ವಿಶ್ವಕಪ್ ಟೂರ್ನಿಯಲ್ಲಿ ಇಂದು ಎರಡು ಪಂದ್ಯಗಳು ನಡೆಯಲಿದ್ದು ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ತಂಡಕ್ಕೆ ಬಾಂಗ್ಲಾದೇಶ ಸವಾಲೊಡ್ಡಿದೆ. ಧರ್ಮಶಾಲಾದಲ್ಲಿ ಈ ಪಂದ್ಯ ಆಯೋಜನೆಯಾಗುತ್ತಿದ್ದು ಬಾಂಗ್ಲಾದೇಶ ತಂಡ ಈ ಪಂದ್ಯದಲ್ಲಿ ಟಾಸ್ ಗೆದ್ದುಕೊಂಡಿದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಇಂಗ್ಲೆಂಡ್ ತಂಡ ಆರಂಭದಲ್ಲಿ ಬ್ಯಾಟಿಂಗ್ ನಡೆಸುವ ಸವಾಲು ಸ್ವೀಕರಿಸಿದೆ.
ಇನ್ನು ಈ ಪಂದ್ಯದಲ್ಲಿ ಬಾಂಗ್ಲಾದೇಶ ಹಾಗೂ ಇಂಗ್ಲೆಂಡ್ ಎರಡು ತಂಡಗಳು ಕೂಡ ತಲಾ ಒಂದೊಂದು ಬದಲಾವಣೆಯೊಂದಿಗೆ ಕಣಕ್ಕಿಳಿಯುತ್ತಿದೆ. ಬಾಂಗ್ಲಾದೇಶ ತಂಡದಲ್ಲಿ ಕಳೆದ ಪಂದ್ಯದಲ್ಲಿ ಆಡುವ ಬಳಗದಿಮದ ಹೊರಗುಳಿದಿದ್ದ ಮೆಹದಿ ಹಸನ್ ಈ ಪಂದ್ಯದಲ್ಲಿ ತಂಡದಲ್ಲಿ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಮತ್ತೊಂದೆಡೆ ಇಂಗ್ಲೆಂಡ್ ತಂಡದಲ್ಲಿ ಮೊಯೀನ್ ಅಲಿ ಆಡುವ ಬಳಗದಿಂದ ಹೊರಬಿದ್ದಿದ್ದು ಅವರ ಸ್ಥಾನದಲ್ಲಿ ವೇಗಿ ರೀಸ್ ಟೋಪ್ಲಿ ಅವಕಾಶ ಪಡೆದುಕೊಂಡಿದ್ದಾರೆ.

ಇಂಗ್ಲೆಂಡ್ ತಂಡ ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಸೋಲು ಅನುಭವಿಸಿದ್ದು ಹಾಲಿ ಚಾಂಪಿಯನ್ನರಾಗಿ ಕಣಕ್ಕಿಳಿದರೂ ಭಾರೀ ಹಿನ್ನಡೆ ಅನುಭವಿಸಿದೆ. ಹೀಗಾಗಿ ಬಾಂಗ್ಲಾದೇಶದ ವಿರುದ್ಧ ಮೊದಲ ಗೆಲುವು ಸಾಧಿಸುವ ಲೆಕ್ಕಾಚಾರದೊಂದಿಗೆ ಕಣಕ್ಕಿಳಿಯಲಿದೆ. ಕಿವೀಸ್ ವಿರುದ್ಧದ ಪಂದ್ಯದಲ್ಲಿ ಅನುಭವಿಸಿದ ಹಿನ್ನಡೆಯಿಂದ ಹೊರಬರುವ ಪ್ರಯತ್ನ ನಡೆಸಲಿದೆ. ಮತ್ತೊಂದೆಡೆ ಬಾಂಗ್ಲಾದೇಶ ತಂಡ ಮೊದಲ ಪಂದ್ಯದಲ್ಲಿ ಅಫ್ಘಾನಿಸ್ತಾನ ತಂಡವನ್ನು ಎದುರಿಸಿತ್ತು. ಈ ಪಂದ್ಯದಲ್ಲಿ ಭರ್ಜರಿಯಾಗಿ ಗೆದ್ದು ಬೀಗಿದೆ ಬಾಂಗ್ಲಾ ಪಡೆ. ಇದೀಗ ಎರಡನೇ ಕದನಕ್ಕೆ ಬಲಿಷ್ಠ ಇಂಗ್ಲೆಂಡ್ ವಿರುದ್ಧ ಸೆಣೆಸಾಟಕ್ಕೆ ಸಂಪೂರ್ಣವಾಗಿ ಸಿದ್ಧವಾಗಿದೆ.
ಇಂಗ್ಲೆಂಡ್ ಆಡುವ ಬಳಗ: ಜಾನಿ ಬೈರ್‌ಸ್ಟೋವ್, ಡೇವಿಡ್ ಮಲನ್, ಜೋ ರೂಟ್, ಹ್ಯಾರಿ ಬ್ರೂಕ್, ಜೋಸ್ ಬಟ್ಲರ್ (ನಾಯಕ & ವಿಕೆಟ್ ಕೀಪರ್), ಲಿಯಾಮ್ ಲಿವಿಂಗ್‌ಸ್ಟೋನ್, ಸ್ಯಾಮ್ ಕರ್ರಾನ್, ಕ್ರಿಸ್ ವೋಕ್ಸ್, ಆದಿಲ್ ರಶೀದ್, ಮಾರ್ಕ್ ವುಡ್, ರೀಸ್ ಟಾಪ್ಲೆ
ಬೆಂಚ್: ಬೆನ್ ಸ್ಟೋಕ್ಸ್, ಗಸ್ ಅಟ್ಕಿನ್ಸನ್, ಡೇವಿಡ್ ವಿಲ್ಲಿ, ಮೊಯಿನ್ ಅಲಿ
ಬಾಂಗ್ಲಾದೇಶ ಆಡುವ ಬಳಗ: ತಂಝಿದ್ ಹಸನ್, ಲಿಟ್ಟನ್ ದಾಸ್, ನಜ್ಮುಲ್ ಹೊಸೈನ್ ಶಾಂಟೊ, ಶಕೀಬ್ ಅಲ್ ಹಸನ್ (ನಾಯಕ), ಮೆಹಿದಿ ಹಸನ್ ಮಿರಾಜ್, ಮುಶ್ಫಿಕರ್ ರಹೀಮ್ (ವಿಕೆಟ್ ಕೀಪರ್), ತೌಹಿದ್ ಹೃದಯೋಯ್, ಮಹೇದಿ ಹಸನ್, ತಸ್ಕಿನ್ ಅಹ್ಮದ್, ಶೋರಿಫುಲ್ ಇಸ್ಲಾಂ, ಮುಸ್ತಫಿಜುರ್ ರೆಹಮಾನ್
ಬೆಂಚ್: ನಸುಮ್ ಅಹ್ಮದ್, ಹಸನ್ ಮಹಮೂದ್, ತಂಝಿಮ್ ಹಸನ್ ಸಾಕಿಬ್, ಮಹಮ್ಮದುಲ್ಲಾ