Women's Asia Cup 2024: ಪ್ರಶಸ್ತಿ ರಕ್ಷಣೆಗಾಗಿ ದಂಬುಲ್ಲಾ ತಲುಪಿದ ಹಾಲಿ ಚಾಂಪಿಯನ್ ಭಾರತ
2024ರ ಎಸಿಸಿ ಮಹಿಳಾ ಏಷ್ಯಾ ಕಪ್ ಪಂದ್ಯಾವಳಿ ಆರಂಭಕ್ಕೂ ಮುನ್ನ ಭಾರತ ಮಹಿಳಾ ಕ್ರಿಕೆಟ್ ತಂಡವು ಜುಲೈ 16ರ ಮಂಗಳವಾರ ರಾತ್ರಿ ವೇಳೆಗೆ ಶ್ರೀಲಂಕಾದ ದಂಬುಲ್ಲಾ ತಲುಪಿದೆ.
ಭಾರತ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ ಸೇರಿದಂತೆ ಶ್ವೇತಾ ಸೆಹ್ರಾವತ್, ಆಶಾ ಸೋಭನಾ, ಸಜೀವನ್ ಸಜನಾ, ಪೂಜಾ ವಸ್ತ್ರಾಕರ್ ಮತ್ತು ರೇಣುಕಾ ಸಿಂಗ್ ತಮ್ಮ ಲಗೇಜ್‌ಗಳನ್ನು ಹೊತ್ತೊಯ್ಯುತ್ತಿರುವ ಫೋಟೋಗಳನ್ನು ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಪೋಸ್ಟ್ ಮಾಡಿದೆ.

ಶ್ರೀಲಂಕಾ ಕ್ರಿಕೆಟ್ ಜೆಮಿಮಾ ರೋಡ್ರಿಗಸ್, ಶ್ರೇಯಾಂಕ ಪಾಟೀಲ್ ಮತ್ತು ಹರ್ಮನ್‌ಪ್ರೀತ್ ದಂಬುಲ್ಲಾಗೆ ಬಂದಿಳಿದ ಫೋಟೋಗಳನ್ನು ಸಹ ಹಂಚಿಕೊಂಡಿದೆ. ಇದಕ್ಕೂ ಮುನ್ನ ಭಾರತೀಯ ಮಹಿಳಾ ಕ್ರಿಕೆಟಿಗರು ಚೆನ್ನೈನಿಂದ ಶ್ರೀಲಂಕಾಕ್ಕೆ ತೆರಳುವ ಮುನ್ನ ಫೋಟೋಗಳನ್ನು ಪೋಸ್ಟ್ ಮಾಡಿದ್ದರು.
2024ರ ಮಹಿಳಾ ಏಷ್ಯಾ ಕಪ್‌ನಲ್ಲಿ ಭಾರತ ತಂಡದ ಮೊದಲ ಪಂದ್ಯವು ಶುಕ್ರವಾರ, ಜುಲೈ 19ರಂದು ರಂಗಿರಿ ದಂಬುಲ್ಲಾ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಿದಾ ದಾರ್ ನಾಯಕತ್ವದ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ನಡೆಯಲಿದೆ.
ಹರ್ಮನ್‌ಪ್ರೀತ್ ಕೌರ್ ಪಡೆಯು ಪಾಕಿಸ್ತಾನ, ನೇಪಾಳ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಜೊತೆಗೆ ಎ ಗುಂಪಿನಲ್ಲಿ ಸ್ಥಾನ ಪಡೆದಿದ್ದರೆ, ಆತಿಥೇಯ ಶ್ರೀಲಂಕಾ, ಮಲೇಷ್ಯಾ, ಥಾಯ್ಲೆಂಡ್ ಮತ್ತು ಬಾಂಗ್ಲಾದೇಶ ಬಿ ಗುಂಪಿನಲ್ಲಿ ಸ್ಥಾನ ಪಡೆದಿವೆ. ಜುಲೈ 28ರಂದು ಫೈನಲ್‌ಗೆ ಮುನ್ನ ಜುಲೈ 26ರಂದು ಸೆಮಿಫೈನಲ್ ಪಂದ್ಯಗಳು ನಡೆಯಲಿವೆ.
ಭಾರತ ಮಹಿಳಾ ತಂಡವು ಹಾಲಿ ಚಾಂಪಿಯನ್ ಮತ್ತು ಏಷ್ಯಾ ಕಪ್ ಇತಿಹಾಸದಲ್ಲಿ ಅತ್ಯಂತ ಯಶಸ್ವಿ ತಂಡವಾಗಿದ್ದು, 7 ಬಾರಿ ಪ್ರಶಸ್ತಿ ಗೆದ್ದು ಬೀಗಿದೆ. ಕಳೆದ ಬಾರಿ ಬಾಂಗ್ಲಾದೇಶದಲ್ಲಿ ನಡೆದ ಪಂದ್ಯಾವಳಿಯ ಫೈನಲ್‌ನಲ್ಲಿ ಶ್ರೀಲಂಕಾ ಮಹಿಳಾ ತಂಡವನ್ನು 8 ವಿಕೆಟ್‌ಗಳಿಂದ ಸೋಲಿಸಿತ್ತು.
ಭಾರತ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿ ಮತ್ತು ಚೆನ್ನೈನಲ್ಲಿ ನಡೆದ ಏಕೈಕ ಟೆಸ್ಟ್ ಪಂದ್ಯವನ್ನು ಗೆದ್ದಿತ್ತು. ನಂತರ ನಡೆದ ಟಿ20 ಸರಣಿಯನ್ನು 1-1 ಅಂತರದಲ್ಲಿ ಡ್ರಾ ಮಾಡಿಕೊಂಡಿತ್ತು.
ಸ್ಮೃತಿ ಮಂಧಾನ ಅವರು ಏಕದಿನ ಸರಣಿಯಲ್ಲಿ 3 ಶತಕಗಳ ನಂತರ, ಟಿ20 ಸರಣಿಯಲ್ಲಿ ಒಂದೆರಡು ಉಪಯುಕ್ತ ಪ್ರದರ್ಶನಗಳನ್ನು ನೀಡಿದ ಕಾರಣ ಭಾರತದ ಪ್ರಮುಖ ಆಟಗಾರ್ತಿಯರಲ್ಲಿ ಒಬ್ಬರಾಗಿದ್ದಾರೆ.
ಅಂತಿಮ ಟಿ20 ಪಂದ್ಯದಲ್ಲಿ 4 ವಿಕೆಟ್ ಕಬಳಿಸಿದ ಪೂಜಾ ವಸ್ತ್ರಾಕರ್ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದರು. ರಾಧಾ ಯಾದವ್ ಮತ್ತು ಜೆಮಿಮಾ ರೋಡ್ರಿಗಸ್ ಕೂಡ ಉತ್ತಮ ಫಾರ್ಮ್‌ನಲ್ಲಿದ್ದಾರೆ.
2024ರ ಮಹಿಳಾ ಏಷ್ಯಾ ಕಪ್‌ಗಾಗಿ ಭಾರತ ಮಹಿಳಾ ತಂಡ
ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪನಾಯಕಿ), ಶಫಾಲಿ ವರ್ಮಾ, ದೀಪ್ತಿ ಶರ್ಮಾ, ಜೆಮಿಮಾ ರೋಡ್ರಿಗಸ್, ರಿಚಾ ಘೋಷ್ (ವಿಕೆಟ್ ಕೀಪರ್), ಉಮಾ ಚೆಟ್ರಿ (ವಿಕೆಟ್ ಕೀಪರ್), ಪೂಜಾ ವಸ್ತ್ರಾಕರ್, ಅರುಂಧತಿ ರೆಡ್ಡಿ, ರೇಣುಕಾ ಸಿಂಗ್ ಠಾಕೂರ್, ದಯಾಳನ್ ಹೇಮಲತಾ, ಆಶಾ ಸೋಭನಾ, ರಾಧಾ ಯಾದವ್, ಶ್ರೇಯಾಂಕಾ ಪಾಟೀಲ್, ಸಜನಾ ಸಜೀವನ್.
ಪ್ರಯಾಣ ಮೀಸಲು ಆಟಗಾರ್ತಿಯರು: ಶ್ವೇತಾ ಸೆಹ್ರಾವತ್, ಸೈಕಾ ಇಶಾಕ್, ತನುಜಾ ಕನ್ವರ್, ಮೇಘನಾ ಸಿಂಗ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications