ವಿಶ್ವಕಪ್ 2023: ಅಮೋಘ ಶತಕ ಸಿಡಿಸಿ ಅಬ್ಬರಿಸಿದ ಶ್ರೇಯಸ್ ಐಯ್ಯರ್
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಟೀಮ್ ಇಂಡಿಯಾ ಬ್ಯಾಟರ್‌ಗಳು ಅಬ್ಬರಿಸಿದ್ದಾರೆ. ನೆದರ್ಲೆಂಡ್ಸ್ ವಿರುದ್ಧದ ಪಂದ್ಯದಲ್ಲಿ ಅಮೋಘ ಪ್ರದರ್ಶನ ನೀಡಿದ ಶ್ರೇಯಸ್ ಐಯ್ಯರ್ ಸ್ಪೋಟಕ ಶತಕ ಸಿಡಿಸಿದ್ದಾರೆ. ಈ ಮೂಲಕ ಟೀಮ್ ಇಂಡಿಯಾದ ಬೃಹತ್ ಮೊತ್ತಕ್ಕೆ ಕಾರಣವಾಗಿದ್ದಾರೆ ಶ್ರೇಯಸ್ ಐಯ್ಯರ್.
ಈ ಪಂದ್ಯದಲ್ಲಿ ಟೀಮ್ ಇಂಡಿಯಾದ ಎಲ್ಲಾ ಬ್ಯಾಟರ್‌ಗಳು ಕೂಡ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. ಆರಂಭಿಕರಾದ ರೋಹಿತ್ ಶರ್ಮಾ ಹಾಗೂ ಶುಬ್ಮನ್ ಗಿಲ್ ಭರ್ಜರಿ ಶತಕದ ಜೊತೆಯಾಟ ನೀಡಿದ್ದರು. ಮಾತ್ರವಲ್ಲದೆ ಈ ಇಬ್ಬರು ದಾಂಡಿಗರು ಕೂಡ ಅರ್ಧ ಶತಕ ಸಿಡಿಸಿ ವಿಕೆಟ್ ಕಳೆದುಕೊಂಡರು. ನಂತರ ಕಣಕ್ಕಿಳಿದ ವಿರಾಟ್ ಕೊಹ್ಲಿ ಕೂಡ ಅರ್ಧ ಶತಕದ ಆಟವನ್ನು ಆಡಿದ್ದಾರೆ. ಆದರೆ ಶ್ರೇಯಸ್ ಐಯ್ಯರ್ ಈ ಪಂದ್ಯದಲ್ಲಿ ಮೂರಂಕಿ ದಾಟುವಲ್ಲಿ ಯಶಸ್ವಿಯಾಗಿದ್ದಾರೆ.

ಈ ವಿಶ್ವಕಪ್‌ನ ಆರಂಭದಲ್ಲಿ ಶ್ರೇಯಸ್ ಐಯ್ಯರ್ ಅವರಿಂದ ನಿರೀಕ್ಷಿತ ಪ್ರದರ್ಶನ ಬಂದಿರಲಿಲ್ಲ. ಆದರೆ ಕಳೆದ ಮೂರು ಪಂದ್ಯಗಳಲ್ಲಿ ಐಯ್ಯರ್ ಸತತ ಮೂರು 50+ ರನ್ ಬಾರಿಸಿದ್ದು ತಮ್ಮ ಅದ್ಭುತ ಫಾರ್ಮ್ ಮುಂದುವರಿಸಿದ್ದಾರೆ. ಇನ್ನು ನೆದರ್ಲೆಂಡ್ಸ್ ವಿರುದ್ಧ ಶತಕ ಸಿಡಿಸಿದ ಮೊದಲ ಭಾರತೀಯ ಆಟಗಾರ ಎನಿಸಿಕೊಂಡಿದ್ದಾರೆ ಐಯ್ಯರ್. ಇನ್ನು ಬೆಂಗಳೂರಿನಲ್ಲಿ ಶತಕ ಸಿಡಿಸಿದ ನಾಲ್ಕನೇ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ರೋಹಿತ್ ಶರ್ಮಾ, ಸಚಿನ್ ತೆಂಡೂಲ್ಕರ್ ಹಾಗೂ ಯೂಸೂಫ್ ಪಠಾಣ್ ಬಳಿಕ ಈ ಸಾಧನೆ ಮಾಡಿದ ಮತ್ತೋರ್ವ ಬ್ಯಾಟರ್ ಎನಿಸಿಕೊಂಡಿದ್ದಾರೆ.
ಟೀಮ್ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್
ಬೆಂಚ್: ಪ್ರಸಿದ್ಧ್ ಕೃಷ್ಣ, ರವಿಚಂದ್ರನ್ ಅಶ್ವಿನ್, ಇಶಾನ್ ಕಿಶನ್, ಶಾರ್ದೂಲ್ ಠಾಕೂರ್
ನೆದರ್ಲೆಂಡ್ಸ್: ವೆಸ್ಲಿ ಬ್ಯಾರೆಸಿ, ಮ್ಯಾಕ್ಸ್ ಓಡೌಡ್, ಕಾಲಿನ್ ಅಕರ್‌ಮನ್, ಸೈಬ್ರಾಂಡ್ ಎಂಗಲ್‌ಬ್ರೆಕ್ಟ್, ಸ್ಕಾಟ್ ಎಡ್ವರ್ಡ್ಸ್ (ನಾಯಕ & ವಿಕೆಟ್ ಕೀಪರ್), ಬಾಸ್ ಡಿ ಲೀಡೆ, ತೇಜ ನಿಡಮನೂರು, ಲೋಗನ್ ವ್ಯಾನ್ ಬೀಕ್, ರೋಲೋಫ್ ವ್ಯಾನ್ ಡೆರ್ ಮೆರ್ವೆ, ಆರ್ಯನ್ ದತ್, ಪಾಲ್ ವ್ಯಾನ್ ಮೀಕೆರೆನ್
ಬೆಂಚ್: ಸಾಕಿಬ್ ಜುಲ್ಫಿಕರ್, ವಿಕ್ರಮಜಿತ್ ಸಿಂಗ್, ಶರೀಜ್ ಅಹ್ಮದ್, ನೋಹ್ ಕ್ರೋಸ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications