ಮಹಿಳಾ ವಿಶ್ವಕಪ್ 2022: ಭಾರತ ವನಿತೆಯರು ಸೆಮೀಸ್ ಪ್ರವೇಶಿಸಲು ಇರುವ ಮಾರ್ಗಗಳು

ನ್ಯೂಜಿಲೆಂಡ್ ನೆಲದಲ್ಲಿ ನಡೆಯುತ್ತಿರುವ ಐಸಿಸಿ ಮಹಿಳಾ ಏಕದಿನ ವಿಶ್ವಕಪ್ ಟೂರ್ನಿ 2022ರ ಲೀಗ್ ಹಂತದ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ತಲುಪಿದೆ. ಇನ್ನು ಮಾರ್ಚ್ 24ರ ಗುರುವಾರದವರೆಗೂ ಟೂರ್ನಿಯಲ್ಲಿ ಒಟ್ಟು 24 ಪಂದ್ಯಗಳು ನಡೆದಿದ್ದು, ಇಲ್ಲಿಯವರೆಗೂ ನಡೆದಿರುವ ಪಂದ್ಯಗಳ ಪೈಕಿ ಹೆಚ್ಚು ಗೆಲುವನ್ನು ದಾಖಲಿಸಿರುವ ಆಸ್ಟ್ರೇಲಿಯಾ ವನಿತೆಯರ ತಂಡ ಹಾಗೂ ದಕ್ಷಿಣ ಆಫ್ರಿಕಾ ವನಿತೆಯರ ತಂಡಗಳು ಸೆಮಿ ಘೈನಲ್ ಸುತ್ತಿಗೆ ಅರ್ಹತೆ ಪಡೆದುಕೊಂಡಿವೆ. ಇನ್ನು ಸೆಮಿ ಫೈನಲ್ ಸುತ್ತಿಗೆ ಅರ್ಹತೆ ಪಡೆದುಕೊಳ್ಳಲು ಇನ್ನೂ ಎರಡು ತಂಡಗಳಿಗೆ ಅವಕಾಶಗಳಿದ್ದು, ಇಂಗ್ಲೆಂಡ್ ವನಿತೆಯರ ತಂಡ, ಭಾರತ ವನಿತೆಯರ ತಂಡ ಹಾಗೂ ವೆಸ್ಟ್ ಇಂಡೀಸ್ ವನಿತೆಯರ ತಂಡಗಳ ನಡುವೆ ಆ ಸ್ಥಾನಕ್ಕಾಗಿ ಪೈಪೋಟಿ ಏರ್ಪಟ್ಟಿದೆ.
ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 7 ಪಂದ್ಯಗಳನ್ನಾಡಿರುವ ವೆಸ್ಟ್ ಇಂಡೀಸ್ ವನಿತೆಯರ ತಂಡ ಮೂರು ಪಂದ್ಯಗಳಲ್ಲಿ ಜಯ ಸಾಧಿಸಿದ್ದು, ಮೂರು ಪಂದ್ಯಗಳಲ್ಲಿ ಸೋತಿದೆ ಹಾಗೂ ಉಳಿದೊಂದು ಪಂದ್ಯವನ್ನು ಡ್ರಾ ಮಾಡಿಕೊಂಡು ಏಳು ಅಂಕಗಳನ್ನು ಕಲೆಹಾಕಿದೆ. ಇನ್ನು ಟೂರ್ನಿಯಲ್ಲಿ ಇದುವರೆಗೂ ಒಟ್ಟು ಆರು ಪಂದ್ಯಗಳನ್ನಾಡಿರುವ ಇಂಗ್ಲೆಂಡ್ ವನಿತೆಯರ ತಂಡ ಮೂರು ಪಂದ್ಯಗಳಲ್ಲಿ ಗೆದ್ದು, ಮೂರು ಪಂದ್ಯಗಳಲ್ಲಿ ಸೋಲುವುದರ ಮೂಲಕ ಆರು ಅಂಕಗಳನ್ನು ಪಡೆದುಕೊಂಡಿದೆ. ಹೀಗೆ ಗೆಲುವು ಸಾಧಿಸಿರುವ ವೆಸ್ಟ್ ಇಂಡೀಸ್ ವನಿತೆಯರ ತಂಡ ಸದ್ಯ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದರೆ, ಇಂಗ್ಲೆಂಡ್ ವನಿತೆಯರ ತಂಡ ನಾಲ್ಕನೇ ಸ್ಥಾನದಲ್ಲಿದೆ. ಇನ್ನು ಟೂರ್ನಿಯಲ್ಲಿ ಸೆಮಿ ಫೈನಲ್ ಪ್ರವೇಶಿಸುವ ಅವಕಾಶ ಹೊಂದಿರುವ ಮತ್ತೊಂದು ತಂಡವಾದ ಭಾರತ ವನಿತೆಯರ ತಂಡ ಇಲ್ಲಿಯವರೆಗೂ ಒಟ್ಟು ಆರು ಪಂದ್ಯಗಳನ್ನಾಡಿ ಮೂರು ಪಂದ್ಯಗಳಲ್ಲಿ ಜಯ ಸಾಧಿಸಿ, ಮೂರು ಪಂದ್ಯಗಳಲ್ಲಿ ಸೋತು ಆರು ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ.
ಹೀಗೆ ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿರುವ ಭಾರತ ವನಿತೆಯರ ತಂಡ ಮಾರ್ಚ್ 28ರಂದು ದಕ್ಷಿಣ ಆಫ್ರಿಕಾ ವನಿತೆಯರ ತಂಡದ ವಿರುದ್ಧದ ಪಂದ್ಯದಲ್ಲಿ ಸೆಣಸಾಟ ನಡೆಸಲಿದ್ದು, ಸೆಮಿ ಫೈನಲ್ ಸುತ್ತಿಗೆ ಅರ್ಹತೆ ಪಡೆದುಕೊಳ್ಳಬೇಕೆಂದರೆ ಈ ಪಂದ್ಯದಲ್ಲಿ ಭಾರತ ವನಿತೆಯರ ತಂಡ ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ. ಒಂದುವೇಳೆ ಈ ಪಂದ್ಯದಲ್ಲಿ ಭಾರತ ವನಿತೆಯರ ತಂಡ ಸೋತಿದ್ದೇ ಆದರೆ ಟೂರ್ನಿಯಿಂದ ಹೊರಬೀಳಲಿದೆ. ಇನ್ನು ಟೂರ್ನಿಯ ಇತ್ತೀಚಿನ ಕೆಲ ಪಂದ್ಯಗಳಿಗೆ ಮಳೆಯ ಅಡ್ಡಿಯಾಗಿದ್ದು, ಅದೇ ರೀತಿ ಭಾರತ ವನಿತೆಯರ ತಂಡ ಹಾಗೂ ದಕ್ಷಿಣ ಆಫ್ರಿಕಾ ವನಿತೆಯರ ತಂಡಗಳ ನಡುವೆ ನಡೆಯಲಿರುವ ಪಂದ್ಯ ಕೂಡ ಮಳೆಗೆ ಆಹುತಿಯಾದರೂ ಒಂದು ಅಂಕವನ್ನು ಪಡೆದುಕೊಳ್ಳಲಿರುವ ಭಾರತ ವನಿತೆಯರ ತಂಡ ಸೆಮಿಫೈನಲ್ ಪ್ರವೇಶಿಸುವಲ್ಲಿ ಯಶಸ್ವಿಯಾಗಲಿದೆ. ಇನ್ನು ದಕ್ಷಿಣ ಆಫ್ರಿಕಾ ವನಿತೆಯರ ವಿರುದ್ಧದ ಪಂದ್ಯದಲ್ಲಿ ಭಾರತ ವನಿತೆಯರ ತಂಡ ಗೆದ್ದರೆ ಸೆಮಿ ಫೈನಲ್ ಸುತ್ತಿನಲ್ಲಿ ಮತ್ತೆ ದಕ್ಷಿಣ ಆಫ್ರಿಕಾ ವನಿತೆಯರನ್ನೇ ಎದುರಿಸಲಿದೆ. ಹಾಗೂ ಈ ಪಂದ್ಯ ಮಳೆಗೆ ಆಹುತಿಯಾಗಿ ಡ್ರಾ ಆದರೆ ಭಾರತ ವನಿತೆಯರು ಸೆಮಿ ಫೈನಲ್ ಸುತ್ತಿನಲ್ಲಿ ಬಲಿಷ್ಠ ಆಸ್ಟ್ರೇಲಿಯಾ ವನಿತೆಯರ ತಂಡವನ್ನು ಎದುರಿಸಲಿದೆ.
ಮಿಥಾಲಿ ರಾಜ್ (ನಾಯಕಿ), ಹರ್ಮನ್‌ಪ್ರೀತ್ ಕೌರ್ (ಉಪ ನಾಯಕಿ), ಸ್ಮೃತಿ ಮಂಧಾನ, ಶಫಾಲಿ ವರ್ಮಾ, ಯಾಸ್ತಿಕಾ ಭಾಟಿಯಾ, ದೀಪ್ತಿ ಶರ್ಮಾ, ರಿಚಾ ಘೋಷ್ (wk), ಸ್ನೇಹ ರಾಣಾ, ಜೂಲನ್ ಗೋಸ್ವಾಮಿ, ಪೂಜಾ ವಸ್ತ್ರಾಕರ್, ಮೇಘನಾ ಸಿಂಗ್, ರೇಣುಕಾ ಸಿಂಗ್ ಠಾಕೂರ್, ತನಿಯಾ ಭಾಟಿಯಾ (ವಿಕೆಟ್ ಕೀಪರ್), ರಾಜೇಶ್ವರಿ ಗಾಯಕ್ವಾಡ್, ಪೂನಂ ಯಾದವ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications