ಮಹಿಳಾ ವಿಶ್ವಕಪ್: ಆಸ್ಟ್ರೇಲಿಯಾ vs ಭಾರತ ಮುಖಾಮುಖಿಯಲ್ಲಿ ಯಾರು ಬಲಿಷ್ಠರು?

ವನಿತೆಯರ ಏಕದಿನ ವಿಶ್ವಕಪ್ ಟೂರ್ನಿ ನ್ಯೂಜಿಲೆಂಡ್ ನೆಲದಲ್ಲಿ ನಡೆಯುತ್ತಿದ್ದು, ಟೂರ್ನಿಯ 18ನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ವನಿತೆಯರ ತಂಡ ಮತ್ತು ಭಾರತ ವನಿತೆಯರ ತಂಡ ಸೆಣಸಾಟ ನಡೆಸಲಿವೆ. ನ್ಯೂಜಿಲೆಂಡ್‌ನ ಆಕ್ಲೆಂಡ್ ಈಡನ್ ಪಾರ್ಕ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ವನಿತೆಯರ ತಂಡಗಳ ನಡುವಿನ ಪಂದ್ಯ ಮಾರ್ಚ್ 19ರ ಶನಿವಾರದಂದು ಭಾರತೀಯ ಕಾಲಮಾನದ ಪ್ರಕಾರ ಬೆಳಗ್ಗೆ 6.30ಕ್ಕೆ ಆರಂಭವಾಗಲಿದೆ.
ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 4 ಪಂದ್ಯಗಳನ್ನಾಡಿರುವ ಆಸ್ಟ್ರೇಲಿಯಾ ವನಿತೆಯರ ತಂಡ ಎಲ್ಲಾ ಪಂದ್ಯಗಳಲ್ಲಿಯೂ ಜಯ ಸಾಧಿಸುವುದರ ಮೂಲಕ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದರೆ, ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 4 ಪಂದ್ಯಗಳನ್ನಾಡಿ ಎರಡರಲ್ಲಿ ಗೆದ್ದು ಉಳಿದೆರಡು ಪಂದ್ಯಗಳಲ್ಲಿ ಸೋತಿರುವ ಭಾರತೀಯ ವನಿತೆಯರ ತಂಡ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ.
ಸದ್ಯ ಟೂರ್ನಿಯಲ್ಲಿ ಇಲ್ಲಿಯವರೆಗೂ ನಡೆದಿರುವ ಪಂದ್ಯಗಳಲ್ಲಿ ಗೆಲುವು ಮತ್ತು ಸೋಲನ್ನು ಸಮವಾಗಿ ಕಂಡಿರುವ ಭಾರತೀಯ ವನಿತೆಯರ ತಂಡ ಆಸ್ಟ್ರೇಲಿಯಾ ವನಿತೆಯರ ತಂಡದ ವಿರುದ್ಧದ ಈ ಪಂದ್ಯದಲ್ಲಿ ಜಯ ಗಳಿಸಿದರೆ ಮಾತ್ರ ಸೆಮಿಫೈನಲ್ ಪ್ರವೇಶಿಸುವ ಆಸೆಯನ್ನು ಜೀವಂತವಾಗಿರಿಸಿಕೊಳ್ಳಲಿದೆ. ಒಂದುವೇಳೆ ಈ ಪಂದ್ಯದಲ್ಲಿ ಭಾರತೀಯ ವನಿತೆಯರ ತಂಡ ಸೋತರೆ ಭಾರತೀಯ ವನಿತೆಯರು ಸೆಮಿಫೈನಲ್ ತಲುಪುವುದು ಅನುಮಾನವೇ ಸರಿ. ಹೀಗಾಗಿ ಈ ಪಂದ್ಯ ಭಾರತೀಯ ವನಿತೆಯರ ತಂಡಕ್ಕೆ ಮಾಡು ಇಲ್ಲವೇ ಮಡಿ ಪಂದ್ಯವಾಗಿ ಪರಿಣಮಿಸಿದೆ.
ಇತ್ತಂಡಗಳ ಮುಖಾಮುಖಿ:
ಇನ್ನು ಟೂರ್ನಿಯಲ್ಲಿ ಇಲ್ಲಿಯವರೆಗಿನ ಎಲ್ಲಾ ಪಂದ್ಯಗಳಲ್ಲೂ ಗೆದ್ದು ಬೀಗಿರುವ ಆಸ್ಟ್ರೇಲಿಯಾ ವನಿತೆಯರ ತಂಡ ಭಾರತೀಯ ವನಿತೆಯರ ತಂಡದ ವಿರುದ್ಧ ನಡೆದಿರುವ ಮುಖಾಮುಖಿಯಲ್ಲಿ ಕೂಡ ದೊಡ್ಡ ಮಟ್ಟದಲ್ಲಿ ಗೆಲುವು ಸಾಧಿಸುವುದರ ಮೂಲಕ ಮೇಲುಗೈ ಸಾಧಿಸಿದೆ. ಹೌದು, ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಭಾರತ ವನಿತೆಯರ ತಂಡ ಮತ್ತು ಆಸ್ಟ್ರೇಲಿಯಾ ವನಿತೆಯರ ತಂಡಗಳ ನಡುವೆ ಇದುವರೆಗೂ ಒಟ್ಟು 49 ಮುಖಾಮುಖಿ ಪಂದ್ಯಗಳು ನಡೆದಿದ್ದು, ಆಸ್ಟ್ರೇಲಿಯಾ ವನಿತೆಯರ ತಂಡ 39 ಪಂದ್ಯಗಳಲ್ಲಿ ಜಯ ಸಾಧಿಸಿದ್ದರೆ, ಭಾರತ ವನಿತೆಯರ ತಂಡ ಕೇವಲ 10 ಪಂದ್ಯಗಳಲ್ಲಿ ಮಾತ್ರ ಗೆದ್ದಿದೆ.
ವಿಶ್ವಕಪ್ ಮುಖಾಮುಖಿ:
ಇನ್ನು ಆಸ್ಟ್ರೇಲಿಯಾ ವನಿತೆಯರ ತಂಡ ಮತ್ತು ಭಾರತ ವನಿತೆಯರ ತಂಡಗಳ ನಡುವೆ ಒಟ್ಟು 12 ವಿಶ್ವಕಪ್ ಪಂದ್ಯಗಳು ನಡೆದಿದ್ದು, ಆಸ್ಟ್ರೇಲಿಯಾ ವನಿತೆಯರ ತಂಡ 9 ಪಂದ್ಯಗಳಲ್ಲಿ ಜಯ ಸಾಧಿಸಿದ್ದರೆ, ಭಾರತ ವನಿತೆಯರ ತಂಡ ಕೇವಲ 3 ಪಂದ್ಯಗಳಲ್ಲಿ ಗೆದ್ದಿದೆ. ಈ ಮೂಲಕ ಆಸ್ಟ್ರೇಲಿಯಾ ವನಿತೆಯರ ತಂಡ ಇತ್ತಂಡಗಳ ನಡುವಿನ ವಿಶ್ವಕಪ್ ಮುಖಾಮುಖಿಯಲ್ಲಿ ಸ್ಪಷ್ಟ ಮೇಲುಗೈ ಸಾಧಿಸಿದೆ.
ಭಾರತ ವನಿತೆಯರ ಸಂಭಾವ್ಯ ಆಡುವ ಬಳಗ: ಸ್ಮೃತಿ ಮಂಧಾನ, ಯಾಸ್ತಿಕಾ ಭಾಟಿಯಾ, ಮಿಥಾಲಿ ರಾಜ್ (ನಾಯಕಿ), ದೀಪ್ತಿ ಶರ್ಮಾ, ಹರ್ಮನ್‌ಪ್ರೀತ್ ಕೌರ್, ರಿಚಾ ಘೋಷ್ (ವಿಕೆಟ್ ಕೀಪರ್), ಸ್ನೇಹ ರಾಣಾ, ಪೂಜಾ ವಸ್ತ್ರಾಕರ್, ಜೂಲನ್ ಗೋಸ್ವಾಮಿ, ಮೇಘನಾ ಸಿಂಗ್, ರಾಜೇಶ್ವರಿ ಗಾಯಕ್ವಾಡ್
ಆಸ್ಟ್ರೇಲಿಯಾ ವನಿತೆಯರ ಸಂಭಾವ್ಯ ಆಡುವ ಬಳಗ: ರಾಚೆಲ್ ಹೇನ್ಸ್, ಅಲಿಸ್ಸಾ ಹೀಲಿ (ವಿಕೆಟ್ ಕೀಪರ್), ಮೆಗ್ ಲ್ಯಾನಿಂಗ್ (ನಾಯಲಿ), ಎಲ್ಲಿಸ್ ಪೆರ್ರಿ, ಬೆತ್ ಮೂನಿ, ತಹ್ಲಿಯಾ ಮೆಕ್‌ಗ್ರಾತ್, ಆಶ್ಲೀ ಗಾರ್ಡ್ನರ್, ಅನ್ನಾಬೆಲ್ ಸದರ್ಲ್ಯಾಂಡ್, ಜೆಸ್ ಜೊನಾಸೆನ್, ಅಲಾನಾ ಕಿಂಗ್, ಮೇಗನ್ ಶುಟ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications