ಬರ್ಮಿಂಗ್ಹ್ಯಾಮ್, ಜುಲೈ 11: ಬರ್ಮಿಂಗ್ಹ್ಯಾಮ್ನ ಎಜ್ಬಾಸ್ಟನ್ನಲ್ಲಿ ಐಸಿಸಿ ವಿಶ್ವಕಪ್ 2019ರ 2ನೇ ಸೆಮಿಫೈನಲ್ ಪಂದ್ಯಕ್ಕಾಗಿ ಪ್ರಬಲ ಎದುರಾಳಿಗಳಾದ ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗಿವೆ. ಕ್ರಿಕೆಟ್ ಜಗತ್ತಿನ ಹಳೆ ಬದ್ಧ ಎದುರಾಳಿಗಳಾಗಿ ಗುರುತಿಸಿಕೊಂಡಿರುವ ಇತ್ತಂಡಗಳ ಕದನ ಕುತೂಹಲ ಮೂಡಿಸಿದೆ. ಟಾಸ್ ಗೆದ್ದಿರುವ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ದುಕೊಂಡಿದೆ.
ಕುತೂಹಲಕಾರಿ ಸ್ಟೋರಿಗಳು, ಅಂಕಿ-ಅಂಶಗಳು 'ಐಸಿಸಿ ಕ್ರಿಕೆಟ್ ವಿಶ್ವಕಪ್ 2019' ವಿಶೇಷ ಮುಖಪುಟದಲ್ಲಿವೆ
ಬುಧವಾರ (ಜುಲೈ 10) ಮುಕ್ತಾಯಗೊಂಡ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲೆಂಡ್ ವಿರುದ್ಧ 18 ರನ್ಗಳ ಸೋಲನುಭವಿಸಿತ್ತು. ನ್ಯೂಜಿಲೆಂಡ್ ಈಗಾಗಲೇ ಫೈನಲ್ ಪ್ರವೇಶಿಸಿದ್ದು, ಇಂದಿನ ಪಂದ್ಯದ ಕಿವೀಸ್ ಪ್ರತಿಸ್ಪರ್ಧಿಯನ್ನು ನಿರ್ಧರಿಸಲಿದೆ. ಹಾಲಿ ಚಾಂಪಿಯನ್ ಆಸ್ಟ್ರೇಲಿಯಾ ತಂಡದಲ್ಲಿ ಒಂದಿಷ್ಟು ಬದಲಾವಣೆಗಳಾಗಿವೆ. ಆಸ್ಟ್ರೇಲಿಯಾ ಮೇಲುಗೈ ಸಾಧಿಸುವ ನಿರೀಕ್ಷೆಯಿದೆ.
ಇಂಗ್ಲೆಂಡ್ vs ಆಸ್ಟ್ರೇಲಿಯಾ, ಸೆ.ಫೈನಲ್ 2, ಜುಲೈ 11, Live ಸ್ಕೋರ್ಕಾರ್ಡ್
ಇಂಗ್ಲೆಂಡ್ ತಂಡ: ಜೇಸನ್ ರಾಯ್, ಜಾನಿ ಬೈರ್ಸ್ಟೋವ್, ಜೋ ರೂಟ್, ಇಯಾನ್ ಮಾರ್ಗನ್ (ಸಿ), ಬೆನ್ ಸ್ಟೋಕ್ಸ್, ಜೋಸ್ ಬಟ್ಲರ್ (ವಿಕೆ), ಕ್ರಿಸ್ ವೋಕ್ಸ್, ಲಿಯಾಮ್ ಪ್ಲಂಕೆಟ್, ಜೋಫ್ರಾ ಆರ್ಚರ್, ಆದಿಲ್ ರಶೀದ್, ಮಾರ್ಕ್ ವುಡ್.
ಆಸ್ಟ್ರೇಲಿಯಾ ತಂಡ: ಡೇವಿಡ್ ವಾರ್ನರ್, ಆ್ಯರನ್ ಫಿಂಚ್ (ಸಿ), ಸ್ಟೀವನ್ ಸ್ಮಿತ್, ಪೀಟರ್ ಹ್ಯಾಂಡ್ಸ್ಕಾಂಬ್, ಮಾರ್ಕಸ್ ಸ್ಟೋಯಿನಿಸ್, ಗ್ಲೆನ್ ಮ್ಯಾಕ್ಸ್ವೆಲ್, ಅಲೆಕ್ಸ್ ಕ್ಯಾರಿ (ವಿಕೆ), ಪ್ಯಾಟ್ ಕಮ್ಮಿನ್ಸ್, ಮಿಚೆಲ್ ಸ್ಟಾರ್ಕ್, ಜೇಸನ್ ಬೆಹ್ರೆಂಡೋರ್ಫ್, ನಾಥನ್ ಲಿಯಾನ್.
{headtohead_cricket_2_1}