For Quick Alerts
ALLOW NOTIFICATIONS  
For Daily Alerts
 

ಮಹಿಳಾ ವಿಶ್ವಕಪ್: ಪಾಕ್ ನಾಯಕಿ ಮಗುವಿನ ಜೊತೆ ಸಮಯ ಕಳೆದ ಭಾರತೀಯ ವನಿತೆಯರು

Womens WC 2022: India womens team shares heartwarming moment with Bismah Maroofs baby

ಒಂದೆಡೆ ಭಾರತ ಮತ್ತು ಶ್ರಿಲಂಕಾ ತಂಡಗಳ ನಡುವಿನ ಟೆಸ್ಟ್ ಸರಣಿ ಸದ್ದು ಮಾಡುತ್ತಿದ್ದರೆ, ಮತ್ತೊಂದೆಡೆ ಮಹಿಳಾ ವಿಶ್ವಕಪ್ ಟೂರ್ನಿ ಕೂಡ ಸದ್ದು ಮಾಡಲಾರಂಭಿಸಿದೆ. ಇನ್ನು ಈ ಬಾರಿಯ ಮಹಿಳಾ ವಿಶ್ವಕಪ್ ಟೂರ್ನಿಯನ್ನು ನ್ಯೂಜಿಲೆಂಡ್‌ನಲ್ಲಿ ಆಯೋಜಿಸಲಾಗಿದ್ದು, ಮಾರ್ಚ್ ೪ರಂದು ನಡೆದ ನ್ಯೂಜಿಲೆಂಡ್ ಮಹಿಳಾ ತಂಡ ಮತ್ತು ವೆಸ್ಟ್ ಇಂಡೀಸ್ ಮಹಿಳಾ ತಂಡಗಳ ನಡುವಿನ ಉದ್ಘಾಟನಾ ಪಂದ್ಯದ ಮೂಲಕ ಆರಂಭವಾದ ಈ ಬಾರಿಯ ಮಹಿಳಾ ವಿಶ್ವಕಪ್ ಟೂರ್ನಿಯಲ್ಲಿ ಭಾರತ ವನಿತೆಯರ ತಂಡ ತನ್ನ ಮೊದಲನೇ ಪಂದ್ಯದಲ್ಲಿ ತನ್ನ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ಸೆಣಸಾಟ ನಡೆಸಿದೆ. ನ್ಯೂಜಿಲೆಂಡ್‌ನ ಮೌಂಟ್ ಮೌಂಗುನುಯಿದಲ್ಲಿ ಮಾರ್ಚ್ ೬ರಂದು ನಡೆದ ಭಾರತ ವನಿತೆಯರ ಮತ್ತು ಪಾಕಿಸ್ತಾನ ವನಿತೆಯರ ತಂಡಗಳ ನಡುವಿನ ಪಂದ್ಯದಲ್ಲಿ ಟೀಮ್ ಇಂಡಿಯಾ 107 ರನ್‌ಗಳ ಭರ್ಜರಿ ಜಯ ಸಾಧಿಸಿದೆ.

ಈ ಪಂದ್ಯದಲ್ಲಿ ಟಾಸ್ ಗೆದ್ದ ಭಾರತೀಯ ವನಿತೆಯರ ತಂಡ ಬ್ಯಾಟಿಂಗ್ ಆರಿಸಿಕೊಂಡು 50 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 244 ರನ್ ಕಲೆಹಾಕಿತು. ಟೀಮ್ ಇಂಡಿಯಾ ಪರ ಸ್ಮೃತಿ ಮಂಧಾನ 52 ರನ್, ದೀಪ್ತಿ ಶರ್ಮಾ 40 ರನ್, ಸ್ನೇಹ ರಾಣಾ ಅಜೇಯ 53 ರನ್ ಮತ್ತು ಪೂಜಾ ವಸ್ತ್ರಾಕರ್ 67 ರನ್ ಬಾರಿಸಿದರು. ಈ ಮೂಲಕ ಟೀಮ್ ಇಂಡಿಯಾ ಪಾಕಿಸ್ತಾನ ತಂಡಕ್ಕೆ 245 ರನ್‌ಗಳ ಪೈಪೋಟಿಯುತ ಗುರಿಯನ್ನು ನೀಡಿತು. ಈ ಗುರಿಯನ್ನು ಬೆನ್ನಟ್ಟಿದ ಪಾಕಿಸ್ತಾನ 137 ರನ್‌ಗಳಿಗೆ ಆಲ್ ಔಟ್ ಆಗಿದ್ದು, ಭಾರತೀಯ ವನಿತೆಯರ ತಂಡದ ವಿರುದ್ಧ 107 ರನ್‌ಗಳ ಸೋಲನ್ನು ಕಂಡಿದೆ. ಇತ್ತ ಟೂರ್ನಿಯಲ್ಲಿನ ತನ್ನ ಮೊದಲನೇ ಪಂದ್ಯದಲ್ಲಿ ಅದರಲ್ಲಿಯೂ ತನ್ನ ಬದ್ಧ ಎದುರಾಳಿಯಾದ ಪಾಕಿಸ್ತಾನದ ವಿರುದ್ಧ ಜಯ ಸಾಧಿಸಿರುವ ಭಾರತೀಯ ವನಿತೆಯರ ತಂಡ ಶುಭಾರಂಭವನ್ನು ಮಾಡಿದೆ.

ಹೀಗೆ ಇತ್ತಂಡಗಳ ನಡುವಿನ ಪಂದ್ಯ ಮುಗಿದ ನಂತರ ನಡೆದ ಸುಂದರ ಘಟನೆಯೊಂದರ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಭಾರತ ತಂಡದ ಆಟಗಾರ್ತಿಯರು ಪಾಕಿಸ್ತಾನ ತಂಡದ ನಾಯಕಿ ಬಿಸ್ಮಾ ಮರೂಫ್ ಅವರ ಪುಟ್ಟ ಕಂದಮ್ಮನ ಜೊತೆ ಸಮಯ ಕಳೆದಿದ್ದಾರೆ. ಹೌದು, ಪಾಕ್ ನಾಯಕಿ ಬಿಸ್ಮಾ ಮರೂಫ್ ಅವರು ಇತ್ತೀಚಿಗಷ್ಟೆ ಮಗುವಿಗೆ ಜನ್ಮ ನೀಡಿದ್ದು, ಆ ೬ ತಿಂಗಳ ಮಗುವಿನೊಂದಿಗೆ ಸದ್ಯ ನಡೆಯುತ್ತಿರುವ ವಿಶ್ವಕಪ್ ಟೂರ್ನಿಯಲ್ಲಿಯೂ ಭಾಗವಹಿಸಿ ಮಾದರಿಯಾಗಿದ್ದಾರೆ. ಇನ್ನು ಪಾಕ್‌ನ ನಾಯಕಿ ಬಿಸ್ಮಾ ಮರೂಫ್ ಅವರ ಪುಟ್ಟ ಮಗುವಿನ ಜೊತೆ ಭಾರತೀಯ ಆಟಗಾರ್ತಿಯರು ಸಮಯ ಕಳೆದು ಸೆಲ್ಫಿ ಕ್ಲಿಕ್ಕಿಸಿಕೊಂಡಿರುವ ಸುಂದರ ವಿಡಿಯೋವನ್ನು ಐಸಿಸಿ ಕೂಡ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದೆ. ಇನ್ನು ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ಸಿಕ್ಕಾಪಟ್ಟ ವೈರಲ್ ಆಗಿದ್ದು ನೆಟ್ಟಿಗರಿಂದ ಉತ್ತಮ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ.

ಭಾರತ ಪ್ಲೇಯಿಂಗ್ ಇಲೆವೆನ್: ಸ್ಮೃತಿ ಮಂಧಾನ, ಶಫಾಲಿ ವರ್ಮಾ, ದೀಪ್ತಿ ಶರ್ಮಾ, ಹರ್ಮನ್ಪ್ರೀತ್ ಕೌರ್, ಮಿಥಾಲಿ ರಾಜ್ (ನಾಯಕಿ), ರಿಚಾ ಘೋಷ್ (ವಿಕೆಟ್ ಕೀಪರ್‌), ಸ್ನೇಹ ರಾಣಾ, ಜೂಲನ್ ಗೋಸ್ವಾಮಿ, ಮೇಘನಾ ಸಿಂಗ್, ಪೂಜಾ ವಸ್ತ್ರಾಕರ್, ರಾಜೇಶ್ವರಿ ಗಾಯಕ್ವಾಡ್

RCB ಈ ಬಾರಿ ಆಡಲಿರುವ ಪಂದ್ಯಗಳು ಹೀಗಿವೆ | Oneindia Kannada

ಪಾಕಿಸ್ತಾನ ಪ್ಲೇಯಿಂಗ್ ಇಲೆವೆನ್: ಜವೇರಿಯಾ ಖಾನ್, ಸಿದ್ರಾ ಅಮೀನ್, ಬಿಸ್ಮಾ ಮರೂಫ್ (ನಾಯಕಿ), ಒಮೈಮಾ ಸೊಹೈಲ್, ನಿದಾ ದಾರ್, ಅಲಿಯಾ ರಿಯಾಜ್, ಫಾತಿಮಾ ಸನಾ, ಸಿದ್ರಾ ನವಾಜ್ (ವಿಕೆಟ್ ಕೀಪರ್), ಡಯಾನಾ ಬೇಗ್, ನಶ್ರಾ ಸಂಧು, ಅನಮ್ ಅಮೀನ್

Story first published: Monday, March 7, 2022, 12:20 [IST]
Other articles published on Mar 7, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+