Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಮಹಿಳಾ ವಿಶ್ವಕಪ್‌, ಭಾರತ vs ಪಾಕ್: ಸ್ಮೃತಿ ಮಂದಾನ ಅರ್ಧಶತಕ, 112ಕ್ಕೆ 5 ವಿಕೆಟ್ ಕಳೆದುಕೊಂಡ ಭಾರತ

Womens WC 2022: India vs Pakistan playing XI and live score

ಒಂದೆಡೆ ಮೊಹಾಲಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ವಿರಾಟ್ ಕೊಹ್ಲಿ ನೂರನೇ ಟೆಸ್ಟ್ ಪಂದ್ಯ ಸದ್ದು ಮಾಡುತ್ತಿದ್ದರೆ, ಮತ್ತೊಂದೆಡೆ ನ್ಯೂಜಿಲೆಂಡ್ ನೆಲದಲ್ಲಿ ಆಯೋಜನೆಯಾಗಿರುವ ಮಹಿಳಾ ವಿಶ್ವಕಪ್ ಟೂರ್ನಿ ತನ್ನದೇ ಆದ ರೀತಿಯಲ್ಲಿ ಸದ್ದು ಮಾಡುತ್ತಿದೆ. ಮಾರ್ಚ್ 4ರಂದು ನಡೆದ ನ್ಯೂಜಿಲೆಂಡ್ ಮಹಿಳಾ ತಂಡ ಮತ್ತು ವೆಸ್ಟ್ ಇಂಡೀಸ್ ವನಿತೆಯರ ತಂಡಗಳ ನಡುವಿನ ಪಂದ್ಯದ ಮೂಲಕ ಆರಂಭವಾದ ಈ ಬಾರಿಯ ಮಹಿಳಾ ವಿಶ್ವಕಪ್ ಟೂರ್ನಿಯಲ್ಲಿ ಭಾರತೀಯ ವನಿತೆಯರ ತಂಡ ಇಂದು ( ಮಾರ್ಚ್ 6 ) ತನ್ನ ಚೊಚ್ಚಲ ಪಂದ್ಯವನ್ನಾಡುತ್ತಿದ್ದು, ಈ ಪಂದ್ಯದಲ್ಲಿ ತನ್ನ ಬದ್ಧ ಎದುರಾಳಿಯಾದ ಪಾಕಿಸ್ತಾನ ವನಿತೆಯರ ತಂಡದ ವಿರುದ್ಧ ಸೆಣಸಾಟವನ್ನು ನಡೆಸುತ್ತಿದೆ.

ಮೌಂಟ್ ಮೌಂಗನುಯಿ ಬೇ ಓವಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯ ಭಾರತೀಯ ಕಾಲಮಾನದ ಪ್ರಕಾರ ಬೆಳಿಗ್ಗೆ 6.30ಕ್ಕೆ ಆರಂಭವಾಗಿದ್ದು ಟಾಸ್ ಗೆದ್ದ ಭಾರತೀಯ ವನಿತೆಯರ ತಂಡ ಬ್ಯಾಟಿಂಗ್ ಆರಿಸಿಕೊಂಡಿದೆ. ಹೀಗೆ ಮೊದಲು ಬ್ಯಾಟಿಂಗ್ ಮಾಡಿದ ಭಾರತೀಯ ವನಿತೆಯರ ತಂಡದ ಪ್ರಕಾರ ಸ್ಮೃತಿ ಮಂದಾನ ಮತ್ತು ಶೆಫಾಲಿ ವರ್ಮಾ ಆರಂಭಿಕ ಆಟಗಾರ್ತಿಯರಾಗಿ ಕಣಕ್ಕಿಳಿದರು. ಶೆಫಾಲಿ ವರ್ಮಾ ಶೂನ್ಯಕ್ಕೆ ಔಟ್ ಆಗುವ ಮೂಲಕ 4 ರನ್‌ಗೆ ತನ್ನ ಮೊದಲನೇ ವಿಕೆಟ್ ಕಳೆದುಕೊಂಡ ಟೀಮ್ ಇಂಡಿಯಾ ಆರಂಭದಲ್ಲಿಯೇ ಆಘಾತಕ್ಕೊಳಗಾಯಿತು. ಆದರೆ ನಂತರ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ದೀಪ್ತಿ ಶರ್ಮಾ ಮತ್ತು ಸ್ಮೃತಿ ಮಂದಾನ 92 ರನ್‌ಗಳ ಜತೆಯಾಟವನ್ನು ಆಡುವುದರ ಮೂಲಕ ಜವಾಬ್ದಾರಿಯುತ ಪ್ರದರ್ಶನವನ್ನು ನೀಡಿದರು.

ಇನ್ನು ದೀಪ್ತಿ ಶರ್ಮಾ 40 ರನ್ ಗಳಿಸಿದ್ದಾಗ ಔಟ್ ಆದರೆ, ಸ್ಮೃತಿ ಮಂದಾನ 52 ರನ್ ಗಳಿಸಿ ಪೆವಿಲಿಯನ್ ಸೇರಿಕೊಂಡರು. ನಂತರ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಮಿಥಾಲಿ ರಾಜ್ ಸದ್ಯ ಕಣದಲ್ಲಿದ್ದು ಅಜೇಯ 8 ರನ್ ಕಲೆಹಾಕಿದ್ದಾರೆ. ಇನ್ನುಳಿದಂತೆ ಹರ್ಮನ್ ಪ್ರೀತ್ ಕೌರ್ 8 ರನ್ ಗಳಿಸಿ ಔಟ್ ಆದರೆ, ರಿಚಾ ಘೋಷ್ 1 ರನ್‌ಗೆ ನಿರ್ಗಮಿಸಿದ್ದಾರೆ. ಈ ಮೂಲಕ ಭಾರತೀಯ ವನಿತೆಯರ ತಂಡ 30.5 ಓವರ್‌ಗಳ ಸಮಯಕ್ಕೆ 5 ವಿಕೆಟ್ ಕಳೆದುಕೊಂಡು 112 ರನ್ ಗಳಿಸಿದ್ದು, ಸಂಕಷ್ಟದ ಪರಿಸ್ಥಿತಿಯಲ್ಲಿದೆ.

ಭಾರತ ಮತ್ತು ಪಾಕಿಸ್ತಾನ ವನಿತೆಯರ ತಂಡದ ಲೈವ್ ಸ್ಕೋರ್‌ ಇಲ್ಲಿದೆ:

{cricket_9909-2022_9909-nonopta-49803}

ಭಾರತ ಪ್ಲೇಯಿಂಗ್ ಇಲೆವೆನ್: ಸ್ಮೃತಿ ಮಂಧಾನ, ಶಫಾಲಿ ವರ್ಮಾ, ದೀಪ್ತಿ ಶರ್ಮಾ, ಹರ್ಮನ್ಪ್ರೀತ್ ಕೌರ್, ಮಿಥಾಲಿ ರಾಜ್ (ನಾಯಕಿ), ರಿಚಾ ಘೋಷ್ (ವಿಕೆಟ್ ಕೀಪರ್‌), ಸ್ನೇಹ ರಾಣಾ, ಜೂಲನ್ ಗೋಸ್ವಾಮಿ, ಮೇಘನಾ ಸಿಂಗ್, ಪೂಜಾ ವಸ್ತ್ರಾಕರ್, ರಾಜೇಶ್ವರಿ ಗಾಯಕ್ವಾಡ್

ಪಾಕಿಸ್ತಾನ ಪ್ಲೇಯಿಂಗ್ ಇಲೆವೆನ್: ಜವೇರಿಯಾ ಖಾನ್, ಸಿದ್ರಾ ಅಮೀನ್, ಬಿಸ್ಮಾ ಮರೂಫ್ (ನಾಯಕಿ), ಒಮೈಮಾ ಸೊಹೈಲ್, ನಿದಾ ದಾರ್, ಅಲಿಯಾ ರಿಯಾಜ್, ಫಾತಿಮಾ ಸನಾ, ಸಿದ್ರಾ ನವಾಜ್ (ವಿಕೆಟ್ ಕೀಪರ್), ಡಯಾನಾ ಬೇಗ್, ನಶ್ರಾ ಸಂಧು, ಅನಮ್ ಅಮೀನ್

Story first published: Sunday, March 6, 2022, 8:58 [IST]
Other articles published on Mar 6, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+