ವಿಶ್ವಕಪ್ 2023: ಉದ್ಘಾಟನಾ ಪಂದ್ಯದಲ್ಲಿ ನ್ಯೂಜಿಲೆಂಡ್‌ಗೆ ಗೆಲ್ಲಲು ಸವಾಲಿನ ಗುರಿ ನೀಡಿದ ಇಂಗ್ಲೆಂಡ್
ಏಕದಿನ ವಿಶ್ವಕಪ್ 2023ರ ಉದ್ಘಾಟನಾ ಪಂದ್ಯದಲ್ಲಿ ನ್ಯೂಜಿಲೆಂಡ್ ಹಾಗೂ ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡ ನ್ಯೂಜಿಲೆಂಡ್ ತಂಡ ಒಂದು ಹಂತದಲ್ಲಿ ಇಂಗ್ಲೆಂಡ್ ವಿರುದ್ಧ ಮೇಲುಗೈ ಸಾಧಿಸಿದಂತೆ ಕಂಡು ಬಂದಿದ್ದರೂ ಇಂಗ್ಲೆಂಡ್ ಚೇತರಿಕೆ ಕಂಡುಕೊಂಡಿದೆ. ಅಂತಿಮವಾಗಿ ಇಂಗ್ಲೆಂಡ್ ತಂಡ ಸವಾಲಿನ ಗುರಿಯನ್ನು ನೀಡುವಲ್ಲಿ ಯಶಸ್ವಿಯಾಗಿದೆ.
ಇಂಗ್ಲೆಂಡ್ ತಂಡ ಮೊದಲ ವಿಕೆಟ್‌ಗೆ 40 ರನ್‌ಗಳ ಜೊತೆಯಾಟವನ್ನು ಪಡೆದ ಬಳಿಕ ಉತ್ತಮ ಜೊತೆಯಾಟ ಪಡೆಯಲು ವಿಫಲವಾಯಿತು. ಹೀಗಾಗಿ 118 ರನ್‌ಗಳಾಗುವಷ್ಟರಲ್ಲಿ 4 ವಿಕೆ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಈ ಸಂದರ್ಭದಲ್ಲಿ ಕಿವಿಸ್ ಬೌಲಿಂಗ್ ವಿಭಾಗದ ಮೇಲುಗೈ ಸ್ಪಷ್ಟವಾಗಿತ್ತು. ಆದರೆ ಅನುಭವಿ ಆಟಗಾರ ಜೋ ರೂಟ್ ಹಾಗೂ ನಾಯಕ ಜೋಸ್ ಬಟ್ಲರ್ ಅದ್ಭುತ ಜೊತೆಯಾಟ ನೀಡುವ ಮೂಲಕ ಚೇತರಿಕೆ ನೀಡಿದರು.

ಜೋ ರೂಟ್ ಈ ಪಂದ್ಯದಲ್ಲಿ 77 ರನ್‌ಗಳನ್ನು ಗಳಿಸಿದರೆ ಜೋಸ್ ಬಟ್ಲರ್ 43 ರನ್‌ಗಳನ್ನು ಗಳಿಸಿ ವಿಕೆಟ್ ಕಳೆದುಕೊಂಡರು. ಈ ಮೂಲಕ ಇಂಗ್ಲೆಂಡ್ ಈ ಪಂದ್ಯದಲ್ಲಿ 9 ವಿಕೆಟ್‌ಗಳನ್ನು ಕಳೆದುಕೊಂಡು 282 ರನ್‌ಗಳನ್ನು ಕಲೆ ಹಾಕುವಲ್ಲಿ ಯಶಸ್ವಿಯಾಯಿತು. ಹೀಗಾಗಿ ನ್ಯೂಜಿಲೆಂಡ್ ತಂಡ ಸವಾಲಿನ ಗುರಿ ಪಡೆದುಕೊಂಡಿದೆ.
ಇನ್ನು ಈ ಪಂದ್ಯದಲ್ಲಿ ಇಂಗ್ಲೆಂಡ್ ಪರವಾಗಿ ಮ್ಯಾಟ್ ಹೆನ್ರಿ 3 ವಿಕೆಟ್ ಕಬಳಿಸಿ ಯಶಸ್ವಿ ಬೌಲರ್ ಎನಿಸಿಕೊಂಡರೆ ಮಿಚೆಲ್ ಸ್ಯಾಂಟ್ನರ್ ಹಾಗೂ ಗ್ಲೆನ್ ಫಿಲಿಪ್ಸ್ ತಲಾ 2 ವಿಕೆಟ್ ಕಬಳಿಸಿದರು. ಒಂದು ವಿಎಕಟ್ ಟ್ರೆಂಟ್ ಬೋಲ್ಟ್ ಪಾಲಾಗಿದೆ.
ಇಂಗ್ಲೆಂಡ್: ಜಾನಿ ಬೈರ್‌ಸ್ಟೋವ್, ಡೇವಿಡ್ ಮಲನ್, ಜೋ ರೂಟ್, ಹ್ಯಾರಿ ಬ್ರೂಕ್, ಜೋಸ್ ಬಟ್ಲರ್ (ನಾಯಕ & ವಿಕೆಟ್ ಕೀಪರ್), ಲಿಯಾಮ್ ಲಿವಿಂಗ್‌ಸ್ಟೋನ್, ಮೊಯಿನ್ ಅಲಿ, ಸ್ಯಾಮ್ ಕರನ್, ಕ್ರಿಸ್ ವೋಕ್ಸ್, ಆದಿಲ್ ರಶೀದ್, ಮಾರ್ಕ್ ವುಡ್
ಬೆಂಚ್: ಬೆನ್ ಸ್ಟೋಕ್ಸ್, ಗಸ್ ಅಟ್ಕಿನ್ಸನ್, ರೀಸ್ ಟೋಪ್ಲಿ, ಡೇವಿಡ್ ವಿಲ್ಲಿ
ನ್ಯೂಜಿಲೆಂಡ್: ಡೆವೊನ್ ಕಾನ್ವೇ, ವಿಲ್ ಯಂಗ್, ರಚಿನ್ ರವೀಂದ್ರ, ಡೇರಿಲ್ ಮಿಚೆಲ್, ಟಾಮ್ ಲ್ಯಾಥಮ್ (ನಾಯಕ & ವಿಕೆಟ್ ಕೀಪರ್), ಗ್ಲೆನ್ ಫಿಲಿಪ್ಸ್, ಮಾರ್ಕ್ ಚಾಪ್ಮನ್, ಜೇಮ್ಸ್ ನೀಶಮ್, ಮಿಚೆಲ್ ಸ್ಯಾಂಟ್ನರ್, ಮ್ಯಾಟ್ ಹೆನ್ರಿ, ಟ್ರೆಂಟ್ ಬೌಲ್ಟ್
ಬೆಂಚ್: ಲಾಕಿ ಫರ್ಗುಸನ್, ಇಶ್ ಸೋಧಿ, ಟಿಮ್ ಸೌಥಿ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications