World cup 2023: ಕಿವೀಸ್ ಪಡೆಗೆಗೆ ಬಾಂಗ್ಲಾದೇಶದ ಸವಾಲು: ಆಡುವ ಬಳಗ, Live score
ವಿಶ್ವಕಪ್ ಟೂರ್ನಿಯಲ್ಲಿ ಇಂದು ನ್ಯೂಜಿಲೆಂಡ್ ತಂಡಕ್ಕೆ ಬಾಂಗ್ಲಾದೇಶ ಸವಾಲೊಡ್ಡಿದೆ. ಚೆನ್ನೈನ ಎಂಎ ಚಿದಂಬರಂ ಕ್ರೀಡಾಗಣದಲ್ಲಿ ಈ ಪಂದ್ಯ ಆಯೋಜನೆಯಾಗುತ್ತಿದ್ದು ನ್ಯೂಜಿಲೆಂಡ್ ತಂಡ ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಬಾಂಗ್ಲಾದೇಶ ತಂಡ ಆರಂಭದಲ್ಲಿ ಬ್ಯಾಟಿಂಗ್ ನಡೆಸುವ ಸವಾಲು ಸ್ವೀಕರಿಸಿದೆ.
ಇನ್ನು ನ್ಯೂಜಿಲೆಂಡ್ ತಂಡ ಟೂರ್ನಿಯಲ್ಲಿ ಸತತ ಎರಡು ಗೆಲುವು ಸಾಧಿಸಿದ್ದು ನಾಲ್ಕು ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿದೆ. ಈ ಗೆಲುವಿನ ಲಯವನ್ನು ಮುಂದುವರಿಸುವ ಆತ್ಮವಿಶ್ವಾಸದಲ್ಲಿ ಈ ತಂಡವಿದೆ. ಮತ್ತೊಂದೆಡೆ ಬಾಂಗ್ಲಾದೇಶ ಆಡಿರುವ ಎರಡು ಪಂದ್ಯಗಳಲ್ಲಿ ಒಂದು ಗೆಲುವು ಒಂದು ಸೋಲು ಅನುಭವಿಸಿದ್ದು ಎರಡು ಅಂಕಗಳನ್ನು ಖಾತೆಯಲ್ಲಿ ಹೊಂದಿದೆ. ಹೀಗಾಗಿ ಈ ಪಂದ್ಯದಲ್ಲಿ ಗೆಲುವು ಕಾಣುವ ನಿರೀಕ್ಷೆಯಲ್ಲಿದೆ.

Live ಸ್ಕೋರ್ ಹೀಗಿದೆ
ಇನ್ನು ಈ ಪಂದ್ಯದಲ್ಲಿ ಎರಡು ತಂಡಗಳಲ್ಲಿಯೂ ಒಂದೊಂದು ಬದಲಾವಣೆ ಮಾಡಿಕೊಳ್ಳಲಾಗಿದೆ. ನ್ಯೂಜಿಲೆಂಡ್ ತಂಡಕ್ಕೆ ನಾಯಕ ಕೇನ್ ವಿಲಿಯಮ್ಸನ್ ಕಮ್‌ಬ್ಯಾಕ್ ಮಾಡಿದ್ದಾರೆ. ವಿಲ್ ಯಂಗ್ ಆಡುವ ಬಳಗದಿಂದ ಹೊರಬಿದ್ದಿದ್ದಾರೆ. ಇನ್ನು ಬಾಂಗ್ಲಾದೇಶ ತಂಡದಲ್ಲಿ ಮೆಹದಿ ಆಡುವ ಬಳಗದಿಂದ ಹೊರಬಿದ್ದಿದ್ದು ಮಹಮ್ಮದುಲ್ಲಾಗೆ ಅವಕಾಶ ದೊರೆತಿದೆ.
ಚೆನ್ನೈನ ಚೆಪಾಕ್ ಕ್ರೀಡಾಂಗಣದ ಪಿಚ್ ಸ್ಪಿನ್ ಸ್ನೇಹಿ ಪಿಚ್ ಎನ್ನುವುದು ಹೊಸ ವಿಚಾರವೇನಲ್ಲ. ಈ ವಿಶ್ವಕಪ್‌ನಲ್ಲಿಯೂ ಸಾಂಪ್ರದಾಯಿಕ ಚೆನ್ನೈ ಪಿಚ್ ಸ್ಪಿನ್ನರ್‌ಗಳಿಗೆ ಉತ್ತಮವಾಗಿ ನೆರವು ನೀಡಲಿದೆ. ಭಾರತ ಹಾಗೂ ಆಸ್ಟ್ರೇಲಿಯಾ ಮುಖಾಮುಖಿ ಇದೇ ಪಂದ್ಯದಲ್ಲಿ ನಡೆದಿದ್ದಾಗಲೂ ಅದು ಸಾಬೀತಾಗಿತ್ತು. ಇಲ್ಲಿ ಶಕೀಬ್ ಅಲ್ ಹಸನ್ ಹಾಗೂ ಮಿಚೆಲ್ ಸ್ಯಾಂಟ್ನರ್ ಅದ್ಭುತ ಯಶಸ್ಸು ಪಡೆಯುವ ಸಾಧ್ಯತೆಯಿದೆ. ಎರಡನೇ ಇನ್ನಿಂಗ್ಸ್‌ನಲ್ಲಿ ಇಬ್ಬನಿ ಪರಿಣಾಮ ಬೀಳುವ ಕಾರಣ ಟಾಸ್ ಗೆದ್ದ ತಂಡ ಇಲ್ಲಿ ಮೊದಲಿಗೆ ಫೀಲ್ಡಿಂಗ್ ಆಯ್ದುಕೊಳ್ಳುವುದು ನಿಸ್ಸಂಶಯ.
ಇನ್ನು ನ್ಯೂಜಿಲೆಂಡ್ ಹಾಗೂ ಬಾಂಗ್ಲಾದೇಶ ವಿರುದ್ಧದ ಪಂದ್ಯ ಭಾರತೀಯ ಕಾಲಮಾನ ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿದ್ದು ಮಧ್ಯಾಹ್ನ 1:30ಕ್ಕೆ ಟಾಸ್ ನಡೆಯಲಿದೆ. ಇನ್ನು ಈ ಪಂದ್ಯದ ನೇರಪ್ರಸಾರ ಸ್ಟಾರ್‌ಸ್ಪೋರ್ಟ್ಸ್‌ನಲ್ಲಿ ಇರಲಿದೆ. ಇನ್ನು ಹಾಟ್‌ಸ್ಟಾರ್‌ನಲ್ಲಿಯೂ ಪಂದ್ಯವನ್ನು ವೀಕ್ಷಿಸಬಹುದಾಗಿದೆ.
ನ್ಯೂಜಿಲೆಂಡ್ ಆಡುವ ಬಳಗ: ಡೆವೊನ್ ಕಾನ್ವೇ, ರಚಿನ್ ರವೀಂದ್ರ, ಕೇನ್ ವಿಲಿಯಮ್ಸನ್ (ನಾಯಕ), ಡೇರಿಲ್ ಮಿಚೆಲ್, ಟಾಮ್ ಲ್ಯಾಥಮ್ (ವಿಕೆಟ್ ಕೀಪರ್), ಗ್ಲೆನ್ ಫಿಲಿಪ್ಸ್, ಮಾರ್ಕ್ ಚಾಪ್ಮನ್, ಮಿಚೆಲ್ ಸ್ಯಾಂಟ್ನರ್, ಮ್ಯಾಟ್ ಹೆನ್ರಿ, ಲಾಕಿ ಫರ್ಗುಸನ್, ಟ್ರೆಂಟ್ ಬೌಲ್ಟ್.
ಬೆಂಚ್: ವಿಲ್ ಯಂಗ್, ಇಶ್ ಸೋಧಿ, ಜೇಮ್ಸ್ ನೀಶಮ್, ಟಿಮ್ ಸೌಥಿ
ಬಾಂಗ್ಲಾದೇಶ: ಲಿಟ್ಟನ್ ದಾಸ್, ತಂಝಿದ್ ಹಸನ್, ನಜ್ಮುಲ್ ಹೊಸೈನ್ ಶಾಂಟೊ, ಮೆಹಿದಿ ಹಸನ್ ಮಿರಾಜ್, ಶಾಕಿಬ್ ಅಲ್ ಹಸನ್ (ನಾಯಕ), ಮುಶ್ಫಿಕರ್ ರಹೀಮ್ (ವಿಕೆಟ್ ಕೀಪರ್), ತೌಹಿದ್ ಹೃದಯೋಯ್, ಮಹಮ್ಮದುಲ್ಲಾ, ತಸ್ಕಿನ್ ಅಹ್ಮದ್, ಶೋರಿಫುಲ್ ಇಸ್ಲಾಂ, ಮುಸ್ತಫಿಜುರ್ ರಹಮಾನ್.
ಬೆಂಚ್: ಹಸನ್ ಮಹಮೂದ್, ತಂಜಿಮ್ ಹಸನ್ ಸಾಕಿಬ್, ನಸುಮ್ ಅಹ್ಮದ್, ಮಹೇದಿ ಹಸನ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications