Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

World Cup 2023 Final: ಸರಣಿಶ್ರೇಷ್ಠ ಆಟಗಾರ ಪ್ರಶಸ್ತಿ ಗೆದ್ದ ವಿರಾಟ್ ಕೊಹ್ಲಿ; ಈ ಸಾಧನೆ ಮಾಡಿದ 3ನೇ ಭಾರತೀಯ

ಭಾನುವಾರ, ನವೆಂಬರ್ 19ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ 2023ರ ಐಸಿಸಿ ಏಕದಿನ ವಿಶ್ವಕಪ್ ಫೈನಲ್‌ನಲ್ಲಿ ಆಸ್ಟ್ರೇಲಿಯಾ ತಂಡವು ಆತಿಥೇಯ ಭಾರತ ತಂಡವನ್ನು ಸೋಲಿಸಿ 6ನೇ ಬಾರಿಗೆ ವಿಶ್ವಕಪ್ ಟ್ರೋಫಿ ಎತ್ತಿಹಿಡಿಯಿತು.

ಇದೇ ವೇಳೆ 1983 ಮತ್ತು 2011ರ ನಂತರ ಮೂರನೇ ಏಕದಿನ ವಿಶ್ವಕಪ್ ಪ್ರಶಸ್ತಿ ಎತ್ತಿಹಿಡಿಯುವ ಕನಸು ಕಂಡಿದ್ದ ಭಾರತ ತಂಡಕ್ಕೆ ಮತ್ತೊಮ್ಮೆ ನಿರಾಸೆ ಕಾಡಿತು. ಪಂದ್ಯಾವಳಿಯುದ್ದಕ್ಕೂ ಅತ್ಯುತ್ತಮ ಪ್ರದರ್ಶನ ನೀಡಿದ್ದ ಟೀಮ್ ಇಂಡಿಯಾ ಪ್ರಶಸ್ತಿ ಸುತ್ತಿನ ಪಂದ್ಯದಲ್ಲಿ ಸೋತು ಮುಖಭಂಗ ಅನುಭವಿಸಿತು.

World Cup 2023 Final: Virat Kohli Wins Player Of The Series Award; 3rd Indian to Achieve This Feat

ಭಾರತ ವಿರುದ್ಧ ಫೈನಲ್ ಪಂದ್ಯದಲ್ಲಿ 120 ಎಸೆತಗಳಲ್ಲಿ 15 ಬೌಂಡರಿ ಹಾಗೂ 4 ಸಿಕ್ಸರ್‌ಗಳ ಸಮೇತ 137 ರನ್ ಬಾರಿಸಿ ಪಂದ್ಯ ವಿಜೇತವಾಡಿದ ಟ್ರಾವಿಸ್ ಹೆಡ್ ಪಂದ್ಯಶ್ರೇಷ್ಠ ಆಟಗಾರ ಪ್ರಶಸ್ತಿ ಪಡೆದುಕೊಂಡರು.

1
1-2023

ಇನ್ನು ಫೈನಲ್ ಪಂದ್ಯದ ನಂತರ ಭಾರತ ತಂಡದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಅವರು 2023ರ ಐಸಿಸಿ ಏಕದಿನ ವಿಶ್ವಕಪ್ ಪಂದ್ಯಾವಳಿ ಶ್ರೇಷ್ಠ ಆಟಗಾರ ಪ್ರಶಸ್ತಿಗೆ ಭಾಜನರಾದರು.

35 ವರ್ಷದ ವಿರಾಟ್ ಕೊಹ್ಲಿ ಈ ವಿಶ್ವಕಪ್‌ನಲ್ಲಿ ಆಡಿದ 11 ಇನ್ನಿಂಗ್ಸ್‌ಗಳಲ್ಲಿ ಮೂರು ಶತಕ ಮತ್ತು ಆರು ಅರ್ಧಶತಕ ಸೇರಿದಂತೆ 95.62ರ ಸರಾಸರಿ ಮತ್ತು 90.31ರ ಸ್ಟ್ರೈಕ್ ರೇಟ್‌ನಲ್ಲಿ 765 ರನ್ ಗಳಿಸಿದ್ದಾರೆ. ಇದು ಏಕದಿನ ವಿಶ್ವಕಪ್ ಇತಿಹಾಸದಲ್ಲಿಯೇ ಆವೃತ್ತಿ ಒಂದರಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರನಾದರು.

World Cup 2023 Final: Virat Kohli Wins Player Of The Series Award; 3rd Indian to Achieve This Feat

ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ವಿರಾಟ್ ಕೊಹ್ಲಿ 63 ಎಸೆತಗಳಲ್ಲಿ 54 ರನ್ ಗಳಿಸಿದರು. ವಿಶ್ವಕಪ್ ಅಭಿಯಾನದ ಸಮಯದಲ್ಲಿ ಕೊಹ್ಲಿ ಅವರು ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ 49 ಏಕದಿನ ಶತಕಗಳ ವಿಶ್ವದಾಖಲೆಯನ್ನು ಮುರಿದರು ಮತ್ತು ಸಾರ್ವಕಾಲಿಕ 50ನೇ ಏಕದಿನ ಶತಕ ದಾಖಲಿಸಿದರು.

ಏಕದಿನ ವಿಶ್ವಕಪ್‌ನಲ್ಲಿ ಸರಣಿಶ್ರೇಷ್ಠ ಆಟಗಾರ ಪ್ರಶಸ್ತಿ ಪಡೆದ ಆಟಗಾರರು

1992 - ಮಾರ್ಟಿನ್ ಕ್ರೋವ್ (ನ್ಯೂಜಿಲೆಂಡ್) - 456 ರನ್
1996 - ಸನತ್ ಜಯಸೂರ್ಯ (ಶ್ರೀಲಂಕಾ) - 221 ರನ್ ಮತ್ತು ಆರು ವಿಕೆಟ್
1999 - ಲ್ಯಾನ್ಸ್ ಕ್ಲೂಸೆನರ್ (ದಕ್ಷಿಣ ಆಫ್ರಿಕಾ) - 281 ರನ್ ಮತ್ತು 17 ವಿಕೆಟ್
2003 - ಸಚಿನ್ ತೆಂಡೂಲ್ಕರ್ (ಭಾರತ) - 673 ರನ್ ಮತ್ತು ಎರಡು ವಿಕೆಟ್
2007 - ಗ್ಲೆನ್ ಮೆಕ್‌ಗ್ರಾತ್ (ಆಸ್ಟ್ರೇಲಿಯಾ) - 26 ವಿಕೆಟ್
2011 - ಯುವರಾಜ್ ಸಿಂಗ್ (ಭಾರತ) - 362 ರನ್ ಮತ್ತು 15 ವಿಕೆಟ್
2015 - ಮಿಚೆಲ್ ಸ್ಟಾರ್ಕ್ (ಆಸ್ಟ್ರೇಲಿಯಾ) - 22 ವಿಕೆಟ್
2019 - ಕೇನ್ ವಿಲಿಯಮ್ಸನ್ (ನ್ಯೂಜಿಲೆಂಡ್) - 578 ರನ್ ಮತ್ತು 2 ವಿಕೆಟ್; ನಾಯಕತ್ವ
2023 - ವಿರಾಟ್ ಕೊಹ್ಲಿ (ಭಾರತ) - 765 ರನ್ ಮತ್ತು 1 ವಿಕೆಟ್

Story first published: Sunday, November 19, 2023, 23:45 [IST]
Other articles published on Nov 19, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+