World Cup 2023: ಭಾರತ vs ನ್ಯೂಜಿಲೆಂಡ್ ರೋಚಕ ಪಂದ್ಯದ ಟಾಸ್ ವರದಿ, ಆಡುವ 11ರ ಬಳಗ, ಲೈವ್ ಸ್ಕೋರ್
ಭಾನುವಾರ, ಅಕ್ಟೋಬರ್ 22ರಂದು ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆಯತ್ತಿರುವ 2023ರ ಐಸಿಸಿ ಏಕದಿನ ವಿಶ್ವಕಪ್‌ನ 21ನೇ ರೋಚಕ ಪಂದ್ಯದಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು ಸೆಣಸಾಡುತ್ತಿವೆ.
ಟಾಸ್ ಗೆದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಮೊದಲು ಬೌಲಿಂಗ್ ಮಾಡುವ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ಟಾಮ್ ಲ್ಯಾಥಮ್ ನಾಯಕತ್ವದ ನ್ಯೂಜಿಲೆಂಡ್ ತಂಡ ಮೊದಲು ಬ್ಯಾಟಿಂಗ್ ಮಾಡಲಿದೆ.

ಈ ವಿಶ್ವಕಪ್‌ನಲ್ಲಿ ಭಾರತ ತಂಡವು ಬಲಿಷ್ಠ ಆಸ್ಟ್ರೇಲಿಯಾ, ಅಫ್ಘಾನಿಸ್ತಾನ, ಪಾಕಿಸ್ತಾನ ಮತ್ತು ಬಾಂಗ್ಲಾದೇಶ ತಂಡಗಳನ್ನು ಸೋಲಿಸಿದೆ. ಇನ್ನು ನ್ಯೂಜಿಲೆಂಡ್ ತಂಡವು ಇಂಗ್ಲೆಂಡ್, ನೆದರ್ಲ್ಯಾಂಡ್ಸ್, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನ ತಂಡಗಳನ್ನು ಮಣಿಸಿದೆ.
ಇದೇ ವೇಳೆ, ಭಾರತ ಮತ್ತು ನ್ಯೂಜಿಲೆಂಡ್ ಎರಡೂ ತಂಡಗಳು ವಿಶ್ವಕಪ್‌ನಲ್ಲಿ ಗೆಲುವಿನ ಓಟವನ್ನು ಮುಂದುವರೆಸುವ ಭರವಸೆಯಲ್ಲಿವೆ. ಉಭಯ ತಂಡಗಳು ಆಡಿದ 4 ಪಂದ್ಯಗಳಿಂದ 8 ಅಂಕಗಳ ಮೂಲಕ ಉತ್ತಮ ನೆಟ್ ರನ್‌ರೇಟ್‌ನಿಂದ ನ್ಯೂಜಿಲೆಂಡ್ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದರೆ, ಭಾರತ ತಂಡ ಎರಡನೇ ಸ್ಥಾನದಲ್ಲಿದೆ.
ಗಮನಾರ್ಹವಾಗಿ, ಭಾರತ ತಂಡದಲ್ಲಿ ಎರಡು ಬದಲಾವಣೆಗಳಾಗಿದ್ದು, ಗಾಯಾಳು ಹಾರ್ದಿಕ್ ಪಾಂಡ್ಯ ಬದಲಾಗಿ ಸೂರ್ಯಕುಮಾರ್ ಯಾದವ್ ಆಡಲಿದ್ದರೆ, ಶಾರ್ದೂಲ್ ಠಾಕೂರ್ ಬದಲಾಗಿ ಮೊಹಮ್ಮದ್ ಶಮಿ ಆಡುವ ಬಳಗದಲ್ಲಿ ಸ್ಥಾನ ಪಡೆದಿದ್ದಾರೆ.

ಭಾರತ vs ನ್ಯೂಜಿಲೆಂಡ್ ತಂಡಗಳ ಆಡುವ 11ರ ಬಳಗ
ನ್ಯೂಜಿಲೆಂಡ್ ತಂಡ: ಡೆವೊನ್ ಕಾನ್ವೇ, ವಿಲ್ ಯಂಗ್, ರಚಿನ್ ರವೀಂದ್ರ, ಡೇರಿಲ್ ಮಿಚೆಲ್, ಟಾಮ್ ಲ್ಯಾಥಮ್ (ನಾಯಕ/ವಿಕೆಟ್ ಕೀಪರ್), ಗ್ಲೆನ್ ಫಿಲಿಪ್ಸ್, ಮಾರ್ಕ್ ಚಾಪ್‌ಮನ್, ಮಿಚೆಲ್ ಸ್ಯಾಂಟ್ನರ್, ಮ್ಯಾಟ್ ಹೆನ್ರಿ, ಲಾಕಿ ಫರ್ಗುಸನ್, ಟ್ರೆಂಟ್ ಬೌಲ್ಟ್.
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications