For Quick Alerts
ALLOW NOTIFICATIONS  
For Daily Alerts
 

ರವೀಂದ್ರ ಜಡೇಜಾ ಬಗ್ಗೆ ಮೊಹಮ್ಮದ್‌ ಅಝರುದ್ದೀನ್‌ ಹೇಳಿದ್ದೇನು ಗೊತ್ತಾ?

World Cup 2019: Jadeja can bolster Indias batting, says Azharuddin

ಮ್ಯಾಂಚೆಸ್ಟರ್‌, ಜುಲೈ 05: ಪ್ರಸಕ್ತ ವಿಶ್ವಕಪ್‌ ಟೂರ್ನಿಯಲ್ಲಿ ಭಾರತ ತಂಡ ಸೆಮಿಫೈನಲ್ಸ್‌ ತಲುಪಿದ್ದು ತನ್ನ ಮಧ್ಯಮ ಕ್ರಮಾಂಕದ ಬ್ಯಾಟಿಂಗ್‌ ಬಲಪಡಿಸಿಕೊಳ್ಳಲು ಆಡುವ 11ರ ಬಳಗದಲ್ಲಿ ಆಲ್‌ರೌಂಡರ್‌ ರವೀಂದ್ರ ಜಡೇಜಾ ಅವರನ್ನು ಆಡಿಸುವುದು ಉತ್ತಮ ಎಂದು ಮಾಜಿ ನಾಯಕ ಮೊಹಮ್ಮದ್‌ ಅಝರುದ್ದೀನ್‌ ಹೇಳಿದ್ದಾರೆ.

ವಿಶ್ವಕಪ್‌ ವೇಳಾಪಟ್ಟಿ / ಮುಖಾಮುಖಿ ದಾಖಲೆಗಳು / ಅಂಕಪಟ್ಟಿ

ವಿರಾಟ್‌ ಕೊಹ್ಲಿ ಸಾರಥ್ಯದ ಟೀಮ್‌ ಇಂಡಿಯಾ ಇಂಗ್ಲೆಂಡ್‌ ಮತ್ತು ವೇಲ್ಸ್‌ ಆತಿಥ್ಯದಲ್ಲಿ ನಡೆಯುತ್ತಿರುವ 12ನೇ ಆವೃತ್ತಿಯ ಏಕದಿನ ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯಲ್ಲಿ ಇನ್ನೊಂದು ಲೀಗ್‌ ಪಂದ್ಯ ಬಾಕಿ ಇರುವಂತೆಯೇ ಸೆಮಿಫೈನಲ್ಸ್‌ಗೆ ಅರ್ಹತೆ ಪಡೆದುಕೊಂಡಿದೆ.

ಇದೀಗ ತನ್ನ ಅಂತಿಮ ಲೀಗ್‌ ಪಂದ್ಯದಲ್ಲಿ ಭಾರತ ತಂಡ ಶ್ರೀಲಂಕಾ ವಿರುದ್ಧ ಲೀಡ್ಸ್‌ನಲ್ಲಿ ಪೈಪೋಟಿ ನಡೆಸಲಿದ್ದು, ಈ ಪಂದ್ಯದಲ್ಲಿ ಗೆದ್ದರೆ ಅಂಕಪಟ್ಟಿಯ ಅಗ್ರಸ್ಥಾನಕ್ಕೇರುವ ಉತ್ತಮ ಅವಕಾಶ ಹೊಂದಿದೆ. ಮತ್ತೊಂದೆಡೆ ಆಸ್ಟ್ರೇಲಿಯಾ ತಂಡ ಕೂಡ ತನ್ನ ಕೊನೆಯ ಲೀಗ್‌ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಪೈಪೋಟಿ ನಡೆಸಲಿದ್ದು, ಜಯದೊಂದಿಗೆ ಅಂಕಪಟ್ಟಿಯ ಅಗ್ರಸ್ಥಾನ ಕಾಯ್ದುಕೊಳ್ಳಲು ಹೋರಾಟ ನಡೆಸಲಿದೆ.

ಟೂರ್ನಿಯಲ್ಲಿ ಭಾರತ ತಂಡದ ಅಗ್ರ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳಷ್ಟೇ ಅಬ್ಬರಿಸುತ್ತಿದ್ದು, ಮಧ್ಯಮ ಮತ್ತು ಕೆಳ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳಿಂದ ನಿರೀಕ್ಷಿತ ಮಟ್ಟದ ಪ್ರದರ್ಶನ ಹೊರಬಂದಿಲ್ಲ. ಅಫಘಾನಿಸ್ತಾನ ವಿರುದ್ಧದ ಪಂದ್ಯದಲ್ಲಿ ಭಾರತ ತಂಡದ ಅಗ್ರ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳು ವಿಫಲಗೊಂಡ ಬಳಿಕ ಮಧ್ಯಮ ಮತ್ತು ಕೆಳ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳು ರನ್‌ ಗಳಿಸಲು ಪರದಾಟ ನಡೆಸಿದ್ದನ್ನು ವೀಕ್ಷಿಸಿದ್ದೇವೆ. ಹೀಗಾಗಿ ತಂಡದ ಬ್ಯಾಟಿಂಗ್‌ ಬಲ ಹೆಚ್ಚುವಂತೆ ಮಾಡಲು ರವೀಂದ್ರ ಜಡೇಜಾ ಅವರನ್ನು ಆಡಿಸುವುದು ಉತ್ತಮ ಎಂದು ಅಝರುದ್ದೀನ್‌ ಅಭಿಪ್ರಾಯ ಪಟ್ಟಿದ್ದಾರೆ.

"ಜಡೇಜಾ ಅವರನ್ನು ಬಳಿಸಕೊಳ್ಳಿ. ಅವರು ಅತ್ಯುತ್ತಮ ಆಟಗಾರ. ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲೇ ಜಡೇಜಾ ಅವರನ್ನು ಕಣಕ್ಕಿಳಿಸುತ್ತಾರೆ ಎಂದು ನಿರೀಕ್ಷಿಸಿದ್ದೆ. ಏಕೆಂದರೆ ಭಾರತ ತಂಡದ ಬ್ಯಾಟಿಂಗ್‌ ವಿಭಾಗ ಕೊಂಚ ದುರ್ಬಲವಾದಂತಿದೆ. ಇಂಗ್ಲೆಂಡ್‌ ಪಿಚ್‌ಗಳಲ್ಲಿ ಜಡೇಜಾ ಬೌಲಿಂಗ್‌ನಲ್ಲಿ ಉತ್ತಮ ಕೊಡುಗೆ ನೀಡಬಲ್ಲರು. ಇನ್ನು ಅವರ ಕ್ಷೇತ್ರ ರಕ್ಷಣೆಯ ಕುರಿತಾಗಿ ಮಾತನಾಡುವಂತಿಲ್ಲ. ಜೊತೆಗೆ ಬ್ಯಾಟಿಂಗ್‌ನಲ್ಲೂ ದೊಡ್ಡ ಹೊಡೆತಗಳನ್ನು ಆಡಬಲ್ಲ ಸಾಮರ್ಥ್ಯ ಹೊಂದಿದ್ದಾರೆ. ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಜಡೇಜಾ ಅವರನ್ನು ಆಡಿಸುವುದು ಉತ್ತಮ,'' ಎಂದು ಅಝರುದ್ದೀನ್‌ ಹೇಳಿದ್ದಾರೆ.

Story first published: Saturday, July 6, 2019, 15:12 [IST]
Other articles published on Jul 6, 2019
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+