ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ವಿಶ್ವಕಪ್‌: ಕಿಂಗ್‌ ಕೊಹ್ಲಿ ಮುಡಿಗೆ ಮತ್ತೊಂದು ದಾಖಲೆಯ ಕಿರೀಟ!

ICC World Cup 2019 : ಕೊಹ್ಲಿ ದಾಖಲೆಯನ್ನು ತಡೆಯೋರೆ ಇಲ್ಲ..? | IND vs ENG | Oneindia Kannada
World Cup 2019: Virat Kohli becomes first Indian batsman to hit 5 consecutive 50s

ಬರ್ಮಿಂಗ್‌ಹ್ಯಾಮ್‌, ಜೂನ್‌ 30: ಪ್ರಸಕ್ತ ಏಕದಿನ ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯಲ್ಲಿ ಟೀಮ್‌ ಇಂಡಿಯಾದ ಅಜೇಯ ಗೆಲುವಿನ ಓಟಕ್ಕೆ ಕೊನೆಗೂ ಬ್ರೇಕ್‌ ಬಿದ್ದಿದೆ. ಆದರೆ, ತಂಡದ ರನ್‌ ಮಷೀನ್‌ ವಿರಾಟ್‌ ಕೊಹ್ಲಿ ಅವರ ಬ್ಯಾಟ್‌ನಿಂದ ರನ್‌ ಹೊಳೆ ಹರಿದು ದಾಖಲೆಗಳು ಧೂಳೀಪಟವಾಗುವುದು ಮುಂದುವರಿದಿದೆ.

ವಿಶ್ವಕಪ್‌ ವೇಳಾಪಟ್ಟಿ / ಮುಖಾಮುಖಿ ದಾಖಲೆಗಳು / ಅಂಕಪಟ್ಟಿ

ಇಲ್ಲಿನ ಎಡ್ಜ್‌ಬಾಸ್ಟನ್‌ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಇಂಗ್ಲೆಂಡ್‌ ವಿರುದ್ಧ ಅರ್ಧಶತಕ ದಾಖಲಿಸಿದ ಕ್ಯಾಪ್ಟನ್‌ ವಿರಾಟ್‌ ಕೊಹ್ಲಿ, ವಿಶ್ವಕಪ್‌ ಟೂರ್ನಿಯಲ್ಲಿ ಸತತ 5 ಅರ್ಧಶತಕಗಳನ್ನು ದಾಖಲಿಸಿದ ಮೊದಲ ಭಾರತೀಯ ಎಂಬ ದಾಖಲೆ ಬರೆದರು.

ಪಂದ್ಯದಲ್ಲಿ 338 ರನ್‌ಗಳ ಬೃಹತ್‌ ಮೊತ್ತವನ್ನು ಬೆನ್ನತ್ತಿದ ಭಾರತ ತಂಡ ಆರಂಭದಲ್ಲೇ ಕೆ.ಎಲ್‌ ರಾಹುಲ್‌ (0) ಅವರ ವಿಕೆಟ್‌ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಈ ಸಂದರ್ಭದಲ್ಲಿ ಕ್ರೀಸ್‌ಗೆ ಭದ್ರವಾಗಿ ಅಂಟಿಕೊಂಡು ಮತ್ತೊಬ್ಬ ಆರಂಭಿಕ ಬ್ಯಾಟ್ಸ್‌ಮನ್‌ ರೋಹಿತ್‌ ಶರ್ಮಾ ಅವರೊಟ್ಟಿಗೆ ಇನಿಂಗ್ಸ್‌ ಕಟ್ಟಿದ ವಿರಾಟ್‌, ಅರ್ಧಶತಕ ದಾಖಲಿಸಿದರು.

ವಿಕೆಟ್‌ ಹಿಂಬದಿಯಲ್ಲಿ ಮತ್ತೊಮ್ಮೆ ವಿಫಲಗೊಂಡ ಎಂ.ಎಸ್‌ ಧೋನಿ!ವಿಕೆಟ್‌ ಹಿಂಬದಿಯಲ್ಲಿ ಮತ್ತೊಮ್ಮೆ ವಿಫಲಗೊಂಡ ಎಂ.ಎಸ್‌ ಧೋನಿ!

ಅಂದಹಾಗೆ ಆಸ್ಟ್ರೇಲಿಯಾ ತಂಡದ ಮಾಜಿ ನಾಯಕ ಸ್ಟೀವ್‌ ಸ್ಮಿತ್‌ ವಿಶ್ವಕಪ್‌ ಟೂರ್ನಿಯಲ್ಲಿ ಸತತ ಐದು ಅರ್ಧಶತಕಗಳನ್ನು ದಾಖಲಿಸಿದ ಮೊದಲ ಬ್ಯಾಟ್ಸ್‌ಮನ್‌ ಆಗಿದ್ದಾರೆ. 2015ರ ವಿಶ್ವಕಪ್‌ ಟೂರ್ನಿಯಲ್ಲಿ ಅವರು ಸತತ 5 ಬಾರಿ 50ಕ್ಕೂ ಹೆಚ್ಚು ರನ್‌ ಗಳಿಸಿದ್ದರು. ಇದೇ ವೇಳೆ ವಿರಾಟ್‌ ಕೊಹ್ಲಿ ವಿಶ್ವಕಪ್‌ನಲ್ಲಿ ಸತತ 5 ಅರ್ಧಶತಕ ದಾಖಲಿಸಿದ ಮೊತ್ತ ಮೊದಲ ನಾಯಕ ಎಂಬ ಶ್ರೇಯಕ್ಕೂ ಪಾತ್ರರಾಗಿದ್ದಾರೆ.

ಇಂಗ್ಲೆಂಡ್‌ ವಿರುದ್ಧದ ಪಂದ್ಯದಲ್ಲಿ ಚಹಲ್‌ ಹೆಗಲೇರಿದ ಅನಗತ್ಯ ದಾಖಲೆ!ಇಂಗ್ಲೆಂಡ್‌ ವಿರುದ್ಧದ ಪಂದ್ಯದಲ್ಲಿ ಚಹಲ್‌ ಹೆಗಲೇರಿದ ಅನಗತ್ಯ ದಾಖಲೆ!

ಕೊಹ್ಲಿ, ಇದಕ್ಕೂ ಮೊದಲು ಆಸ್ಟ್ರೇಲಿಯಾದ ಆರೊನ್‌ ಫಿಂಚ್‌ ಮತ್ತು ದಕ್ಷಿಣ ಆಫ್ರಿಕಾ ಗ್ರೇಮ್‌ ಸ್ಮಿತ್‌ ಅವರೊಟ್ಟಿಗೆ ಸತತ 4 ಅರ್ಧಶತಕಗಳೊಂದಿಗೆ ದಾಖಲೆಯನ್ನು ಹಂಚಿಕೊಂಡಿದ್ದರು.

ಪ್ರಸಕ್ತ ವಿಶ್ವಕಪ್‌ ಟೂರ್ನಿಯಲ್ಲಿ ಕೊಹ್ಲಿ ಕ್ರಮವಾಗಿ 82(ಆಸ್ಟ್ರೇಲಿಯಾ), 77(ಪಾಕಿಸ್ತಾನ), 67 (ಅಫಘಾನಿಸ್ತಾನ), 72 (ವೆಸ್ಟ್‌ ಇಂಡೀಸ್‌) ಮತ್ತು 66 (ಇಂಗ್ಲೆಂಡ್‌) ರನ್‌ಗಳನ್ನು ಗಳಿಸಿದ್ದಾರೆ.

ಇಂಗ್ಲೆಂಡ್‌ ವಿರುದ್ಧದ ಪಂದ್ಯದಲ್ಲಿ ಭಾರತ 31 ರನ್‌ಗಳ ಅಂತರದಲ್ಲಿ ಸೋಲನುಭವಿಸಿತು.

Story first published: Sunday, June 30, 2019, 23:20 [IST]
Other articles published on Jun 30, 2019
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X