Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಭಾರತ vs ಪಾಕಿಸ್ತಾನ ಸೆಮಿಫೈನಲ್ ಮುಖಾಮುಖಿಗೆ ಕಾದಿಗೆ ಕ್ರಿಕೆಟ್ ಜಗತ್ತು: ಸಾಧ್ಯವಾಗಲು ಇದೊಂದೇ ದಾರಿ!!

ಈ ಬಾರಿಯ ವಿಶ್ವಕಪ್ ಟೂರ್ನಿ ಲೀಗ್ ಹಂತ ಕೊನೆಯ ಘಟ್ಟವನ್ನು ತಲುಪಿದೆ. ಈಗಾಗಲೇ ಸೆಮಿಫೈನಲ್‌ಗೆ ಪ್ರವೇಶಿಸುವ ಮೂರು ತಂಡಗಳು ಖಚಿತಗೊಂಡಿದೆ. ಉಳಿದಿರುವ ಒಂದು ಸ್ಥಾನಕ್ಕಾಗಿ ಮೂರು ತಂಡಗಳ ಮಧ್ಯೆ ಪೈಪೋಟಿ ಏರ್ಪಟ್ಟಿದೆ. ನ್ಯೂಜಿಲೆಂಡ್, ಪಾಕಿಸ್ತಾನ ಹಾಗೂ ಅಫ್ಘಾನಿಸ್ತಾನ ತಂಡಗಳು ಈ ಒಂದು ಸ್ಥಾನಕ್ಕಾಗಿ ಹೋರಾಟ ನಡೆಸುತ್ತಿದೆ. ಹೀಗಾಗಿ ಟೂರ್ನಿ ಸಾಕಷ್ಟು ಕುತೂಹಲ ಮೂಡಿಸಿದೆ.

ಈ ಸಂದರ್ಭದಲ್ಲಿ ಇಂಗ್ಲೆಂಡ್ ತಂಡದ ಮಾಜಿ ನಾಯಕ ಮೈಕಲ್ ವಾನ್ ಟೂರ್ನಿಯಲ್ಲಿ ಕೊನೆಯ ಸ್ಥಾನಿಯಾಗಿ ಸೆಮಿಫೈನಲ್‌ಗೆ ಪ್ರವೇಶಿಸುವ ತಂಡ ಯಾವುದು ಎಂದು ಭವಿಷ್ಯ ನುಡಿದಿದ್ದಾರೆ. ಇಂಗ್ಲೆಂಡ್ ತಂಡದ ಮಾಜಿ ನಾಯಕ ಮೈಕಲ್ ವಾನ್ ಈ ಬಾರಿಯ ವಿಶ್ವಕಪ್‌ನ ಸೆಮಿಫೈನಲ್‌ನಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳು ಮುಖಾಮುಖಿಯಾಗುವ ಭರವಸೆ ಇದೆ ಎಂದಿದ್ದಾರೆ.

World Cup 2023: Michael Vaughan wants India vs Pakistan match in semi-final

ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಮೈಕಲ್ ವಾನ್, "ನಿನ್ನೆ ಆಸ್ಟ್ರೇಲಿಯಾ ಗೆದ್ದಿರುವುದು ಭಾರತ vs ಪಾಕಿಸ್ತಾನ ತಂಡಗಳ ಸೆಮಿಫೈನಲ್ ಕನಸನ್ನು ಸಾಧ್ಯವಾಗಿಸಿದೆ" ಎಂದಿದ್ದಾರೆ. ಈ ಮೂಲಕ ವಿಶ್ವಕಪ್‌ನ ಸೆಮಿಫೈನಲ್‌ನಲ್ಲಿ ಬದ್ಧ ಎದುರಾಳಿಗಳ ಕಾದಾಟವನ್ನು ಮತ್ತೊಮ್ಮೆ ನೋಡಲು ತಾನು ಕಾತರನಾಗಿರುವುದನ್ನು ವಾನ್ ವ್ಯಕ್ತಪಡಿಸಿದ್ದಾರೆ.

ಈ ಬಾರಿಯ ವಿಶ್ವಕಪ್‌ನಲ್ಲಿ ಸಂಪೂರ್ಣವಾಗಿ ಅಬ್ಬರಿಸಿರುವ ಭಾರತ ತಂಡ ಈಗಾಗಲೇ ಮೊದಲ ಎಂಟು ಪಂದ್ಯಗಳನ್ನು ಗೆದ್ದು ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದೆ. ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭಾರತ ನೆದರ್ಲೆಂಡ್ಸ್ ವಿರುದ್ಧ ತನ್ನ ಕೊನೆಯ ಮತ್ತು ಲೀಗ್ ಹಂತದ ಅಂತಿಮ ಪಂದ್ಯವನ್ನು ಆಡಲಿದೆ.

ಮತ್ತೊಂದೆಡೆ ಪಾಕಿಸ್ತಾನ ಆಡಿರುವ ಎಂಟು ಪಂದ್ಯಗಳ ಪೈಕಿ ನಾಲ್ಕರಲ್ಲಿ ಜಯಗಳಿಸಿದ್ದು ಎಂಟು ಅಂಕಗಳನ್ನು ಖಾತೆಯಲ್ಲಿ ಹೊಂದಿದ್ದು +0.036 ನೆಟ್ ರನ್‌ರೇಟ್‌ನೊಂದಿಗೆ ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ. ಹೀಗಾಗಿ ಬಾಬರ್ ಅಜಮ್ ಅವರ ನೇತೃತ್ವದ ತಂಡ ಪ್ರಸ್ತುತ ನಾಲ್ಕನೇ ಮತ್ತು ಕೊನೆಯ ಸೆಮಿಫೈನಲ್ ಸ್ಥಾನಕ್ಕಾಗಿ ಕೇನ್ ವಿಲಿಯಮ್ಸನ್ ನೇತೃತ್ವದ ನ್ಯೂಜಿಲೆಂಡ್ ಮತ್ತು ಹಶ್ಮತುಲ್ಲಾ ಶಾಹಿದಿ ನೇತೃತ್ವದ ಅಫ್ಘಾನಿಸ್ತಾನ ತಂಡದ ಜೊತೆಗೆ ಪೈಪೋಟಿ ನಡೆಸುತ್ತಿದೆ.

ಪಾಕಿಸ್ತಾನ ತಂಡದ ಅಂತಿಮ ಲೀಗ್ ಪಂದ್ಯ ಜೋಸ್ ಬಟ್ಲರ್ ನೇತೃತ್ವದ ಇಂಗ್ಲೆಂಡ್ ವಿರುದ್ಧ ನವೆಂಬರ್ 11 ರಂದು ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆಯಲಿದೆ.ಈ ಪಂದ್ಯದಲ್ಲಿ ಗೆಲುವು ಸಾಧಿಸುವುದು ಪಾಕಿಸ್ತಾನ ತಂಡಕ್ಕೆ ಅಗತ್ಯವಾಗಿದ್ದು ನೆಟ್ ರನ್‌ರೇಟ್ ಕೂಡ ಹೆಚ್ಚಿಸಿಕೊಳ್ಳುವ ಅಗತ್ಯವಿದೆ.

Story first published: Wednesday, November 8, 2023, 15:20 [IST]
Other articles published on Nov 8, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+