ಕ್ರಿಕೆಟ್‌ನ ಮಹಾ ಕುಂಭಮೇಳ ಆರಂಭಕ್ಕೂ ಮುನ್ನ ಬಾಂಗ್ಲಾಗೆ ದೊಡ್ಡ ಪೆಟ್ಟು
2023ರ ODI ವಿಶ್ವಕಪ್ ಅಕ್ಟೋಬರ್ 5 ರಿಂದ ಭಾರತದಲ್ಲಿ ಪ್ರಾರಂಭವಾಗಲಿದೆ. ಇದಕ್ಕೂ ಮುನ್ನ ಶುಕ್ರವಾರ, ಸೆಪ್ಟೆಂಬರ್ 29 ರಿಂದ ಅಭ್ಯಾಸ ಪಂದ್ಯಗಳು ಆರಂಭವಾಗಿವೆ. ಕ್ರಿಕೆಟ್‌ನ ಅತಿ ದೊಡ್ಡ ಮಹಾಕುಂಭ ಮೇಳ ಆರಂಭಕ್ಕೂ ಮುನ್ನ ಬಾಂಗ್ಲಾದೇಶ ಕ್ರಿಕೆಟ್ ತಂಡಕ್ಕೆ ದೊಡ್ಡ ಪೆಟ್ಟು ಬಿದ್ದಿದೆ.
ತಂಡದ ನಾಯಕ ಶಕೀಬ್ ಅಲ್ ಹಸನ್ ಫುಟ್ಬಾಲ್ ಆಡುವಾಗ ಗಾಯಗೊಂಡಿದ್ದಾರೆ. ವರದಿಯ ಪ್ರಕಾರ, ಶಕೀಬ್ ಅಭ್ಯಾಸ ಪಂದ್ಯ ಮತ್ತು ವಿಶ್ವಕಪ್‌ನ ಮೊದಲ ಪಂದ್ಯ ಎರಡರಿಂದಲೂ ಹೊರಗುಳಿದಿದ್ದಾರೆ.

ಮಾಧ್ಯಮ ವರದಿಗಳ ಪ್ರಕಾರ, ಬಾಂಗ್ಲಾದೇಶದ ನಾಯಕ ಶಕೀಬ್ ಅಲ್ ಹಸನ್ ವಿಶ್ವಕಪ್‌ನ ಎರಡೂ ಅಭ್ಯಾಸ ಪಂದ್ಯಗಳಲ್ಲಿ ಭಾಗವಹಿಸುವುದಿಲ್ಲ. ಇದರೊಂದಿಗೆ ಅವರು ವಿಶ್ವಕಪ್‌ನ ಮೊದಲ ಪಂದ್ಯದಿಂದಲೂ ಹೊರಗುಳಿಯಬಹುದು.
ಬಾಂಗ್ಲಾದೇಶ ತಂಡವು ಶ್ರೀಲಂಕಾ ವಿರುದ್ಧ ತನ್ನ ಮೊದಲ ಅಭ್ಯಾಸ ಪಂದ್ಯವನ್ನು ಆಡುತ್ತಿದೆ. ಸ್ಪಿನ್ ಆಲ್ ರೌಂಡರ್ ಮೆಹದಿ ಹಸನ್ ಮೆರಾಜ್ ಈ ಪಂದ್ಯದಲ್ಲಿ ಬಾಂಗ್ಲಾ ತಂಡದ ಸಾರಥ್ಯ ವಹಿಸಿದ್ದಾರೆ. ಶಕೀಬ್ ಗಾಯಗೊಂಡಿರುವುದು ಬಾಂಗ್ಲಾದೇಶಕ್ಕೆ ದೊಡ್ಡ ಹೊಡೆತ ಎಂದು ಪರಿಗಣಿಸಲಾಗಿದೆ. ಶಕೀಬ್ ಅಲ್ ಹಸನ್ ಏಕಾಂಗಿಯಾಗಿ ಬ್ಯಾಟಿಂಗ್ ಹಾಗೂ ಬೌಲಿಂಗ್ ಮೂಲಕ ತಂಡಕ್ಕೆ ಆಧಾರವಾಗಬಲ್ಲ ಪ್ಲೇಯರ್. ಅವರ ಗಾಯ ತಂಡಕ್ಕೆ ದೊಡ್ಡ ಸಮಸ್ಯೆಯಾಗಬಹುದು.
ಬಾಂಗ್ಲಾದೇಶ ವಿಶ್ವಕಪ್ ಅಭಿಯಾನ
ಬಾಂಗ್ಲಾದೇಶ ವಿಶ್ವಕಪ್ ಅಭಿಯಾನವನ್ನು ಅಕ್ಟೋಬರ್ 7 ರಂದು ಆರಂಭಿಸಲಿದೆ. ಬಾಂಗ್ಲಾ, ಅಫ್ಘಾನಿಸ್ತಾನ ತಂಡದ ವಿರುದ್ಧ ಕಾದಾಟವನ್ನು ನಡೆಸಲಿದೆ. ಅಕ್ಟೋಬರ್ 10 ರಂದು ಹಾಲಿ ಚಾಂಪಿಯನ್ ಇಂಗ್ಲೆಂಡ್ ವಿರುದ್ಧ, ಅಕ್ಟೋಬರ್ 13 ರಂದು ನ್ಯೂಜಿಲೆಂಡ್ ವಿರುದ್ಧ, ಅಕ್ಟೋಬರ್ 19 ರಂದು ಭಾರತದ ವಿರುದ್ಧ, 24 ರಂದು ದಕ್ಷಿಣ ಆಫ್ರಿಕಾ ವಿರುದ್ಧ, 28 ರಂದು ನೆದರ್ಲೆಂಡ್ಸ್ ವಿರುದ್ಧ ಸೆಣಸಾಟವನ್ನು ನಡೆಸಲಿದೆ.
ನ್ಯೂಜಿಲೆಂಡ್ ಕೂಡ ವಿಶ್ವಕಪ್ ಆರಂಭಕ್ಕೂ ಮುನ್ನವೇ ದೊಡ್ಡ ಹಿನ್ನಡೆ ಅನುಭವಿಸಿದೆ. ಕಿವೀಸ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಸಂಪೂರ್ಣ ಫಿಟ್ ಆಗಿಲ್ಲದ ಕಾರಣ ವಿಶ್ವಕಪ್‌ನ ಮೊದಲ ಪಂದ್ಯದಿಂದ ಹೊರಗುಳಿದಿದ್ದಾರೆ.
ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಕೇನ್ ವಿಲಿಯಮ್ಸನ್ ಆಡುವುದಿಲ್ಲ
ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಕೇನ್ ವಿಲಿಯಮ್ಸನ್ ಆಡುವುದಿಲ್ಲ. ಐಪಿಎಲ್‌ನ ಮೊದಲ ಪಂದ್ಯದಲ್ಲಿ ವಿಲಿಯಮ್ಸನ್ ಗಾಯಗೊಂಡಿದ್ದರು. ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ನಡುವೆ ವಿಶ್ವಕಪ್‌ನ ಮೊದಲ ಪಂದ್ಯ ನಡೆಯಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications