World cup 2023: ನ್ಯೂಜಿಲೆಂಡ್‌ಗೆ ಗೆಲ್ಲಲು ಸಾಧಾರಣ ಗುರಿ ನೀಡಿದ ಬಾಂಗ್ಲಾದೇಶ
ವಿಶ್ವಕಪ್ ಟೂರ್ನಿಯ 11ನೇ ಪಂದ್ಯದಲ್ಲಿ ನ್ಯೂಜಿಲೆಂಡ್ ಹಾಗೂ ಬಾಂಗ್ಲಾದೇಶ ತಮಡಗಳು ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ಬಾಂಗ್ಲಾದೇಶ ತಂಡವನ್ನು ಸಾಧಾರಣ ಮೊತ್ತಕ್ಕೆ ಕಟ್ಟಿಹಾಕುವಲ್ಲಿ ಯಶಸ್ವಿಯಾಗಿದೆ. ಮೊದಲಿಗೆ ಬ್ಯಾಟಿಂಗ್ ಮಾಡಿದ ಬಾಂಗ್ಲಾದೇಶ ತಂಡ ಈ ಪಂದ್ಯದಲ್ಲಿ ನಿಗದಿತ 50 ಓವರ್‌ಗಳಲ್ಲಿ 9 ವಿಕೆಟ್ ಕಳೆದುಕೊಂಡು 245 ರನ್‌ಗಳನ್ನು ಗಳಿಸಲು ಶಕ್ತವಾಗಿದೆ.
ಟಾಸ್ ಸೋತು ಮೊದಲಿಗೆ ಬ್ಯಾಟಿಂಗ್‌ಗೆ ಇಳಿದ ಬಾಂಗ್ಲಾದೇಶ ತಂಡ ಆರಂಭಿಕ ಹಿನ್ನಡೆ ಅನುಭವಿಸಿತು. ಶೂನ್ಯಕ್ಕೆ ಮೊದಲ ವಿಕೆಟ್ ಕಳೆದುಕೊಂಡ ಬಾಂಗ್ಲಾ ಭಾರೀ ಹಿನ್ನಡೆ ಅನುಭವಿಸಿತು. ಉತ್ತಮ ಫಾರ್ಮ್‌ನಲ್ಲಿರುವ ಲಿಟನ್ ದಾಸ್ ಈ ಪಂದ್ಯದ ಮೊದಲ ಎಸೆತದಲ್ಲಿಯೇ ವಿಕೆಟ್ ಕಳೆದುಕೊಂಡಿದ್ದರು. ನಂತರ ಮೆಹದಿ ಹಸನ್ ಮಿರಾಜ್, ನಾಯಕ ಶಕೀಬ್ ಅಲ್ ಹಸನ್ ಅವರಿಂದ ಉತ್ತಮ ಪ್ರದರ್ಶನ ಬಂದಿತು. ಮಿರಾಜ್ 30 ರನ್‌ಗಳಿಸಿದರೆ ನಾಯಕ ಶಕೀಬ್ 40 ರನ್‌ಗಳ ಕೊಡುಗೆ ನೀಡಿದರು.

ಇನ್ನು ಕೆಳ ಮಧ್ಯಮ ಕ್ರಮಾಂಕದಲ್ಲಿ ಬಾಂಗ್ಲಾದೇಶ ಉತ್ತಮ ಪ್ರದರ್ಶನ ನೀಡಿತು. ಅನುಭವಿ ಮುಷ್ಫಿಕರ್ ರಹೀಮ್ ಹಾಗೂ ಮಹ್ಮದುಲ್ಲಾ ಅವರಿಂದ ಅದ್ಭುತ ಪ್ರದರ್ಶನ ಬಂದಿದೆ. ಮುಷ್ಫಿಕರ್ ರಹಿಮ್ 66 ರನ್‌ಗಳಸಿಇ ತಂಡದ ಪರವಾಗಿ ಅತಿ ಹೆಚ್ಚು ರನ್‌ಗಳಿಸಿದ ಆಟಗಾರ ಎನಿಸಿಕೊಂಡರು. ಇನ್ನು ಮಹ್ಮದುಲ್ಲಾ 41 ರನ್ಗಳ ಕೊಡುಗೆ ನೀಡಿದ್ದು ಮಿಂಚಿದ್ದಾರೆ. ಈ ಪ್ರದರ್ಶನದಿಂದಾಗಿ ಬಾಂಗ್ಲಾದೇಶ ತಂಡ 9 ವಿಕೆಟ್ ಕಳೆದುಕೊಂಡು 245 ರನ್‌ಗಳನ್ನು ಗಳಿಸಿದೆ.
ನ್ಯೂಜಿಲೆಂಡ್ ಆಡುವ ಬಳಗ: ಡೆವೊನ್ ಕಾನ್ವೇ, ರಚಿನ್ ರವೀಂದ್ರ, ಕೇನ್ ವಿಲಿಯಮ್ಸನ್ (ನಾಯಕ), ಡೇರಿಲ್ ಮಿಚೆಲ್, ಟಾಮ್ ಲ್ಯಾಥಮ್ (ವಿಕೆಟ್ ಕೀಪರ್), ಗ್ಲೆನ್ ಫಿಲಿಪ್ಸ್, ಮಾರ್ಕ್ ಚಾಪ್ಮನ್, ಮಿಚೆಲ್ ಸ್ಯಾಂಟ್ನರ್, ಮ್ಯಾಟ್ ಹೆನ್ರಿ, ಲಾಕಿ ಫರ್ಗುಸನ್, ಟ್ರೆಂಟ್ ಬೌಲ್ಟ್.
ಬೆಂಚ್: ವಿಲ್ ಯಂಗ್, ಇಶ್ ಸೋಧಿ, ಜೇಮ್ಸ್ ನೀಶಮ್, ಟಿಮ್ ಸೌಥಿ
ಬಾಂಗ್ಲಾದೇಶ: ಲಿಟ್ಟನ್ ದಾಸ್, ತಂಝಿದ್ ಹಸನ್, ನಜ್ಮುಲ್ ಹೊಸೈನ್ ಶಾಂಟೊ, ಮೆಹಿದಿ ಹಸನ್ ಮಿರಾಜ್, ಶಾಕಿಬ್ ಅಲ್ ಹಸನ್ (ನಾಯಕ), ಮುಶ್ಫಿಕರ್ ರಹೀಮ್ (ವಿಕೆಟ್ ಕೀಪರ್), ತೌಹಿದ್ ಹೃದಯೋಯ್, ಮಹಮ್ಮದುಲ್ಲಾ, ತಸ್ಕಿನ್ ಅಹ್ಮದ್, ಶೋರಿಫುಲ್ ಇಸ್ಲಾಂ, ಮುಸ್ತಫಿಜುರ್ ರಹಮಾನ್.
ಬೆಂಚ್: ಹಸನ್ ಮಹಮೂದ್, ತಂಜಿಮ್ ಹಸನ್ ಸಾಕಿಬ್, ನಸುಮ್ ಅಹ್ಮದ್, ಮಹೇದಿ ಹಸನ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications