Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಅಫ್ಘಾನಿಸ್ತಾನದ ಯಶಸ್ಸಿನ ಗುಟ್ಟನ್ನು ವಿವರಿಸಿದ ಕೋಚ್ ಜೊನಾಥನ್ ಟ್ರಾಟ್

ಈ ಬಾರಿಯ ವಿಶ್ವಕಪ್ ಟೂರ್ನಿಯಲ್ಲಿ ಕೆಲ ಅಗ್ರ ತಂಡಗಳು ಗೆಲುವಿಗಾಗಿ ಹರಸಾಹಸ ಪಡುತ್ತಿದ್ದರೆ ಒಂದು ತಂಡ ನಿರೀಕ್ಷೆಗೂ ಮೀರಿದ ಪ್ರದರ್ಶನ ನೀಡಿ ಎಲ್ಲರನ್ನೂ ಅಚ್ಚರಿಗೆ ಒಳಪಡಿಸಿದೆ. ಪ್ರಮುಖ ತಂಡಗಳಿಗೆ ಸೋಲುಣಿಸಿರುವ ತಂಡ ಈಗ ವಿಶ್ವಕಪ್ ಟೂರ್ನಿಯ ಸೆಮಿಫೈನಲ್‌ಗೆ ಪ್ರವೇಶಿಸುವ ಸ್ಪರ್ಧೆಯಲ್ಲಿ ಮತ್ತೊಂದು ಹೆಜ್ಜೆ ಮುಂದಿಟ್ಟಿದೆ.

ಅಫ್ಘಾನಿಸ್ತಾನ ತಂಡ ಈ ಬಾರಿಯ ಟೂರ್ನಿಯಲ್ಲಿ ಈವರೆಗೆ 7 ಪಂದ್ಯಗಳನ್ನು ಆಡಿದ್ದು ಅದರಲ್ಲಿ ನಾಲ್ಕು ಗೆಲುವು ಸಾಧಿಸಿ ಗಮನಸೆಳೆದಿದೆ. ಇನ್ನು ಎರಡು ಪಂದ್ಯಗಳು ಬಾಕಿಯಿದ್ದು ಆ ಎರಡರಲ್ಲಿಯೂ ಗೆದ್ದು ಸೆಮಿಫೈನಲ್ ಟಿಕೆಟ್ ಖಚಿತಪಡಿಸಿಕೊಳ್ಳಬೇಕು ಎನ್ನುವ ಲೆಕ್ಕಾಚಾರದಲ್ಲಿ ಅಫ್ಘಾನಿಸ್ತಾನ ತಂಡ ಸಹಜವಾಗಿಯೇ ಇದೆ.

World cup 2023: Afghanistan coach Jonathan Trott happy for teams performance

ಆದರೆ ಅಫ್ಘಾನಿಸ್ತಾನ ತಂಡಕ್ಕೆ ಇದು ಸುಲಭವೂ ಇಲ್ಲ. ಅದಕ್ಕೆ ಕಾರಣ ಅಫ್ಘನ್ ಪಡೆ ಅಂತಿಮ ಎರಡು ಪಂದ್ಯಗಳಲ್ಲಿ ಎರಡು ಬಲಿಷ್ಠ ತಂಡಗಳನ್ನು ಎದುರಿಸಬೇಕಿದೆ. ಟೂರ್ನಿಯಲ್ಲಿ ಟಾಪ್ 3 ತಂಡಗಳಾಗಿ ಗುರುತಿಸಿಕೊಂಡಿರುವ ಆಸ್ಟ್ರೇಲಿಯಾ ಹಾಗೂ ದಕ್ಷಿಣ ಆಫ್ರಿಕಾ ತಂಡಗಳನ್ನು ಅಫ್ಘಾನಿಸ್ತಾನ ಎದುರಿಸಬೇಕಿದೆ.

ಆದರೆ ವಿಶ್ವಕಪ್ ಟೂರ್ನಿಯಲ್ಲಿ ಹಲವು ಪ್ರಮುಖ ತಂಡಗಳಿಗೆ ಸೋಲಿನ ರುಚಿ ತೋರಿಸಿರುವ ಅಫ್ಘಾನಿಸ್ತಾನ ಮುಂದಿನ ಎರಡು ಪಂದ್ಯಗಳಲ್ಲಿಯೂ ಅಂಥಾದ್ದೇ ಪ್ರದರ್ಶನ ನೀಡುವ ವಿಶ್ವಾಸದಲ್ಲಿದೆ. ಇದೇ ರೀತಿಯ ಮಾತುಗಳನ್ನು ಕೋಚ್ ಜೊನಾಥನ್ ಟ್ರಾಟ್ ಹೇಳಿದ್ದು ಎದುರಾಳಿ ಯಾರು ಎನ್ನುವ ಬಗ್ಗೆ ಹೆಚ್ಚಿನ ಗಮನ ಹರಿಸದೆ ನಮ್ಮ ಸಾಮರ್ಥ್ಯದ ಆಧಾರದಲ್ಲಿ ಕಣಕ್ಕಿಳಿಯಲಿದ್ದೇವೆ ಎಂದಿದ್ದಾರೆ. ಈ ಮೂಲಕ ಸೆಮಿಫೈನಲ್ ಕನಸನ್ನು ನನಸು ಮಾಡುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ ಅಫ್ಘನ್ ಕೋಚ್.

"ನಾವು ಎದುರಾಳಿಗಲ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳುವುದಿಲ್ಲ. ನಮ್ಮ ಸಾಮರ್ಥ್ಯದ ಮೇಲೆ ಮತ್ತಷ್ಟು ಕೆಲಸ ಮಾಡಲಿದ್ದೇವೆ.ಆಸ್ಟ್ರೇಲಿಯಾ ಹಾಗೂ ದಕ್ಷಿಣ ಆಫ್ರಿಕಾ ಎರಡು ಕೂಡ ಬಲಿಷ್ಠವಾದ ತಂಡಗಳು. ಈಗ ನಾವು ಆಸ್ಟ್ರೇಲಿಯಾ ವಿರುದ್ಧದ ಪಂದ್ಯಕ್ಕೆ ಸಿದ್ಧವಾಗುತ್ತಿದ್ದೇವೆ. ಅವರಿಗಾಗಿ ಯಾವೆಲ್ಲಾ ಯೋಜನೆಗಳನ್ನು ಮಾಡಿಕೊಳ್ಳಬೇಕು ಎನ್ನುವ ರಣತಂತ್ರವನ್ನು ಹೆಣೆದಿದ್ದೇವೆ" ಎಂದಿದ್ದಾರೆ ಕೋಚ್ ಜೊನಾಥನ್ ಟ್ರಾಟ್.

Story first published: Saturday, November 4, 2023, 9:15 [IST]
Other articles published on Nov 4, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+