ಈತ ಭಾರತ ತಂಡಕ್ಕೆ ದೊಡ್ಡ ಆಸ್ತಿ, ಅವರ ಗಾಯ ಸಮಸ್ಯೆಗಳನ್ನು ಸೃಷ್ಟಿಸುತ್ತದೆ ಎಂದ ಸೌರವ್ ಗಂಗೂಲಿ

ಭಾರತ ತಂಡದ ಅನುಭವಿ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಸದ್ಯ ಗಾಯದಿಂದ ಚೇತರಿಸಿಕೊಳ್ಳುತ್ತಿದ್ದು, ಕಳೆದ ಏಷ್ಯಾ ಕಪ್‌ನಿಂದಲೂ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಶ್ರೀಲಂಕಾ ವಿರುದ್ಧ ಏಕದಿನ ಸರಣಿಗೆ ಆಯ್ಕೆಯಾದ ನಂತರ, ಮತ್ತೆ ವಿರಾಮ ನೀಡಲಾಯಿತು.
ಟಿ20 ವಿಶ್ವಕಪ್ ಸೇರಿದಂತೆ ಪ್ರಮುಖ ದ್ವಿಪಕ್ಷೀಯ ಸರಣಿಗಳಿಂದ ಹೊರಗುಳಿದಿರುವ ಜಸ್ಪ್ರೀತ್ ಬುಮ್ರಾ ಅವರನ್ನು ಮುಂಬರುವ ಏಕದಿನ ವಿಶ್ವಕಪ್ ದೃಷ್ಟಿಯಿಂದ ಅವರ ವಿಶ್ರಾಂತಿ ಅವಧಿಯನ್ನು ವಿಸ್ತರಿಸಲಾಗಿದೆ.
Ranji Trophy: ರಣಜಿ ಟ್ರೋಫಿ ಇತಿಹಾಸದಲ್ಲಿ 2ನೇ ಅತಿ ಹೆಚ್ಚು ರನ್ ದಾಖಲಿಸಿದ ಪೃಥ್ವಿ ಶಾ
ಇದೀಗ ಭಾರತದ ಮಾಜಿ ನಾಯಕ ಮತ್ತು ಬಿಸಿಸಿಐ ಮಾಜಿ ಅಧ್ಯಕ್ಷ ಸೌರವ್ ಗಂಗೂಲಿ ಅವರು ಜಸ್ಪ್ರೀತ್ ಬುಮ್ರಾ ಅವರ ವಿಶ್ರಾಂತಿಯ ಬಗ್ಗೆ ಮಾತನಾಡಿದ್ದು, ಜಸ್ಪ್ರೀತ್ ಬುಮ್ರಾ ಅನುಪಸ್ಥಿತಿಯು ಭಾರತ ತಂಡಕ್ಕೆ ಸಮಸ್ಯೆಗಳನ್ನು ಉಂಟುಮಾಡುತ್ತದೆ. ಏಕೆಂದರೆ ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡಕ್ಕೆ ಈ ಸ್ಟಾರ್ ವೇಗಿ ದೊಡ್ಡ ಆಸ್ತಿಯಾಗಿದ್ದಾರೆ ಎಂದು ಹೇಳಿದರು.
ಸುದೀರ್ಘ ಗಾಯದ ವಿಶ್ರಾಂತಿಯ ನಂತರ ಶ್ರೀಲಂಕಾ ವಿರುದ್ಧದ ಏಕದಿನ ಸರಣಿಗಾಗಿ ಭಾರತೀಯ ತಂಡಕ್ಕೆ ಮರಳಿದ್ದ ಜಸ್ಪ್ರೀತ್ ಬುಮ್ರಾ, ಸಂಪೂರ್ಣವಾಗಿ ಚೇತರಿಸಿಕೊಳ್ಳಲು ವಿಫಲವಾದ ಕಾರಣ, ಮತ್ತೊಮ್ಮೆ ತಂಡದಿಂದ ಹೊರಗುಳಿದರು. 50 ಓವರ್‌ಗಳ ವಿಶ್ವಕಪ್ ವರ್ಷದಲ್ಲಿ ಜಸ್ಪ್ರೀತ್ ಬುಮ್ರಾ ಅನುಪಸ್ಥಿತಿಯು ಭಾರತೀಯ ಕ್ರಿಕೆಟ್‌ನಲ್ಲಿ ದೊಡ್ಡ ಚರ್ಚೆಯ ವಸ್ತುವಾಗಿದೆ.

ಕ್ರಿಕೆಟ್‌ಗೆ ಮರಳುವಿಕೆಯನ್ನು ಇನ್ನಷ್ಟು ಕಾಲ ವಿಸ್ತರಣೆ
ಜಸ್ಪ್ರೀತ್ ಬುಮ್ರಾ ಅವರ ಬೌಲಿಂಗ್ ಸ್ಥಿತಿ ಸುಧಾರಿಸಲು ಹೆಚ್ಚಿನ ಸಮಯ ಬೇಕು ಎಂದು ಬಿಸಿಸಿಐ ಹೇಳಿಕೆಯೊಂದಿಗೆ, ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಮರಳುವಿಕೆಯನ್ನು ಇನ್ನಷ್ಟು ಕಾಲ ವಿಸ್ತರಿಸಲಾಗಿದೆ.
"ಜಸ್ಪ್ರೀತ್ ಬುಮ್ರಾ ಭಾರತ ತಂಡದ ದೊಡ್ಡ ಆಸ್ತಿ. ಅವರ ಅನುಪಸ್ಥಿತಿಯಿಂದ ಸಮಸ್ಯೆಗಳು ನಿಸ್ಸಂಶಯವಾಗಿ ಇರುತ್ತವೆ. ವೇಗದ ಬೌಲರ್‌ಗಳು ಆಗಾಗ್ಗೆ ಗಾಯಗೊಳ್ಳುತ್ತಾರೆ. ಅವರು ಚೇತರಿಸಿಕೊಳ್ಳಲು ನೀವು ಕಾಯಬೇಕು. ವೇಗದ ಬೌಲಿಂಗ್ ಸುಲಭವಲ್ಲ," ಎಂದು ಮಾಜಿ ಕ್ರಿಕೆಟಿಗ ಸೌರವ್ ಗಂಗೂಲಿ ಕೋಲ್ಕತ್ತಾದಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಮತ್ತೆ ಟಿ20 ವಿಶ್ವಕಪ್‌ನಿಂದ ಹೊರಗುಳಿಯಬೇಕಾಯಿತು
2022ರ ಸೆಪ್ಟೆಂಬರ್‌ನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಸರಣಿಯ ನಂತರ ಜಸ್ಪ್ರೀತ್ ಬುಮ್ರಾ ಭಾರತ ತಂಡಕ್ಕಾಗಿ ಆಡಿಲ್ಲ. ಕಳೆದ ವರ್ಷ ಅವರು ಗಾಯದ ಕಾರಣದಿಂದ ಏಷ್ಯಾ ಕಪ್ ಪಂದ್ಯಾವಳಿಯನ್ನು ಕಳೆದುಕೊಂಡರು. ಆದರೆ ಅವರು ಟಿ20 ವಿಶ್ವಕಪ್ ವೇಳೆಗೆ ತಂಡಕ್ಕೆ ಮರಳಿದರು. ಆದರೆ, ಅವರ ಬೆನ್ನಿನ ಗಾಯವು ಮತ್ತೆ ಉಲ್ಬಣಗೊಂಡು ಮತ್ತೆ ಟಿ20 ವಿಶ್ವಕಪ್‌ನಿಂದ ಹೊರಗುಳಿಯಬೇಕಾಯಿತು.
ಗಮನಾರ್ಹ ಅಂಶವೆಂದರೆ, ಜನವರಿ 1ರಂದು ಬಿಸಿಸಿಐನ ಹೊಸ ವರ್ಷದ ಪರಿಶೀಲನಾ ಸಭೆಯಲ್ಲಿ ಜಸ್ಪ್ರೀತ್ ಬುಮ್ರಾ ಅವರ ಗಾಯ ನಿರ್ವಹಣೆ ಬಗ್ಯೂ ಚರ್ಚಿಸಲಾಯಿತು.

ಈಡನ್ ಗಾರ್ಡನ್‌ನಲ್ಲಿ ಸರಣಿಯ ಎರಡನೇ ಏಕದಿನ ಪಂದ್ಯ
"ಕೋಲ್ಕತ್ತಾದ ಈಡನ್ ಗಾರ್ಡನ್ ಉತ್ತಮ ಮೈದಾನವಾಗಿದೆ. 2023ರ ಏಕದಿನ ವಿಶ್ವಕಪ್‌ಗೆ ಮೊದಲು ಹೊಸ ರಚನೆ ಮತ್ತು ಸ್ಟ್ಯಾಂಡ್‌ಗಳನ್ನು ನಿರ್ಮಿಸಲಾಗುವುದು" ಎಂದು ಕೋಲ್ಕತ್ತಾದ ಈಡನ್ ಗಾರ್ಡನ್ ಮೈದಾನದ ಬಗ್ಗೆ ಸೌರವ್ ಗಂಗೂಲಿ ಹೇಳಿದರು.
ಭಾರತ ತಂಡವನ್ನು ತವರಿನ ಪರಿಸ್ಥಿತಿಯಲ್ಲಿ ಸೋಲಿಸುವುದು ಸುಲಭದ ಕೆಲಸವಲ್ಲ ಎಂದು ಅಭಿಪ್ರಾಯಪಟ್ಟ ಸೌರವ್ ಗಂಗೂಲಿ ಅವರು, ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡವನ್ನು ಸದ್ಯ ನಡೆಯುತ್ತಿರುವ ಏಕದಿನ ಸರಣಿಯನ್ನು ಗೆಲ್ಲುವ ನೆಚ್ಚಿನ ತಂಡ ಎಂದು ಹೆಸರಿಸಿದ್ದಾರೆ.
ಶುಕ್ರವಾರ, ಜನವರಿ 12ರಂದು ಕೋಲ್ಕತ್ತಾದ ಈಡನ್ ಗಾರ್ಡನ್‌ನಲ್ಲಿ ಸರಣಿಯ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ತಂಡವು ಶ್ರೀಲಂಕಾವನ್ನು ಎದುರಿಸಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications