Womens Asia Cup 2024: ಭಾರತ vs ಪಾಕಿಸ್ತಾನ ಹೈವೋಲ್ಟೇಜ್ ಪಂದ್ಯದ ಟಾಸ್ ವರದಿ, ಪ್ಲೇಯಿಂಗ್-11
ಜುಲೈ 19 ಶುಕ್ರವಾರ, 2024ರ ಮಹಿಳಾ ಏಷ್ಯಾಕಪ್ ಟೂರ್ನಿಯ ಎ ಗುಂಪಿನ ಎರಡನೇ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ ಮುಖಮುಖಿಯಾಗಿವೆ. ಶ್ರೀಲಂಕಾದ ಡಂಬುಲ್ಲಾ ಅಂತರಾಷ್ಟ್ರೀಯ ಸ್ಟೇಡಿಯಂನಲ್ಲಿ ಪಂದ್ಯ ಆರಂಭವಾಗಿದೆ.
ಟಾಸ್ ಗೆದ್ದ ಪಾಕಿಸ್ತಾನದ ನಾಯಕ ನಿದಾ ದಾರ್ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ. ಹೀಗಾಗಿ ಹರ್ಮನ್‌ಪ್ರೀತ್ ಕೌರ್ ಮುನ್ನೆಡೆಸುತ್ತಿರುವ ಭಾರತ ತಂಡ ಬೌಲಿಂಗ್ ಮಾಡಲಿದೆ.

ಮಹಿಳಾ ಏಷ್ಯಾಕಪ್‌ನಲ್ಲಿ ಹೆಡ್-ಟು-ಹೆಡ್
ಮಹಿಳಾ ಏಷ್ಯಾಕಪ್‌ನಲ್ಲಿ ಉಭಯ ತಂಡಗಳ ನಡುವೆ ಇದುವರೆಗೆ 6 ಪಂದ್ಯಗಳು ನಡೆದಿವೆ. ಭಾರತ 5 ಪಂದ್ಯಗಳನ್ನು ಗೆದ್ದಿದೆ. 2022ರಲ್ಲಿ ನಡೆದ ಏಕೈಕ ಪಂದ್ಯವನ್ನು ಪಾಕಿಸ್ತಾನ ಗೆದ್ದಿತ್ತು.
ಏಷ್ಯಾಕಪ್ ಟಿ20ಯಲ್ಲಿ ಭಾರತವು ಪಾಕಿಸ್ತಾನ ವಿರುದ್ಧದ 5 ಗೆಲುವುಗಳಲ್ಲಿ 4 ಹರ್ಮನ್‌ಪ್ರೀತ್ ಕೌರ್ ನಾಯಕತ್ವದಲ್ಲಿ ಬಂದಿರುವುದು ಗಮನಾರ್ಹ. ಮಾಜಿ ನಾಯಕಿ ಮಿಥಾಲಿ ರಾಜ್ ಅವರು 2012ರ ಟೂರ್ನಿಯಲ್ಲಿ ಪಾಕಿಸ್ತಾನ ವಿರುದ್ಧ ಭಾರತಕ್ಕೆ ಜಯ ತಂದುಕೊಟ್ಟಿದ್ದರು.
ಭಾರತ vs ಪಾಕಿಸ್ತಾನ ಪ್ಲೇಯಿಂಗ್-11
ಭಾರತ ತಂಡ: ಸ್ಮೃತಿ ಮಂಧಾನ, ಶಫಾಲಿ ವರ್ಮಾ, ದಯಾಳನ್ ಹೇಮಲತಾ, ಜೆಮಿಮಾ ರಾಡ್ರಿಗಸ್, ಹರ್ಮನ್‌ಪ್ರೀತ್ ಕೌರ್ (ನಾಯಕಿ), ರಿಚಾ ಘೋಷ್ (ವಿಕೆಟ್‌ಕೀಪರ್), ದೀಪ್ತಿ ಶರ್ಮಾ, ಪೂಜಾ ವಸ್ತ್ರಾಕರ್, ರಾಧಾ ಯಾದವ್, ಶ್ರೇಯಾಂಕ ಪಾಟೀಲ್, ರೇಣುಕಾ ಠಾಕೂರ್ ಸಿಂಗ್.
ಪಾಕಿಸ್ತಾನ ತಂಡ: ಸಿದ್ರಾ ಅಮೀನ್, ಗುಲ್ ಫಿರೋಜಾ, ಮುನೀಬಾ ಅಲಿ(ವಿಕೆಟ್‌ಕೀಪರ್), ನಿದಾ ದಾರ್(ನಾಯಕಿ), ಅಲಿಯಾ ರಿಯಾಜ್, ಇರಾಮ್ ಜಾವೇದ್, ಫಾತಿಮಾ ಸನಾ, ತುಬಾ ಹಸನ್, ಸಾದಿಯಾ ಇಕ್ಬಾಲ್, ನಶ್ರಾ ಸಂಧು, ಸೈಯದಾ ಅರೂಬ್ ಶಾ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications