Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ವಿಶ್ವಕಪ್ ಫೈನಲ್: ಭಾರತ vs ಆಸ್ಟ್ರೇಲಿಯಾ ಪಂದ್ಯದ ಹವಾಮಾನ ವರದಿ

ಭಾನುವಾರ ನಡೆಯಲಿರುವ ಭಾರತ ಹಾಗೂ ಆಸ್ಟ್ರೇಲಿಯಾ ವಿರುದ್ಧದ ವಿಶ್ವಕಪ್ ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ಕೆಲವೇ ಗಂಟೆಗಳಲ್ಲಿ ಈ ಎರಡು ಬಲಿಷ್ಠ ತಂಡಗಳು ಚಾಂಪಿಯನ್ ಪಟ್ಟಕ್ಕಾಗಿ ಕಾದಾಟ ನಡೆಸಲಿದೆ. ಈ ಪಂದ್ಯವನ್ನು ಸುಮಾರು ಒಂದು ಲಕ್ಷ ಮೂವತ್ತು ಸಾವಿರ ಜನರು ನೇರವಾಗಿ ವೀಕ್ಷಿಸಿದರೆ ಕೋಟ್ಯಂತರ ಜನರು ಟಿವಿ ಹಾಗೂ ಒಟಿಟಿ ವೇದಿಕೆಗಳ ಮೂಲಕ ವಿಶ್ವಾದ್ಯಂತ ವೀಕ್ಷಿಸಲಿದ್ದಾರೆ.

ಇಂಥಾ ಮೆಗಾ ಪಂದ್ಯಕ್ಕೆ ಹವಾಮಾನ ಯಾವ ರೀತಿ ಸಾಥ್ ನೀಡಲಿದೆ ಎನ್ನುವುದು ಕೂಡ ಬಹಳ ಪ್ರಮುಖವಾಗಿರುವ ಅಂಶ. ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯ ನಡೆಯಲಿರುವ ಅಹ್ಮದಾಬಾದ್‌ನ ಭಾನುವಾರದ ಹವಾಮಾನ ವರದಿ ಇಲ್ಲಿದೆ. ಮುಂದೆ ಓದಿ..

World cup 2023, India vs Australia final match: weather report of Ahmedabad

ಅಹ್ಮದಾಬಾದ್‌ನಲ್ಲಿ ಮಳೆಯಾಗಲಿದೆಯಾ?

ಪಂದ್ಯ ನಡೆಯುವ ದಿನವಾದ ನವೆಂಬರ್ 19 ಭಾನುವಾರ ಅಹ್ಮದಾಬಾದ್‌ನಲ್ಲಿ ಮಳೆಯಾಗುವ ಸಾಧ್ಯತೆ ನಿಶ್ಚಿತವಾಗಿ ಇಲ್ಲ ಎನ್ನುತ್ತಿದೆ ಹವಾಮಾನ ವರದಿ. ಹಾಗಾಗಿ ವಿಶ್ವಕಪ್ ಫೈನಲ್ ಪಂದ್ಯಕ್ಕೆ ಅಡ್ಡಿಯಾಗುವ ಸಾಧ್ಯತೆಯಿಲ್ಲ. ಬಿಸಿಯಾದ ವಾತಾವರಣದಿಂದ ಕೂಡಿದ್ದು 32 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶವಿರುವ ಸಾಧ್ಯತೆಯಿದೆ. ಮೋಡ ಕುಡ ಇರುವ ಸಾಧ್ಯತೆಯಿಲ್ಲ ಹಾಗೂ ಮಳೆಯ ಆತಂಕವಿರುವುದಿಲ್ಲ.

ಇತ್ತಂಡಗಳ ಸಂಪೂರ್ಣ ಸ್ಕ್ವಾಡ್
ಟೀಮ್ ಇಂಡಿಯಾ: ರೋಹಿತ್ ಶರ್ಮಾ(ನಾಯಕ), ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್(ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ರವಿಚಂದ್ರನ್ ಅಶ್ವಿನ್, ಶಾರ್ದೂಲ್ ಠಾಕೂರ್, ಇಶಾನ್ ಕಿಶನ್, ಪ್ರಸೀದ್ ಕೃಷ್ಣ

ಆಸ್ಟ್ರೇಲಿಯಾ: ಟ್ರಾವಿಸ್ ಹೆಡ್, ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ಸ್ಟೀವನ್ ಸ್ಮಿತ್, ಮಾರ್ನಸ್ ಲ್ಯಾಬುಶೇನ್, ಗ್ಲೆನ್ ಮ್ಯಾಕ್ಸ್‌ವೆಲ್, ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಮಿಚೆಲ್ ಸ್ಟಾರ್ಕ್, ಪ್ಯಾಟ್ ಕಮ್ಮಿನ್ಸ್ (ನಾಯಕ), ಆಡಮ್ ಜಂಪಾ, ಜೋಶ್ ಹ್ಯಾಜಲ್‌ವುಡ್, ಶಾನ್ ಅಬಾಟ್, ಮಾರ್ಕಸ್ ಸ್ಟೊಯಿನಿಸ್, ಅಲೆಕ್ಸ್ ಕ್ಯಾರಿ, ಕ್ಯಾಮೆರಾನ್ ಗ್ರೀನ್

Story first published: Saturday, November 18, 2023, 22:15 [IST]
Other articles published on Nov 18, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+