ಆಸೀಸ್‌ಗೂ ಗಾಯದ ಬರೆ, ಸ್ಟೊಯ್ನಿಸ್ ಬದಲಿಗೆ ಮತ್ತೊಬ್ಬ ಆಲ್‌ರೌಂಡರ್ ಎಂಟ್ರಿ

ಲಂಡನ್, ಜೂನ್ 11: ಪ್ರಸಕ್ತ ಚಾಲ್ತಿಯಲ್ಲಿರುವ ಐಸಿಸಿ ಏಕದಿನ ಕ್ರಿಕೆಟ್ ವಿಶ್ವಕಪ್‌ನ 12ನೇ ಆವೃತ್ತಿಯ ಟೂರ್ನಿಯಲ್ಲಿ ಬಹುತೇಕ ಎಲ್ಲ ತಂಡಗಳಿಗೂ ಗಾಯದ ಸಮಸ್ಯೆ ಕಾಡುತ್ತಿದ್ದು, ಇದಕ್ಕೆ ಹೊಸ ಸೇರ್ಪಡೆಯಾಗಿ ಆಸ್ಟ್ರೇಲಿಯಾದ ಆಲ್‌ರೌಂಡರ್ ಮಾರ್ಕಸ್ ಸ್ಟೋಯ್ನಿಸ್ ಗಾಯದ ಸಮಸ್ಯೆಗೆ ತುತ್ತಾಗಿದ್ದಾರೆ.
ವಿಶ್ವಕಪ್ ವೇಳಾಪಟ್ಟಿ / ಮುಖಾಮುಖಿ ದಾಖಲೆಗಳು / ಅಂಕಪಟ್ಟಿ
ಭಾನುವಾರ ನಡೆದ ಭಾರತ ವಿರುದ್ಧದ ಪಂದ್ಯ ವೇಳೆ ಸ್ನಾಯು ನೋವಿನ ಸೆಳೆತಕ್ಕೆ ತುತ್ತಾಗಿರುವ 29 ವರ್ಷದ ಆಲ್‌ರೌಂಡರ್ ಸ್ಟೋಯ್ನಿಸ್, ಬುಧವಾರ ಪಾಕಿಸ್ತಾನ ವಿರುದ್ಧ ನಡೆಯಲಿರುವ ಪಂದ್ಯದಿಂದ ಹೊರಗುಳಿಯಲಿದ್ದಾರೆ ಎಂದು ಕ್ರಿಕೆಟ್ ಆಸ್ಟ್ರೇಲಿಯಾ ತಿಳಿಸಿದೆ.
ಅಷ್ಟೇ ಅಲ್ಲದೆ ಸ್ಟೋಯ್ನಿಸ್ ಅವರ ಗಾಯದ ಸಮಸ್ಯೆ ಗಂಭೀರವಾಗಿ ಇರುವ ಕಾರಣ ಮುಂಜಾಗ್ರತೆಯ ಕ್ರಮವಾಗಿ ಇಂಗ್ಲೆಂಡ್ ವಿರುದ್ಧದ ಸರಣಿಗೆ ಆಸ್ಟ್ರೇಲಿಯಾ 'ಎ' ತಂಡದೊಂದಿಗೆ ಇಂಗ್ಲೆಂಡ್ ಪ್ರಯಾಣ ಬೆಳೆಸಬೇಕಿದ್ದ ಆಲ್‌ರೌಂಡರ್ ಮಿಚೆಲ್ ಮಾರ್ಷ್ ಅವರನ್ನು ಅವಧಿಗೂ ಮುನ್ನವೇ ಇಂಗ್ಲೆಂಡ್ ತಲುಪುವಂತೆ ಸೂಚಿಸಲಾಗಿದೆ ಎಂದು ಕ್ರಿಕೆಟ್ ಆಸ್ಟ್ರೇಲಿಯಾ ಹೇಳಿರುವುದನ್ನು ಇಎಸ್‌ಪಿಎನ್ ಕ್ರಿಕ್‌ಇನ್ಫೋ ವರದಿ ಮಾಡಿದೆ.
ಪಾಕಿಸ್ತಾನ ವಿರುದ್ಧದ ಪಂದ್ಯದ ಬಳಿಕ ಸ್ಟೋಯ್ನಿಸ್ ಟೂರ್ನಿಯಲ್ಲಿ ಮುಂದುವರಿಯುತ್ತಾರೆಯೇ ಅಥವಾ ಇಲ್ಲವೇ ಎಂಬುದರ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿರುವ ಕ್ರಿಕೆಟ್ ಆಸ್ಟ್ರೇಲಿಯಾ, ಶನಿವಾರ ದಿ ಓವಲ್‌ನಲ್ಲಿ ನಡೆಯಲಿರುವ ಶ್ರೀಲಂಕಾ ವಿರುದ್ಧದ ಪಂದ್ಯದ ನಂತರ ತನ್ನ ಅಂತಿಮ ನಿರ್ಧಾರ ತಿಳಿಸಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications