ಏಕದಿನ ವಿಶ್ವಕಪ್ 2023 ಟೂರ್ನಿ ಆರಂಭಗೊಂಡಿದೆ. ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ನ್ಯೂಜಿಲೆಂಡ್ ವಿರುದ್ಧ ಸೆಣೆಸಾಟ ನಡೆಸುತ್ತಿದೆ. ಈ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ ಟಾಸ್ ಗೆದ್ದುಕೊಂಡಿದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ತಂಡ ಮೊದಲಿಗೆ ಬ್ಯಾಟಿಂಗ್ ನಡೆಸುವ ಸವಾಲು ಪಡೆದುಕೊಂಡಿದೆ.
ಇನ್ನು ಈ ಪಂದ್ಯದಲ್ಲಿ ನಿರೀಕ್ಷೆಯಂತೆಯೇ ಇಂಗ್ಲೆಂಡ್ ತಂಡದ ಆಡುವ ಬಳಗದಿಂದ ಬೆನ್ ಸ್ಟೋಕ್ಸ್ ಹೊರಬಿದ್ದಿದ್ದಾರೆ. ಸಣ್ಣ ಪ್ರಮಾಣದ ನೋವಿನ ಕಾರಣದಿಂದಾಗಿ ಈ ಪಂದ್ಯಕ್ಕೆ ಸ್ಟೋಕ್ಸ್ ಲಭ್ಯವಿಲ್ಲ. ಉಳಿದಂತೆ ಗಟ್ಸ್ ಅಟ್ಕಿನ್ಸನ್ ರೀಸ್ ಟೋಪ್ಲಿ, ಹಾಗೂ ಡೇವಿಡ್ ವಿಲ್ಲಿ ಆಡುವ ಬಳಗದಿಂದ ಹೊರಗುಳಿದಿರುವ ಇಂಗ್ಲೆಂಡ್ ತಂಡದ ಆಟಗಾರರು.

Live ಸ್ಕೋರ್ ಹೀಗಿದೆ
ಮತ್ತೊಂದೆಡೆ ನ್ಯೂಜಿಲೆಂಡ್ ತಂಡಕ್ಕೆ ಕೂಡ ನಾಯಕ ಕೇನ್ ವಿಲಿಯಮ್ಸನ್ ಆಯ್ಕೆ ಲಭ್ಯವಿಲ್ಲ. ಟಾಮ್ ಲ್ಯಾಥಮ್ ತಂಡವನ್ನು ಮುನ್ನಡೆಸುವ ಜವಾಬ್ಧಾರಿ ವಹಿಸಿಕೊಂಡಿದ್ದಾರೆ. ಲಾಕಿ ಫರ್ಗುಸನ್, ಇಶ್ ಸೋಧಿ, ಟಿಮ್ ಸೌಥಿ ಆಡುವ ಬಳಗದಿಂದ ಹೊರಗುಳಿದಿರುವ ಇತರ ಆಟಗಾರರು.
ಇಂಗ್ಲೆಂಡ್: ಜಾನಿ ಬೈರ್‌ಸ್ಟೋವ್, ಡೇವಿಡ್ ಮಲನ್, ಜೋ ರೂಟ್, ಹ್ಯಾರಿ ಬ್ರೂಕ್, ಜೋಸ್ ಬಟ್ಲರ್ (ನಾಯಕ & ವಿಕೆಟ್ ಕೀಪರ್), ಲಿಯಾಮ್ ಲಿವಿಂಗ್‌ಸ್ಟೋನ್, ಮೊಯಿನ್ ಅಲಿ, ಸ್ಯಾಮ್ ಕರನ್, ಕ್ರಿಸ್ ವೋಕ್ಸ್, ಆದಿಲ್ ರಶೀದ್, ಮಾರ್ಕ್ ವುಡ್
ಬೆಂಚ್: ಬೆನ್ ಸ್ಟೋಕ್ಸ್, ಗಸ್ ಅಟ್ಕಿನ್ಸನ್, ರೀಸ್ ಟೋಪ್ಲಿ, ಡೇವಿಡ್ ವಿಲ್ಲಿ
ನ್ಯೂಜಿಲೆಂಡ್: ಡೆವೊನ್ ಕಾನ್ವೇ, ವಿಲ್ ಯಂಗ್, ರಚಿನ್ ರವೀಂದ್ರ, ಡೇರಿಲ್ ಮಿಚೆಲ್, ಟಾಮ್ ಲ್ಯಾಥಮ್ (ನಾಯಕ & ವಿಕೆಟ್ ಕೀಪರ್), ಗ್ಲೆನ್ ಫಿಲಿಪ್ಸ್, ಮಾರ್ಕ್ ಚಾಪ್ಮನ್, ಜೇಮ್ಸ್ ನೀಶಮ್, ಮಿಚೆಲ್ ಸ್ಯಾಂಟ್ನರ್, ಮ್ಯಾಟ್ ಹೆನ್ರಿ, ಟ್ರೆಂಟ್ ಬೌಲ್ಟ್
ಬೆಂಚ್: ಲಾಕಿ ಫರ್ಗುಸನ್, ಇಶ್ ಸೋಧಿ, ಟಿಮ್ ಸೌಥಿ
ಬೆಂಚ್: ಲಾಕಿ ಫರ್ಗುಸನ್, ಇಶ್ ಸೋಧಿ, ಟಿಮ್ ಸೌಥಿ