ್ ಡಿ, ಸ್ಟಾರ್ ಸ್ಪೋರ್ಟ್ಸ್ 3 ಮತ್ತು ಸ್ಟಾರ್ ಸ್ಪೋರ್ಟ್ಸ್ 1 ಹಿಂದಿ ಚಾನೆಲ್‌ಗಳಲ್ಲಿ ಪಂದ್ಯಗಳನ್ನು ವೀಕ್ಷಿಸಬಹುದಾಗಿದೆ.
ಮೊಬೈಲ್ ಅಪ್ಲಿಕೇಶನ್‌ನಲ್ಲಿ ಟೂರ್ನಿ ವೀಕ್ಷಿಸುವುದು ಹೇಗೆ?
ಈ ಬಾರಿಯ ಮಹಿಳಾ ವಿಶ್ವಕಪ್ ಟೂರ್ನಿಯ ಎಲ್ಲ ಪಂದ್ಯಗಳು ಡಿಸ್ನೆ ಪ್ಲಸ್ ಹಾಟ್‌ಸ್ಟಾರ್ ಅಪ್ಲಿಕೇಶನ್‌ನಲ್ಲಿ ನೇರ ಪ್ರಸಾರವಾಗಲಿದ್ದು, ಬಳಕೆದಾರರು ಈ ಅಪ್ಲಿಕೇಷನ್ ಮೂಲಕ ಪಂದ್ಯಗಳನ್ನು ವೀಕ್ಷಿಸಬಹುದಾಗಿದೆ.
ಭಾರತ ಮಹಿಳಾ ತಂಡ: ಮಿಥಾಲಿ ರಾಜ್ (ನಾಯಕಿ), ಹರ್ಮನ್‌ಪ್ರೀತ್ ಕೌರ್ (ಉಪನಾಯಕಿ), ಸ್ಮೃತಿ ಮಂಧಾನ, ಶಫಾಲಿ ವರ್ಮಾ, ಯಾಸ್ತಿಕಾ ಭಾಟಿಯಾ, ದೀಪ್ತಿ ಶರ್ಮಾ, ರಿಚಾ ಘೋಷ್ (ವಿಕೆಟ್ ಕೀಪರ್), ಸ್ನೇಹ ರಾಣಾ, ಜೂಲನ್ ಗೋಸ್ವಾಮಿ, ಪೂಜಾ ವಸ್ತ್ರಾಕರ್, ಮೇಘನಾ ಸಿಂಗ್, ರೇಣುಕಾ ಸಿಂಗ್ ಠಾಕೂರ್ ತಾನಿಯಾ ಭಾಟಿಯಾ (ವಿಕೆಟ್ ಕೀಪರ್), ರಾಜೇಶ್ವರಿ ಗಾಯಕ್ವಾಡ್, ಪೂನಂ ಯಾದವ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications