World cup 2023: ಇಂದೇ ಭಾರತಕ್ಕೆ ಆಗಮಿಸಲಿದೆ ಪಾಕಿಸ್ತಾನ ತಂಡ
ವಿಶ್ವಕಪ್ ಟೂರ್ನಿಗೆ ಇನ್ನು ಬೆರಳಿಣಿಕೆಯ ದಿನಗಳು ಮಾತ್ರವೇ ಬಾಕಿಯಿದೆ. ಇದೀಗ ಒಂದೊಂದಾಗಿ ತಂಡಗಳು ಭಾರತದತ್ತ ಆಗಮಿಸುತ್ತಿದೆ. ಇದೀಗ ವೀಸಾ ಸಮಸ್ಯೆಯಿಂದಾಗಿ ಸಾಕಷ್ಟ ಸುದ್ದಿಯಾಗಿದ್ದ ಪಾಕಿಸ್ತಾನ ತಂಡ ಕೂಡ ಇಂದೇ ಭಾರತಕ್ಕೆ ಆಗಮಿಸಲಿದೆ. ಪಾಕಿಸ್ತಾನ ತಂಡ ಹೈದರಾಬಾದ್‌ಗೆ ಬಂದಿಳಿಯಲಿದ್ದು ನಾಳೆಯಿಂದಲೇ ಮೆಗಾ ಟೂರ್ನಿಗೆ ಅಭ್ಯಾಸ ನಡೆಸಲಿದೆ.
ಪಾಕಿಸ್ತಾನವು ಅಕ್ಟೋಬರ್ 6 ರಂದು ಹೈದರಾಬಾದ್‌ನಲ್ಲಿ ನೆದರ್ಲ್ಯಾಂಡ್ಸ್ ವಿರುದ್ಧ ಆಡುವ ಮೂಲಕ ವಿಶ್ವಕಪ್‌ನಲ್ಲಿ ತನ್ನ ಅಭಿಯಾನವನ್ನು ಆರಂಭಿಸಲಿದೆ. ಅಕ್ಟೋಬರ್ 14 ರಂದು ಭಾರತದ ವಿರುದ್ಧ ಅಹ್ಮದಾಬಾದ್‌ನಲ್ಲಿ ಪಂದ್ಯವನ್ನಾಡುವ ಮುನ್ನ ಪಾಕಿಸ್ತಾನ ತಂಡ ಅಕ್ಟೋಬರ್ 10 ರಂದು ಶ್ರೀಲಂಕಾ ವಿರುದ್ಧ ಹೈದರಾಬಾದ್‌ನಲ್ಲಿ ಮತ್ತೊಂದು ಪಂದ್ಯವನ್ನು ಆಡಲಿದ್ದಾರೆ.

ವಿಶ್ವಕಪ್‌ಗೂ ಮುನ್ನ ಪಾಕಿಸ್ತಾನ ಕೊನೆಯ ಬಾರಿಗೆ ಏಷ್ಯಾಕಪ್‌ನಲ್ಲಿ ಕಣಕ್ಕಿಳಿದಿತ್ತು. ಆದರೆ ಈ ಪ್ರತಿಷ್ಠಿತ ಟೂರ್ನಿಯಲ್ಲಿ ಬಾಬರ್ ಅಜಮ್ ನೇತೃತ್ವದ ತಂಡ ನಿರೀಕ್ಷಿತ ಪ್ರದರ್ಶನ ನೀಡಲು ವಿಫಲವಾಗಿ ಸೆಮಿಫೈನಲ್ ತಲುಪಲು ವಿಫಲವಾಗಿತ್ತು. ಹೀಗಾಗಿ ಬಾಬರ್ ಅಜಂ ನೇತೃತ್ವದ ಪಾಕಿಸ್ತಾನದ ವಿರುದ್ಧ ಸಾಕಷ್ಟು ಟೀಕೆಗಳು ಕೂಡ ಕೇಳಿ ಬಂದಿದ್ದವು.
ಇದೀಗ ಭಾರತಕ್ಕೆ ಬಂದಿಳಿಯಲಿರುವ ಪಾಕಿಸ್ತಾನ ತಂಡ ವಿಶ್ವಕಪ್‌ನಲ್ಲಿ ತಮ್ಮ ಅಭಿಯಾನವನ್ನು ಆರಂಭಿಸುವುದಕ್ಕೂ ಮುನ್ನ ಎರಡು ಅಭ್ಯಾಸ ಪಂದ್ಯಗಳನ್ನು ಆಡಲಿದೆ. ನೆದರ್ಲೆಂಡ್ಸ್ ವಿರುದ್ಧ ವಿಶ್ವಕಪ್‌ನಲ್ಲಿ ಅಧಿಕೃತವಾಗಿ ಸೆಣೆಸಾಡುವುದಕ್ಕೂ ಮುನ್ನ ಈ ಅಭ್ಯಾಸ ಪಂದ್ಯದಲ್ಲಿ ಆಡಿ ಟೂರ್ನಿಗೆ ಉತ್ತಮವಾಗಿ ಸಿದ್ಧತೆ ನಡೆಸಲು ಹಾತೊರೆಯುತ್ತಿದೆ.
ಇನ್ನು ವಿಶ್ವಕಪ್‌ಗೆ ಭಾರತಕ್ಕೆ ಪ್ರಯಾಣಿಸುವುದಕ್ಕೂ ಮುನ್ನ ಪಾಕಿಸ್ತಾನ ತಂಡಕ್ಕೆ ವೀಸಾ ದೊರೆಯುವುದು ವಿಳಂಭವಾಗಿತ್ತು. ಆದರೆ ಕಳೆದ ಸೋಮವಾರ ಭಾರತ ಸರ್ಕಾರದಿಂದ ಪಾಕಿಸ್ತಾನ ಕ್ರಿಕೆಟ್ ತಂಡದ ಆಟಗಾರರು ವೀಸಾ ಪಡೆದುಕೊಂಡಿದ್ದರು.
ಎಲ್ಲವೂ ಅಂದುಕೊಂಡಂತೆಯೇ ಆಗಿದ್ದರೆ ಪಾಕಿಸ್ತಾನ ತಂಡ ಸೆಪ್ಟೆಂಬರ್ 25ರಂದು ದುಬೈಗೆ ಪ್ರಯಾಣ ಬೆಳೆಸಿ ಅಲ್ಲಿ ವಿಶ್ವಕಪ್‌ಗೆ ಎರಡು ದಿನಗಳ ಪೂರ್ವಸಿದ್ಧತಾ ಶಿಬಿರದಲ್ಲಿ ಭಾಗಿಯಾಗಬೇಕಾಗಿತ್ತು. ಸೆಪ್ಟೆಂಬರ್ 27ರಂದು ದುಬೈನಿಂದ ಭಾರತಕ್ಕೆ ಪ್ರಯಾಣ ನಡೆಸಬೇಕಾಗಿತ್ತು. ಆದರೆ ವೀಸಾ ಗೊಂದಲದ ಕಾರಣದಿಂದಾಗಿ ಪಾಕಿಸ್ತಾನ ತಂಡ ದುಬೈ ಪ್ರಯಾಣ ಸಾಧ್ಯವಾಗಲಿಲ್ಲ. ಹೀಗಾಗಿ ಸೆಪ್ಟೆಂಬರ್ 27ರಂದು ನೇರವಾಗಿ ಪಾಕಿಸ್ತಾನ ತಂಡ ಭಾರತಕ್ಕೆ ಪ್ರಯಾಣಿಸುತ್ತಿದೆ.
ಇನ್ನು ವಿಶ್ವಕಪ್ ಟೂರ್ನಿ ಅಕ್ಟೋಬರ್ 5ರಿಂದ ಆರಂಭವಾಗಲಿದ್ದು ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಉದ್ಘಾಟನಾ ಪಂದ್ಯ ನಡೆಯಲಿದೆ. ಆದರೆ ಅಭ್ಯಾಸ ಪಂದ್ಯಗಳು ಸೆಪ್ಟೆಂಬರ್ 9ರಿಂದಲೇ ನಡೆಯಲಿದ್ದು ಟೂರ್ನಿಗೆ ಸಿದ್ಧತೆಯನ್ನು ನಡೆಸಿಕೊಳ್ಳಲಿದೆ. ಪಾಕಿಸ್ತಾನ ತಂಡ ತನ್ನ ಮೊದಲ ಅಭ್ಯಾಸ ಪಂದ್ಯವನ್ನು ನ್ಯೂಜಿಲೆಂಡ್ ವಿರುದ್ಧ ಸೆಪ್ಟೆಂಬರ್ 29ರಂದು ಹೈದರಾಬಾದ್‌ನಲ್ಲಿ ಆಡಿದ್ದು ಈ ಪಂದ್ಯವನ್ನು ಭದ್ರತೆಯ ಕಾರಣಗಳಿಂದಾಗಿ ಪ್ರೇಕ್ಷಕರಿಗೆ ಅವಕಾಶ ನೀಡದೆ ಆಯೋಜಿಸಲಾಗುತ್ತಿದೆ.
ಪಾಕಿಸ್ತಾನ ವಿಶ್ವಕಪ್ ತಂಡ ಹೀಗಿದೆ: ಬಾಬರ್ ಅಜಮ್ (ನಾಯಕ), ಶಾದಾಬ್ ಖಾನ್ (ಉಪ ನಾಯಕ), ಮುಹಮ್ಮದ್ ರಿಜ್ವಾನ್, ಇಮಾಮ್-ಉಲ್-ಹಕ್, ಅಬ್ದುಲ್ಲಾ ಶಫೀಕ್, ಸೌದ್ ಶಕೀಲ್, ಫಖರ್ ಜಮಾನ್, ಹಾರಿಸ್ ರೌಫ್, ಹಸನ್ ಅಲಿ, ಇಫ್ತಿಕರ್ ಅಹ್ಮದ್, ಮುಹಮ್ಮದ್ ನವಾಜ್, ಮುಹಮ್ಮದ್ ವಾಸಿಮ್ ಜೂನಿಯರ್, ಅಘಾ ಸಲ್ಮಾನ್, ಶಾಹೀನ್ ಶಾ ಅಫ್ರಿದಿ, ಒಸಾಮಾ ಮಿರ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications