For Quick Alerts
ALLOW NOTIFICATIONS  
For Daily Alerts
 

ಮಹಿಳಾ ವಿಶ್ವಕಪ್: ಸತತ ಎರಡನೇ ಸೋಲು ಕಂಡ ಇಂಗ್ಲೆಂಡ್ ವನಿತೆಯರು, ವಿಂಡೀಸ್ ಗೆಲುವಿನ ನಾಗಾಲೋಟ

Womens WC 2022: West Indies women beat England Women by 7 runs

ಒಂದೆಡೆ ಭಾರತ ಮತ್ತು ಶ್ರಿಲಂಕಾ ತಂಡಗಳ ನಡುವಿನ ಟೆಸ್ಟ್ ಸರಣಿ ಸದ್ದು ಮಾಡುತ್ತಿದ್ದರೆ, ಮತ್ತೊಂದೆಡೆ ಮಹಿಳಾ ವಿಶ್ವಕಪ್ ಟೂರ್ನಿ ಕೂಡ ಸದ್ದು ಮಾಡಲಾರಂಭಿಸಿದೆ. ಇನ್ನು ಈ ಬಾರಿಯ ಮಹಿಳಾ ವಿಶ್ವಕಪ್ ಟೂರ್ನಿಯನ್ನು ನ್ಯೂಜಿಲೆಂಡ್‌ನಲ್ಲಿ ಆಯೋಜಿಸಲಾಗಿದ್ದು, ಮಾರ್ಚ್ ೪ರಂದು ನಡೆದ ನ್ಯೂಜಿಲೆಂಡ್ ಮಹಿಳಾ ತಂಡ ಮತ್ತು ವೆಸ್ಟ್ ಇಂಡೀಸ್ ಮಹಿಳಾ ತಂಡಗಳ ನಡುವಿನ ಉದ್ಘಾಟನಾ ಪಂದ್ಯದ ಮೂಲಕ ಆರಂಭವಾದ ಈ ಬಾರಿಯ ಮಹಿಳಾ ವಿಶ್ವಕಪ್ ಟೂರ್ನಿಯಲ್ಲಿ ಮಾರ್ಚ್ 9ರ ವೇಳೆಗೆ ಒಟ್ಟು 7 ಪಂದ್ಯಗಳು ಮುಗಿದಿದ್ದು ಅತಿಹೆಚ್ಚು ಗೆಲುವು ಸಾಧಿಸಿರುವ ಆಸ್ಟ್ರೇಲಿಯಾ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದರೆ, ಆಸ್ಟ್ರೇಲಿಯಾ ತಂಡದಷ್ಟೇ ಗೆಲುವನ್ನು ಸಾಧಿಸಿರುವ ವೆಸ್ಟ್ ಇಂಡೀಸ್ ವನಿತೆಯರ ತಂಡ ದ್ವಿತೀಯ ಸ್ಥಾನದಲ್ಲಿದೆ ಮತ್ತು ಟೂರ್ನಿಯಲ್ಲಿ ಇಲ್ಲಿಯವರೆಗೂ ಕೇವಲ ಒಂದು ಪಂದ್ಯವನ್ನಾಡಿ ಆ ಪಂದ್ಯದಲ್ಲಿ ತನ್ನ ಬದ್ಧ ಎದುರಾಳಿ ಪಾಕಿಸ್ತಾನದ ವಿರುದ್ಧ ಜಯ ಸಾಧಿಸಿರುವ ಭಾರತೀಯ ವನಿತೆಯರ ತಂಡ ಮೂರನೇ ಸ್ಥಾನದಲ್ಲಿದೆ.

ಹೀಗೆ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಅತಿಥೇಯ ನ್ಯೂಜಿಲೆಂಡ್ ತಂಡಕ್ಕೆ ಅವರದ್ದೇ ನೆಲದಲ್ಲಿ ೩ ರನ್‌ಗಳ ಸೋಲನ್ನು ಉಣಿಸಿದ್ದ ವೆಸ್ಟ್ ಇಂಡೀಸ್ ತಂಡ ತನ್ನ ಎರಡನೇ ಪಂದ್ಯದಲ್ಲಿ ಇಂಗ್ಲೆಂಡ್ ವನಿತೆಯರ ತಂಡದ ವಿರುದ್ಧ ಗೆಲುವನ್ನು ಸಾಧಿಸಿದೆ. ಹೌದು, ವೆಸ್ಟ್ ಇಂಡೀಸ್ ವನಿತೆಯರ ತಂಡ ಹಾಗೂ ಇಂಗ್ಲೆಂಡ್ ವನಿತೆಯರ ತಂಡಗಳ ನಡುವಿನ ಪಂದ್ಯ ಇಂದು ( ಮಾರ್ಚ್ 9 ) ನಡೆದಿದ್ದು ಟಾಸ್ ಗೆದ್ದ ವೆಸ್ಟ್ ಇಂಡೀಸ್ ವನಿತೆಯರ ತಂಡ ಮೊದಲು ಬ್ಯಾಟಿಂಗ್ ಆಯ್ದುಕೊಂಡು ೫೦ ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 225 ರನ್ ಕಲೆಹಾಕಿತು. ವೆಸ್ಟ್ ಇಂಡೀಸ್ ಪರ ಆರಂಭಿಕ ಆಟಗಾರ್ತಿಯರಾದ ಡಿಯಾಂಡ್ರ ಡಾಟಿನ್ 31 ರನ್ ಮತ್ತು ಹೆಯ್ಲಿ ಮ್ಯಾಥ್ಯೂಸ್ 45 ರನ್ ಗಳಿಸಿ ಜವಾಬ್ದಾರಿಯುತ ಪ್ರದರ್ಶನ ನೀಡಿದರು. ಇನ್ನುಳಿದಂತೆ ವಿಕೆಟ್ ಕೀಪರ್ ಶೆಮೈನ್ ಕ್ಯಾಂಪ್‌ಬೆಲ್ 66 ರನ್ ಗಳಿಸಿದರೆ, ಚೆಡೆಯನ್ ನೇಷನ್ ಅಜೇಯ 49 ರನ್ ಗಳಿಸಿ ಆರಂಭಿಕ ಆಟಗಾರ್ತಿಯರು ಔಟ್ ಆದ ನಂತರ ಮಂಕಾದ ತಂಡಕ್ಕೆ ಆಸರೆಯಾದರು. ಈ ಮೂಲಕ ವೆಸ್ಟ್ ಇಂಡೀಸ್ ೫೦ ಓವರ್‌ಗಳಲ್ಲಿ 225 ರನ್ ಗಳಿಸಿ ಇಂಗ್ಲೆಂಡ್ ವನಿತೆಯರ ತಂಡಕ್ಕೆ 226 ರನ್‌ಗಳ ಗುರಿಯನ್ನು ನೀಡಿತು. ಇನ್ನು ವೆಸ್ಟ್ ಇಂಡೀಸ್ ನೀಡಿದ ಈ ಗುರಿಯನ್ನು ಬೆನ್ನತ್ತಿದ ಹಾಲಿ ಚಾಂಪಿಯನ್ಸ್ ಇಂಗ್ಲೆಂಡ್ ವನಿತೆಯರ ತಂಡ 47.4 ಓವರ್‌ಗಳಲ್ಲಿ 218 ರನ್‌ಗಳಿಗೆ ಆಲ್ ಔಟ್ ಆಯಿತು. ಈ ಮೂಲಕ ವೆಸ್ಟ್ ಇಂಡೀಸ್ ವನಿತೆಯರ ತಂಡ 7 ರನ್‌ಗಳ ಜಯ ಸಾಧಿಸಿದೆ.

ಇಂಗ್ಲೆಂಡ್ ವನಿತೆಯರ ತಂಡದ ಪರ ಟಾಮಿ ಬ್ಯೂಮೌಂಟ್ 46 ರನ್, ಡೇನಿಯಲ್ ವ್ಯಾಟ್ 33 ರನ್, ಸೋಫಿಯಾ ಡಂಕ್ಲಿ 38 ರನ್, ಸೋಫೀ ಎಕ್ಸೆಲ್‌ಟನ್ ಅಜೇಯ 33 ರನ್ ಮತ್ತು ಕೇಟ್ ಕ್ರಾಸ್ 27 ರನ್ ಗಳಿಸಿದರು. ಇವರನ್ನು ಬಿಟ್ಟರೆ ತಂಡದ ಉಳಿದ ಯಾವುದೇ ಆಟಗಾರ್ತಿಯರೂ ಕೂಡ ಇಪ್ಪತ್ತು ರನ್ ದಾಟುವಲ್ಲಿ ಯಶಸ್ವಿಯಾಗಲಿಲ್ಲ. ವೆಸ್ಟ್ ಇಂಡೀಸ್ ವನಿತೆಯರ ತಂಡದ ಪರ ಶಮಿಲಿಯಾ ಕೊನೆಲ್ 3 ವಿಕೆಟ್, ಹೆಯ್ಲಿ ಮ್ಯಾಥ್ಯೂಸ್ ಮತ್ತು ಅನಿಸಾ ಮೊಹಮ್ಮದ್ 2 ವಿಕೆಟ್ ಮತ್ತು ಅಲಿಯಾ ಅಲ್ಲೆಯ್ನ್ ಮತ್ತು ಸ್ಟಫನೀ ಟೇಲರ್ ತಲಾ ಒಂದೊಂದು ವಿಕೆಟ್ ಪಡೆದರು. ಈ ಗೆಲುವಿನ ಮೂಲಕ ವೆಸ್ಟ್ ಇಂಡೀಸ್ ವನಿತೆಯರ ತಂಡ ಈ ಬಾರಿಯ ವಿಶ್ವಕಪ್ ಟೂರ್ನಿಯಲ್ಲಿ ತನ್ನ ಎರಡನೇ ಗೆಲುವು ದಾಖಲಿಸಿದರೆ, ಅತ್ತ ತನ್ನ ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ ವನಿತೆಯರ ತಂಡದ ವಿರುದ್ಧ ಸೋತಿದ್ದ ಹಾಲಿ ಚಾಂಪಿಯನ್ಸ್ ಇಂಗ್ಲೆಂಡ್ ವನಿತೆಯರ ತಂಡ ಇದೀಗ ವೆಸ್ಟ್ ಇಂಡೀಸ್ ವಿರುದ್ಧವೂ ಸೋಲುವುದರ ಮೂಲಕ ಟೂರ್ನಿಯಲ್ಲಿ ಎರಡನೇ ಸೋಲನ್ನು ಕಂಡಿದೆ.

ವೆಸ್ಟ್ ಇಂಡೀಸ್ ಪ್ಲೇಯಿಂಗ್ ಇಲೆವೆನ್: ಡಿಯಾಂಡ್ರಾ ಡಾಟಿನ್, ಹೇಲಿ ಮ್ಯಾಥ್ಯೂಸ್, ಕಿಸಿಯಾ ನೈಟ್, ಸ್ಟಾಫನಿ ಟೇಲರ್ (ನಾಯಕಿ), ಶೆಮೈನ್ ಕ್ಯಾಂಪ್‌ಬೆಲ್ಲೆ (ವಿಕೆಟ್ ಕೀಪರ್), ಚೆಡಿಯನ್ ನೇಷನ್, ಚಿನೆಲ್ಲೆ ಹೆನ್ರಿ, ಆಲಿಯಾ ಅಲೀನ್, ಶಾಮಿಲಿಯಾ ಕೊನ್ನೆಲ್, ಅನಿಸಾ ಮೊಹಮ್ಮದ್, ಷಕೇರಾ ಸೆಲ್ಮನ್

ಇಂಗ್ಲೆಂಡ್ ಪ್ಲೇಯಿಂಗ್ ಇಲೆವೆನ್: ಲಾರೆನ್ ವಿನ್‌ಫೀಲ್ಡ್ ಹಿಲ್, ಟಮ್ಮಿ ಬ್ಯೂಮಾಂಟ್, ಹೀದರ್ ನೈಟ್ (ಸಿ), ನಟಾಲಿ ಸ್ಕಿವರ್, ಆಮಿ ಎಲ್ಲೆನ್ ಜೋನ್ಸ್ (ವಾಕ್), ಡೇನಿಯಲ್ ವ್ಯಾಟ್, ಸೋಫಿಯಾ ಡಂಕ್ಲೆ, ಕ್ಯಾಥರೀನ್ ಬ್ರಂಟ್, ಸೋಫಿ ಎಕ್ಲೆಸ್ಟೋನ್, ಕೇಟ್ ಕ್ರಾಸ್, ಅನ್ಯಾ ಶ್ರಬ್‌ಸೋಲ್

Story first published: Wednesday, March 9, 2022, 16:51 [IST]
Other articles published on Mar 9, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+