Women's T20 WC: ದಕ್ಷಿಣ ಆಫ್ರಿಕಾಕ್ಕೆ 159 ರನ್ ಟಾರ್ಗೆಟ್ ನೀಡಿದ ಭಾರತ
ಮ್ಯಾಂಚೆಸ್ಟರ್: ಸಂಘಟಿತ ಬ್ಯಾಟಿಂಗ್ ಪ್ರದರ್ಶನ ನೀಡಿದ ಭಾರತ ತಂಡ ಮಹಿಳಾ ಟಿ20 ವಿಶ್ವಕಪ್‌ನ ಮೊದಲ ಗುಂಪಿನ ಮೂರನೇ ಪಂದ್ಯದಲ್ಲಿ ಸ್ಪರ್ಧಾತ್ಮಕ ಮೊತ್ತದ ಗುರಿಯನ್ನು ದಕ್ಷಿಣ ಆಫ್ರಿಕಾ ತಂಡಕ್ಕೆ ನೀಡಿದೆ.
ಈಗಾಗಲೇ ಆಡಿರುವ ಎರಡೂ ಪಂದ್ಯಗಳಲ್ಲಿ ಭರ್ಜರಿ ಪ್ರದರ್ಶನ ನೀಡಿರುವ ಭಾರತ ಮಹಿಳಾ ತಂಡ, ಆತ್ಮ ವಿಶ್ವಾಸದಿಂದ ಕಣಕ್ಕೆ ಇಳಿಯಿತು. ಟಾಸ್ ಗೆದ್ದ ಟೀಮ್ ಇಂಡಿಯಾ ಬ್ಯಾಟಿಂಗ್ ಮಾಡಲು ಮುಂದಾಯಿತು. ಆರಂಭಿಕರಾದ ಸ್ಮೃತಿ ಮಂಧಾನ ಹಾಗೂ ಶಫಾಲಿ ವರ್ಮಾ ಜೋಡಿ ಮೊದಲ ವಿಕೆಟ್‌ಗೆ ಉತ್ತಮ ಆರಂಭವನ್ನು ನೀಡಿತು. ಈ ಜೋಡಿ ಮೊದಲ ವಿಕೆಟ್‌ಗೆ 3 ಓವರ್‌ಗಳಲ್ಲಿ 30 ರನ್ ಸೇರಿಸಿತು. ಸ್ಮೃತಿ ಮಂಧಾನ 17 ರನ್ ಬಾರಿಸಿ ಔಟ್ ಆದರು.

ಆರಂಭಿಕ ಆಟಗಾರ್ತಿ ಶಫಾಲಿ ವರ್ಮಾ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಇವರು 15 ಎಸೆತಗಳಲ್ಲಿ 4 ಬೌಂಡರಿ, 1 ಸಿಕ್ಸರ್ ನೆರವಿನಿಂದ 31 ರನ್ ಬಾರಿಸಿ ಮಿಂಚಿದರು. ಯಾಸ್ತಿಕಾ ಭಾಟಿಯಾ (15), ಜೆಮಿಮಾ ರೊಡ್ರಿಗಸ್ (12) ತಂಡ ತಮ್ಮ ಮೇಲೆ ಇಟ್ಟ ನಂಬಿಕೆಗೆ ಪೂರಕವಾಗಿ ಬ್ಯಾಟ್ ಮಾಡಲಿಲ್ಲ. ಇವರು ಮಧ್ಯದ ಓವರ್‌ಗಳಲ್ಲಿ ಒತ್ತಡವನ್ನು ಮೆಟ್ಟಿನಿಂತು ಬ್ಯಾಟ್ ಮಾಡಲಿಲ್ಲ.
ನಾಯಕಿ ಹರ್ಮನ್ ಪ್ರೀತ್ ಕೌರ್ 22 ಎಸೆತಗಳಲ್ಲಿ 2 ಬೌಂಡರಿ ನೆರವಿನಿಂದ 24 ರನ್ ಬಾರಿಸಿದರು. ದೀಪ್ತಿ ಶರ್ಮಾ 3 ಬೌಂಡರಿ ಸಹಿತ 29 ರನ್ ಸಿಡಿಸಿದರು. ರಿಚಾ ಘೋಷ್ 15 ರನ್ ಗಳಿಸಿದರು.
ಪ್ರೇಮಾ ರಾವತ್ ಪದಾರ್ಪಣೆ
ಕನ್ನಡತಿ ಶ್ರೇಯಾಂಕಾ ಪಾಟೀಲ್ ಅವರು ಗಾಯಕ್ಕೆ ತುತ್ತಾಗಿ ಟೂರ್ನಿಯಿಂದ ಹೊರ ನಡೆದ ಬಳಿಕ ತಂಡದಲ್ಲಿ ಸ್ಥಾನ ಪಡೆದ ಉತ್ತರಾಖಂಡದ ಪ್ರೇಮಾ ರಾವತ್ ಅವರು ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಪದಾರ್ಪಣೆ ಮಾಡಿದರು. 24 ವರ್ಷದ ಪ್ರೇಮಾ ಇದೇ ಮೊದಲ ಬಾರಿಗೆ ಭಾರತ ತಂಡದ ಪರ ಆಡುವ ಅವಕಾಶವನ್ನು ಟಿ20 ವಿಶ್ವಕಪ್‌ನಂತಹ ದೊಡ್ಡ ವೇದಿಕೆಯಲ್ಲಿ ಪಡೆದರು. ಇವರು ಮಹಿಳಾ ಪ್ರೀಮಿಯರ್ ಲೀಗ್ ಹಾಗೂ ದೇಶೀಯ ಕ್ರಿಕೆಟ್‌ನಲ್ಲಿ ಸ್ಥಿರ ಪ್ರದರ್ಶನ ನೀಡಿದ್ದಾರೆ.
ಹರ್ಮನ್‌ಪ್ರೀತ್ 200ನೇ ಪಂದ್ಯ
ಟೀಮ್ ಇಂಡಿಯಾದ ನಾಯಕಿ ಹರ್ಮನ್‌ಪ್ರೀತ್ ಕೌರ್ ಅವರಿಗೆ ಈ ಪಂದ್ಯ ಸ್ಮರಣೀಯಾಗಿತ್ತು. ಇವರು ಟಿ20 ಕ್ರಿಕೆಟ್‌ನಲ್ಲಿ 200ನೇ ಪಂದ್ಯವನ್ನು ಆಡಿದ ಹೆಗ್ಗಳಿಕೆಯನ್ನು ತಮ್ಮದಾಗಿಸಿಕೊಂಡರು. ಅಲ್ಲದೆ ಈ ಸಾಧನೆ ಮಾಡಿದ ಮೊದಲ ಭಾರತೀಯ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications