Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಮಹಿಳಾ ವಿಶ್ವಕಪ್ ಫೈನಲ್: ಭಾರತದ ಸಂಭಾವ್ಯ ಆಡುವ XIರ ಬಳಗ ಹೀಗಿದೆ!

Womens World T20 Final: Indias Predicted Playing XI

ಮೆಲ್ಬೋರ್ನ್ ಕ್ರಿಕೆಟ್ ಗ್ರೌಂಡ್ ನಾಳೆ ಮಹಿಳಾ ವಿಶ್ವಕಪ್‌ನ ಫೈನಲ್ ಪಂದ್ಯಕ್ಕೆ ಸಾಕ್ಷಿಯಾಗಲಿದೆ. ಫೈನಲ್‌ ಪಂದ್ಯದಲ್ಲಿ ಆತಿಥೇಯ ಆಸ್ಟ್ರೇಲಿಯಾ ಮತ್ತು ಭಾರತ ಮುಖಾಮುಖಿಯಾಗುತ್ತಿದೆ. ತವರು ಮೈದಾನದ ಲಾಭವನ್ನು ಪಡೆಯುವ ನಿರೀಕ್ಷೆಯಲ್ಲಿ ಆಸ್ಟ್ರೇಲಿಯಾ ತಂಡವಿದ್ದರೆ ಭಾರತ ಮೊದಲ ಗ್ರೂಪ್ ಹಂತದಲ್ಲಿ ಗೆದ್ದ ವಿಶ್ವಾಸದಲ್ಲಿ ಫೈನಲ್ ಪಂದ್ಯಕ್ಕೂ ಅಣಿಯಾಗುತ್ತಿದೆ.

ಇದೇ ಮೊದಲ ಬಾರಿಗೆ ಮಹಿಳಾ ಟಿ20 ವಿಶ್ವಕಪ್ ಫೈನಲ್ ಪ್ರವೇಶಿಸಿರುವ ಭಾರತ ತಂಡ ಗೆಲ್ಲುವ ವಿಶ್ವಾಸದಲ್ಲಿದೆ. ಹೀಗಾಗಿ ಭಾರತದ ವನಿತೆಯರ ತಂಡದಲ್ಲಿ ಯಾರೆಲ್ಲಾ ಕಣಕ್ಕಿಳಿಯಲಿದ್ದಾರೆ ಎಂಬುದು ಬಹಳ ಮುಖ್ಯವಾಗುತ್ತದೆ.

ನಾಳಿನ ಫೈನಲ್ ಪಂದ್ಯದಲ್ಲಿ ಭಾರತದ ಪರವಾಗಿ ಯಾರೆಲ್ಲಾ ಕಣಕ್ಕಿಳಿಯಬಹುದು ಎಂಬುದು ಎಲ್ಲರ ಕುತೂಹಲ. ಹೀಗಾಗಿ ಮೈಖೇಲ್ ಕನ್ನಡ ಫೈನಲ್ ಪಂದ್ಯದ ಸಂಭಾವ್ಯ ತಂಡವನ್ನು ನಿಮ್ಮ ಮುಂದಿಡುತ್ತಿದೆ.

ಆರಂಭಿಕ ಆಟಗಾರರು

ಆರಂಭಿಕ ಆಟಗಾರರು

ಟೀಮ್ ಇಂಡಿಯಾದ ಆರಂಭಿಕ ಆಟಗಾರ್ತಿಯರು ಅದ್ಭುತ ಆಟವನ್ನು ಪ್ರದರ್ಶಿಸುತ್ತಿದ್ದಾರೆ. ನಾಳಿನ ಪಂದ್ಯದಲ್ಲೂ ನಿಸ್ಸಂಶಯವಾಗಿ ಅದೆ ಜೋಡಿ ಕಣಕ್ಕಿಳಿಯಲಿದೆ. ಯುವ ಆಟಗಾರ್ತಿ ಶೆಫಾಲಿ ವರ್ಮ ಸ್ಮೃತಿ ಮಂದನಾಗೆ ಜೊತೆಯಾಗಲಿದ್ದಾರೆ. ಮೊದಲ ಐದು ಓವರ್‌ಗಳಲ್ಲಿ ಅತಿ ಹೆಚ್ಚು ರನ್ ಕಲೆಹಾಕುವ ಮೂಲಕ ಎದುರಾಳಿ ಬೌಲರ್‌ಗಳ ಮೇಲೆ ಒತ್ತಡ ಹೇರುವಲ್ಲಿ ಈ ಜೋಡಿ ಪ್ರಮುಖ ಪಾತ್ರವಹಿಸುತ್ತದೆ.

ಮಧ್ಯಮ ಕ್ರಮಾಂಕ

ಮಧ್ಯಮ ಕ್ರಮಾಂಕ

ಭಾರತದ ಮಧ್ಯಮ ಕ್ರಮಾಂಕ ಸಾಕಷ್ಟು ಬಲಿಷ್ಟವಾಗಿದೆ. ಜಮಿಮಾ ರೋಡ್ರಿಗಸ್, ಹರ್ಮನ್ ಪ್ರೀತ್ ಕೌರ್ ಜೊತೆಗೆ ವೇದಾ ಕೃಷ್ಣಮೂರ್ತಿ ಮಧ್ಯಮ ಕ್ರಮಾಂಕದಲ್ಲಿ ಸಂದರ್ಭಕ್ಕೆ ತಕ್ಕಂತೆ ಆಡುವ ಕಲೆ ಹೊಂದಿದ್ದಾರೆ. ಜಮಿಮಾ ರೋಡ್ರಿಗಸ್ ವಿಶ್ವಕಪ್‌ನಲ್ಲಿ ಆಡಿರುವ ನಾಲ್ಕು ಪಂದ್ಯಗಳಲ್ಲಿ 75 ರನ್‌ಗಳಿಸಿದ್ದಾರೆ. ಆದರೆ ಗಮನಾರ್ಹ ಪ್ರದರ್ಶನವನ್ನು ನೀಡಿಲ್ಲ. ಇನ್ನು ವೇದಾ ಕೃಷ್ಣಮೂರ್ತಿ ಆಡಲು ಹೆಚ್ಚಿನ ಅವಕಾಶವನ್ನು ಪಡೆಯಲಿಲ್ಲ. ಸಿಕ್ಕ ಅವಕಾಶದಲ್ಲಿ ಉತ್ತಮ ಫಿನಿಶಿಂಗ್ ಮಾಡಿ ಸೈ ಎನಿಸಿಕೊಂಡಿದ್ದಾರೆ. ಆದರೆ ಭಾರತ ತಂಡದ ನಾಯಕಿ ಹರ್ಮನ್ ಪ್ರೀತ್ ಕೌರ್ ಈ ಸರಣಿಯಲ್ಲಿ ಕಳಪೆ ಪ್ರದರ್ಶನವನ್ನು ನೀಡಿದ್ದಾರೆ. ನಾಲ್ಕು ಇನ್ನಿಂಗ್ಸ್‌ಗಳಲ್ಲಿ ಕೌರ್ 26 ರನ್‌ಗಳಿಸಲಷ್ಟೇ ಶಕ್ತರಾಗಿದ್ದಾರೆ.

ವಿಕೆಟ್ ಕೀಪರ್:

ವಿಕೆಟ್ ಕೀಪರ್:

ಭಾರತ ತಂಡದ ವಿಕೆಟ್ ಕೀಪರ್ ಆಗಿ ಈ ಟೂರ್ನಿಯಲ್ಲಿ ತಾನಿಯ ಬಾಟಿಯ ಮಿಂಚಿದ್ದಾರೆ. ವಿಕೆಟ್‌ನ ಹಿಂದೆ ಅದ್ಭುತವಾಗಿ ತಾನಿಯ ಬಾಟಿಯ ಪ್ರದರ್ಶನವನ್ನು ನೀಡುವಲ್ಲಿ ಯಶಸ್ವಿಯಾಗಿದ್ದಾರೆ. ಹೀಗಾಗಿ ಕೀಪಿಂಗ್ ವಿಭಾಗದಲ್ಲಿ ಯಾವುದೇ ಬದಲಾವಣೆಯಾಗುವ ಸಾಧ್ಯತೆಯಿಲ್ಲ.

ಆಲ್‌ರೌಂಡರ್

ಆಲ್‌ರೌಂಡರ್

ಆಲ್‌ರೌಂಡರ್ ಜವಾಬ್ಧಾರಿಯನ್ನು ಟೀಮ್ ಇಂಡಿಯಾದ ಆಟಗಾರ್ತಿ ದೀಪ್ತಿ ಶರ್ಮಾ ಯಶಸ್ವಿಯಾಗಿ ನಿಭಾಯಿಸಿದ್ದಾರೆ. ಕೆಳ ಕ್ರಮಾಂಕದಲ್ಲಿ ಕೆಲ ಪ್ರಮುಖ ಪಂದ್ಯಗಳಲ್ಲಿ ದೀಪ್ತಿ ಉತ್ತಮ ಪ್ರದರ್ಶನವನ್ನು ನೀಡುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ಬೌಲಿಂಗ್‌ನಲ್ಲೂ ದೀಪ್ತಿ ಉತ್ತಮ ಕೊಡುಗೆಯನ್ನು ನೀಡಿದ್ದಾರೆ.

ಬೌಲಿಂಗ್ ವಿಭಾಗ

ಬೌಲಿಂಗ್ ವಿಭಾಗ

ಭಾರತದ ಬೌಲಿಂಗ್ ಪಡೆ ಸಾಕಷ್ಟು ಬಲಿಷ್ಠವಾಗಿದೆ. ಶಿಖಾ ಪಾಂಡೆ ಏಕೈಕ ವೇಗಿಯಾಗಿದ್ದು ಉಳಿದಂತೆ ಪೂನಮ್ ಯಾದವ್, ರಾಜೇಶ್ವರಿ ಗಾಯಕ್ವಾಡ್ ಮತ್ತು ರಾಧಾ ಯಾದವ್ ಸ್ಪಿನ್ನರ್‌ಗಳಾಗಿ ಕಣಕ್ಕಿಳಿಯುವ ಸಾಧ್ಯತೆಯಿದೆ. ಪೂನಮ್ ಯಾದವ್ ಈ ಟೂರ್ನಿಯ ಅತಿ ಹೆಚ್ಚು ವಿಕೆಟ್ ಪಡೆದ ಆಟಗಾರ್ತಿ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ನಾಲ್ಕು ಪಂದ್ಯಗಳಿಂದ 9 ವಿಕೆಟ್ ಕಬಳಿಸುವಲ್ಲಿ ಪೂನಮ್ ಯಶಸ್ವಿಯಾಗಿದ್ದಾರೆ.

ಆಡುವ ಸಂಭಾವ್ಯ ಬಳಗ ಹೀಗಿದೆ

ಆಡುವ ಸಂಭಾವ್ಯ ಬಳಗ ಹೀಗಿದೆ

ಸ್ಮೃತಿ ಮಂದನಾ, ಶಫಾಲಿ ವರ್ಮಾ, ಜೆಮಿಮಾ ರೊಡ್ರಿಗಸ್, ಹರ್ಮನ್‌ಪ್ರೀತ್ ಕೌರ್ (ನಾಯಕಿ), ವೇದ ಕೃಷ್ಣಮೂರ್ತಿ, ದೀಪ್ತಿ ಶರ್ಮಾ, ತಾನಿಯಾ ಭಾಟಿಯಾ (ವಿಕೆಟ್ ಕೀಪರ್), ಶಿಖಾ ಪಾಂಡೆ, ರಾಧಾ ಯಾದವ್, ರಾಜೇಶ್ವರಿ ಗಾಯಕ್ವಾಡ್, ಪೂನಂ ಯಾದವ್

Story first published: Saturday, March 7, 2020, 16:45 [IST]
Other articles published on Mar 7, 2020
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+