World Cup 2023 Final: ಭಾರತ vs ಆಸ್ಟ್ರೇಲಿಯಾ ಫೈನಲ್ ಪಂದ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಖುದ್ದು ಹಾಜರಿ!
ಭಾನುವಾರ, ನವೆಂಬರ್ 19ರಂದು ಅಹಮದಾಬಾದ್‌ನ ಮೊಟೆರಾದಲ್ಲಿರುವ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ 2023ರ ಐಸಿಸಿ ಏಕದಿನ ವಿಶ್ವಕಪ್ ಗ್ರ್ಯಾಂಡ್ ಫೈನಲ್‌ನ ಆತಿಥೇಯ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಹೈ-ವೋಲ್ಟೇಜ್ ಪಂದ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಖುದ್ದು ಹಾಜರಾಗಲಿದ್ದಾರೆ ಎಂದು ವರದಿಗಳು ತಿಳಿಸಿವೆ.
ಬುಧವಾರ, ನವೆಂಬರ್ 15ರಂದು ನಡೆದ ಮೊದಲ ಸೆಮಿಫೈನಲ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ 70 ರನ್‌ಗಳಿಂದ ಗೆದ್ದ ಭಾರತ ತಂಡ ಈಗಾಗಲೇ ಫೈನಲ್ ಪಂದ್ಯಕ್ಕೆ ಅರ್ಹತೆ ಪಡೆದುಕೊಂಡಿದೆ.

ಇನ್ನು ಗುರುವಾರ, ನವೆಂಬರ್ 16ರಂದು ಕೋಲ್ಕತ್ತಾದ ಈಡನ್ ಗಾರ್ಡನ್‌ನಲ್ಲಿ ನಡೆದ ಎರಡನೇ ಸೆಮಿಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು 3 ವಿಕೆಟ್‌ಗಳಿಂದ ಸೋಲಿಸಿದ ನಂತರ, ಆಸ್ಟ್ರೇಲಿಯಾ ತಂಡವೂ ಫೈನಲ್‌ಗೆ ಪ್ರವೇಶ ಪಡೆದಿದೆ.
ದೈನಿಕ್ ಜಾಗರಣ್ ವರದಿಯ ಪ್ರಕಾರ, ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವಿಶ್ವ ಕ್ರಿಕೆಟ್‌ನ ಅತಿದೊಡ್ಡ ಫೈನಲ್ ಪಂದ್ಯಕ್ಕೆ ಸಾಕ್ಷಿಯಾಗಲಿದ್ದಾರೆ ಎಂದು ತಿಳಿಸಿದೆ. ಅಲ್ಲದೆ, ಅಹಮದಾಬಾದ್‌ನ ಕ್ರಿಕೆಟ್ ಸ್ಟೇಡಿಯಮ್‌ಗೆ ನರೇಂದ್ರ ಮೋದಿ ಹೆಸರು ಇಡಲಾಗಿದ್ದು, 1.30 ಲಕ್ಷ ಪ್ರೇಕ್ಷಕರ ಆಸನ ಹೊಂದಿರುವ ವಿಶ್ವದ ಅತಿದೊಡ್ಡ ಕ್ರಿಕೆಟ್ ಕ್ರೀಡಾಂಗಣವಾಗಿದೆ.

ಇನ್ನು ಭಾರತ ತಂಡವು 12 ವರ್ಷಗಳ ನಂತರ, ಮೊದಲ ಬಾರಿಗೆ 50-ಓವರ್‌ಗಳ ವಿಶ್ವಕಪ್ ಫೈನಲ್‌ನಲ್ಲಿ ಕಾಣಿಸಿಕೊಂಡಿದೆ. 2011ರಲ್ಲಿ ಎಂಎಸ್ ಧೋನಿ ನಾಯಕತ್ವದ ಭಾರತ ತಂಡವು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಶ್ರೀಲಂಕಾ ತಂಡವನ್ನು ಸೋಲಿಸಿ ಎರಡನೇ ಬಾರಿಗೆ ಐಸಿಸಿ ಪ್ರಶಸ್ತಿಯನ್ನು ಗೆದ್ದುಕೊಂಡಿತು.
2013ರಲ್ಲಿ ಎಂಎಸ್ ಧೋನಿ ನಾಯಕತ್ವದಲ್ಲಿಭಾರತ ತಂಡ ಐಸಿಸಿ ಚಾಂಪಿಯನ್ಸ್ ಟ್ರೋಫಿ ಗೆದ್ದಿತ್ತು. ಇದೀಗ ಒಂದು ದಶಕದ ನಂತರ, ಟೀಮ್ ಇಂಡಿಯಾ ಗುಜರಾತ್‌ನ ವಿಶ್ವದ ಅತಿದೊಡ್ಡ ಕ್ರಿಕೆಟ್ ಸ್ಟೇಡಿಯಂನಲ್ಲಿ 3ನೇ ಬಾರಿಗೆ ವಿಶ್ವ ಚಾಂಪಿಯನ್ ಆಗಲು ಕೇವಲ ಒಂದು ಹೆಜ್ಜೆ ದೂರದಲ್ಲಿದೆ.

ಖ್ಯಾತ ಅಂತಾರಾಷ್ಟ್ರೀಯ ಗಾಯಕ, ಬಹು-ಬಾರಿ ಗ್ರ್ಯಾಮಿ ಪ್ರಶಸ್ತಿ ವಿಜೇತ ದುವಾ ಲಿಪಾ ಅವರು ವಿಶ್ವಕಪ್ ಪಂದ್ಯಾವಳಿಯ ಸಮಾರೋಪ ಸಮಾರಂಭದಲ್ಲಿ ಕಾಣಿಸಿಕೊಳ್ಳಲಿರುವುದರಿಂದ ಫೈನಲ್ ಪಂದ್ಯಕ್ಕೂ ಮುನ್ನ ಸಂಗೀತ ಕಾರ್ಯಕ್ರಮ ನಡೆಸಿಕೊಳ್ಳಲಿದ್ದಾರೆ.
ಅಲ್ಲದೆ, ಭಾರತೀಯ ವಾಯುಪಡೆಯ (ಐಎಎಫ್) ಸೂರ್ಯಕಿರಣ ಏರೋಬ್ಯಾಟಿಕ್ ತಂಡ ವಿಶ್ವಕಪ್ ಫೈನಲ್ ಹಣಾಹಣಿಗೂ ಮುನ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಏರ್ ಶೋ ನಡೆಸಲಿದೆ.
ಇನ್ನು ಭಾರತ ತಂಡದ ಬಗ್ಗೆ ಮಾತನಾಡುವುದಾದರೆ, ರೋಹಿತ್ ಶರ್ಮಾ ನಾಯಕತ್ವದ ತಂಡವು ಈ ವಿಶ್ವಕಪ್‌ನಲ್ಲಿ ಆಡಿದ 10 ಪಂದ್ಯಗಳಲ್ಲಿ ಅಜೇಯವಾಗಿದೆ. ಇದೀಗ ಫೈನಲ್ ಪ್ರವೇಶಿಸಿರುವ ಆಸ್ಟ್ರೇಲಿಯಾ ತಂಡವು ಈ ಬಾರಿಯ ವಿಶ್ವಕಪ್‌ನಲ್ಲಿ ಆರಂಭಿಕ ಎರಡು ಪಂದ್ಯಗಳನ್ನು ಸೋತಿದೆ.
2003 ಮತ್ತು 2007ರ ಆಸ್ಟ್ರೇಲಿಯಾ ತಂಡ ಮತ್ತು 1975ರ ವೆಸ್ಟ್ ಇಂಡೀಸ್ ತಂಡದಂತೆ ಅಜೇಯವಾಗಿ ಚಾಂಪಿಯನ್ ಆಗುವ ಅವಕಾಶವನ್ನು ಭಾರತ ತಂಡ ಹೊಂದಿದೆ.
ಭಾರತ ತಂಡವು 2023ರ ವಿಶ್ವಕಪ್‌ಗೂ ಮೊದಲು ಒಟ್ಟು 3 ಬಾರಿ ಫೈನಲ್ ತಲುಪಿತ್ತು. ಅವರು ಮೊದಲ ಬಾರಿಗೆ 1983ರಲ್ಲಿ ಲೆಜೆಂಡರಿ ಆಲ್‌ರೌಂಡರ್ ಕಪಿಲ್ ದೇವ್ ನಾಯಕತ್ವದಲ್ಲಿ ಪ್ರಶಸ್ತಿಯನ್ನು ಗೆದ್ದರು. ನಂತರ 2003ರಲ್ಲಿ ಸೌರವ್ ಗಂಗೂಲಿ ನಾಯಕತ್ವದಲ್ಲಿ ಆಸ್ಟ್ರೇಲಿಯಾ ವಿರುದ್ಧ ಫೈನಲ್‌ನಲ್ಲಿ ಸೋಲು ಕಂಡಿತು. ನಂತರ, 2011ರಲ್ಲಿ ಎಂಎಸ್ ಧೋನಿ ನಾಯಕತ್ವದಲ್ಲಿ ಚಾಂಪಿಯನ್ ಆಗಿತ್ತು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications