For Quick Alerts
ALLOW NOTIFICATIONS  
For Daily Alerts
 

ವಿಶ್ವಕಪ್ 2023: ಈ ಕ್ರೀಡಾಂಗಣದ ನವೀಕರಣಕ್ಕೆ ಬಿಸಿಸಿಐ ಜೊತೆ ಕೈಜೋಡಿಸಿದ ಐಪಿಎಲ್ ಫ್ರಾಂಚೈಸಿ

2023ರ ಏಕದಿನ ವಿಶ್ವಕಪ್‌ಗೆ ಮುಂಚಿತವಾಗಿ ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣ ನವೀಕರಣಕ್ಕೆ ಒಳಗಾಗಲಿದ್ದು, ಇದಕ್ಕೆ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಫ್ರಾಂಚೈಸಿ ಡೆಲ್ಲಿ ಕ್ಯಾಪಿಟಲ್ಸ್ ಗಣನೀಯ ಆರ್ಥಿಕವಾಗಿ ಕೈಜೋಡಿಸಲಿದೆ.

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಕ್ರೀಡಾಂಗಣದ ನವೀಕರಣಕ್ಕಾಗಿ 50 ಕೋಟಿ ರೂಪಾಯಿಗಳನ್ನು ನೀಡಿದ್ದರೂ, ದೆಹಲಿ ಮೂಲದ ಐಪಿಎಲ್ ಫ್ರಾಂಚೈಸಿ ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಸಂಸ್ಥೆಗೆ (ಡಿಡಿಸಿಎ) ಧನಸಹಾಯ ನೀಡಲು ಮುಂದಾಗಿದೆ.

ಇದೇ ಅಕ್ಟೋಬರ್ 5ರಿಂದ ನವೆಂಬರ್‌ 19ರವರೆಗೆ ನಡೆಯಲಿರುವ ಏಕದಿನ ವಿಶ್ವಕಪ್‌ನಲ್ಲಿ ಅರುಣ್ ಜೇಟ್ಲಿ ಕ್ರೀಡಾಂಗಣ 5 ಪಂದ್ಯಗಳನ್ನು ಆಯೋಜಿಸಲು ಸ್ಥಳವನ್ನು ಸಿದ್ಧಪಡಿಸಲಾಗುತ್ತಿದೆ.

world-cup-2023

ಅರುಣ್ ಜೇಟ್ಲಿ ಸ್ಟೇಡಿಯಂ ಕ್ರೀಡಾಂಗಣವನ್ನು ಹಿಂದೆ ಫಿರೋಜ್ ಶಾ ಕೋಟ್ಲಾ ಸ್ಟೇಡಿಯಂ ಎಂದು ಕರೆಯಲಾಗುತ್ತಿತ್ತು. ಇದು ಐಪಿಎಲ್ ಮತ್ತು ಮಹಿಳಾ ಪ್ರೀಮಿಯರ್ ಲೀಗ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಗೆ ತವರಿನ ಮೈದಾನವಾಗಿದೆ.

ವರದಿಗಳ ಪ್ರಕಾರ, ಡೆಲ್ಲಿ ಕ್ಯಾಪಿಟಲ್ಸ್ ಸಹ-ಮಾಲೀಕ ಪಾರ್ಥ್ ಜಿಂದಾಲ್ ಮತ್ತು ಡಿಡಿಸಿಎ ಅಧ್ಯಕ್ಷ ರೋಹನ್ ಜೇಟ್ಲಿ ಈಗಾಗಲೇ ಕ್ರೀಡಾಂಗಣದಲ್ಲಿ ನವೀಕರಣದ ವ್ಯವಸ್ಥೆಗಳ ಬಗ್ಗೆ ಚರ್ಚಿಸಿದ್ದಾರೆ. ಪಂದ್ಯದ ಸಮಯದಲ್ಲಿ ಪ್ರೇಕ್ಷಕರ ಅನುಭವವನ್ನು ಹೇಗೆ ಸುಧಾರಿಸುವುದು ಎಂಬುದನ್ನು ನಿರ್ಧರಿಸುವುದು ಸಭೆಯ ಕಾರ್ಯಸೂಚಿಯಾಗಿತ್ತು.

"ಕ್ರೀಡಾಂಗಣದಲ್ಲಿ ಎರಡು ಕ್ಲಾಸಿ ಆತಿಥ್ಯ ಪೆಟ್ಟಿಗೆಗಳನ್ನು ಸ್ಥಾಪಿಸಲು ಚರ್ಚೆಗಳು ನಡೆದಿವೆ. ವಿಶ್ವಕಪ್‌ ವೇಳೆಗೆ ತಾತ್ಕಾಲಿಕ ಬಾಕ್ಸ್‌ಗಳನ್ನು ಸ್ಥಾಪಿಸಿ ಮುಂದಿನ ಐಪಿಎಲ್‌ ವೇಳೆಗೆ ಯೋಜನೆ ಪೂರ್ಣಗೊಳಿಸುವ ಆಲೋಚನೆ ಇದೆ".

"ಪಂದ್ಯಗಳ ಸಮಯದಲ್ಲಿ ಪ್ರೇಕ್ಷಕರ ಅನುಭವಕ್ಕೆ ಸಂಬಂಧಿಸಿದಂತೆ ಈಗಾಗಲೇ ಕ್ರೀಡಾಂಗಣವು ಅನೇಕ ದೂರುಗಳನ್ನು ಸ್ವೀಕರಿಸಿದೆ. ಡಿಡಿಸಿಎ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಅದನ್ನು ಆದ್ಯತೆಯಾಗಿ ತೆಗೆದುಕೊಂಡಿದೆ," ಎಂದು ಡಿಡಿಸಿಎ ಮೂಲಗಳು ತಿಳಿಸಿವೆ.

world-cup-2023

"ಯುರೋಪ್‌ನಲ್ಲಿರುವ ಫುಟ್‌ಬಾಲ್ ಸ್ಟೇಡಿಯಂಗಳನ್ನು ಕಾರ್ಪೊರೇಟ್‌ಗಳು ತಮ್ಮ ಕ್ಲಬ್ ತಂಡಗಳಿಗೆ ಸೌಲಭ್ಯಗಳನ್ನು ಕಾಪಾಡಿಕೊಳ್ಳಲು ನಿರ್ವಹಣೆ ಮಾಡುತ್ತಾರೆ. ಅದೇ ರೀತಿ ಇಲ್ಲಿ ಮಾಡಲಾಗುತ್ತದೆ. ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಐಪಿಎಲ್ ವೇಳೆ ಎರಡು ತಿಂಗಳಿಗಿಂತ ಹೆಚ್ಚು ಕಾಲ ಕ್ರೀಡಾಂಗಣದ ಅಗತ್ಯವಿದೆ," ಎಂದು ಹೇಳಿವೆ.

ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ವಿಶ್ವಕಪ್‌ನ ಐದು ಲೀಗ್ ಪಂದ್ಯಗಳು

2023ರ ಏಕದಿನ ವಿಶ್ವಕಪ್‌ನಲ್ಲಿ ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣವು ಒಟ್ಟು ಐದು ಲೀಗ್ ಪಂದ್ಯಗಳನ್ನು ಆಯೋಜಿಸುತ್ತದೆ. ಮೊದಲ ಪಂದ್ಯವು ಅಕ್ಟೋಬರ್ 7ರಂದು ನಡೆಯಲಿದೆ.

ಅಕ್ಟೋಬರ್ 11ರಂದು ಭಾರತ ತಂಡ ಅಫ್ಘಾನಿಸ್ತಾನ ತಂಡವನ್ನು ಎದುರಿಲಿದೆ. ನಂತರ, ಅಕ್ಟೋಬರ್ 14ರಂದು ಇಂಗ್ಲೆಂಡ್ ತಂಡವು ಅಫ್ಘಾನಿಸ್ತಾನ ತಂಡದ ವಿರುದ್ಧ ಆಡಲಿದೆ. ಉಳಿದ ಎರಡು ಪಂದ್ಯಗಳು ಅಕ್ಟೋಬರ್ 25 ಮತ್ತು ನವೆಂಬರ್ 6ರಂದು ನಡೆಯಲಿವೆ.

ಪ್ರಸ್ತುತ, ಅರುಣ್ ಜೇಟ್ಲಿ ಕ್ರೀಡಾಂಗಣವು ಸುಮಾರು 35,000 ಪ್ರೇಕ್ಷಕರ ಸಾಮರ್ಥ್ಯವನ್ನು ಹೊಂದಿದೆ. ಈ ಸ್ಟೇಡಿಯಂ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 2023ರ ಬಾರ್ಡರ್-ಗವಾಸ್ಕರ್ ಟ್ರೋಫಿ ಸರಣಿಯ ಸಮಯದಲ್ಲಿ ವಾಶ್‌ರೂಮ್‌ಗಳಲ್ಲಿ ಸ್ವಚ್ಛತೆಗಾಗಿ ಪ್ರೇಕ್ಷಕರಿಂದ ಟೀಕೆಗಳನ್ನು ಎದುರಿಸಿತ್ತು.

ಗಮನಾರ್ಹವಾಗಿ, ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ಐಪಿಎಲ್ ಪಂದ್ಯಾವಳಿ ಇಲ್ಲದ ಸಮಯದಲ್ಲಿ ಕ್ರೀಡಾಂಗಣದ ಉನ್ನತೀಕರಣ ಪ್ರಕ್ರಿಯೆಯಲ್ಲಿ ಭಾಗಿಯಾದ ಮೊದಲ ನಿದರ್ಶನವಾಗಿದೆ.

Story first published: Thursday, July 27, 2023, 16:30 [IST]
Other articles published on Jul 27, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+