For Quick Alerts
ALLOW NOTIFICATIONS  
For Daily Alerts
 

ಪಾಕಿಸ್ತಾನ ಸೆಮಿಫೈನಲ್‌ಗೆ ತಲುಪಬಹುದು ಆದರೆ... : ಭವಿಷ್ಯ ನುಡಿದ ಮೊಹಮ್ಮದ್ ಕೈಫ್

ಈ ಬಾರಿಯ ವಿಶ್ವಕಪ್ ಟೂರ್ನಿಯಲ್ಲಿ ಟೀಮ್ ಇಂಡಿಯಾ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ತಮ್ಮ ಸ್ಥಾನವನ್ನು ಖಚಿತಪಡಿಸಿಕೊಂಡಿದೆ. ಆದರೆ ಉಳಿದ ಎರಡು ಸ್ಥಾನಗಳಿಗಾಗಿ ನಾಲ್ಕು ತಂಡಗಳ ಮಧ್ಯೆ ಹೋರಾಟ ನಡೆಯುತ್ತಿದೆ. ಈ ಬಗ್ಗೆ ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗ ಮೊಹಮ್ಮದ್ ಕೈಫ್ ಪ್ರತಿಕ್ರಿಯೆ ನೀಡಿದ್ದು ಪಾಕಿಸ್ತಾನದ ಸೆಮಿಫೈನಲ್ ಕನಸಿನ ಬಗ್ಗೆ ಭವಿಷ್ಯ ನುಡಿದಿದ್ದಾರೆ.

ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗ ಮೊಹಮ್ಮದ್ ಕೈಫ್ ಈ ಬಾರಿಯ ವಿಶ್ವಕಪ್‌ನಲ್ಲಿ ಪಾಕಿಸ್ತಾನ ತಂಡ ಸೆಮಿಫೈನಲ್‌ಗೆ ಪ್ರವೇಶ ಪಡೆಯುವ ಅವಕಾಶ ಇದೆ. ಆದರೆ ಸೆಮಿಫೈನಲ್‌ನಲ್ಲಿ ಭಾರತ ಏಕಪಕ್ಷೀಯವಾಗಿ ಗೆಲುವು ಸಾಧಿಸಲಿದೆ ಎಂದಿದ್ದಾರೆ.

World Cup 2023: Mohammad Kaif predicted Pakistans semifinal chance said they can reach but

ಈ ಬಾರಿಯ ವಿಶ್ವಕಪ್ ಟೂರ್ನಿಯಲ್ಲಿ ಪಾಕಿಸ್ತಾನ ಕ್ರಿಕೆಟ್ ತಂಡ ಸಾಕಷ್ಟು ಏರಿಳಿತಗಳನ್ನು ಸಾಧಿಸಿದೆ. ಆರಂಭಿಕ ಎರಡು ಪಂದ್ಯಗಳಲ್ಲಿ ಗೆಲವು ಸಾಧಿಸಿ ನಂತರ ಸತತ ನಾಲ್ಕು ಪಂದ್ಯಗಳಲ್ಲಿ ಸೋತ ಪಾಕಿಸ್ತಾನ ತಂಡ ಕಳೆದ ಎರಡು ಪಂದ್ಯಗಳಲ್ಲಿ ಗೆಲುವು ಸಾಧಿಸಿ ಸೆಮಿಫೈನಲ್ ಆಸೆಯನ್ನು ಜೀವಂತವಾಗಿರಿಸಿಕೊಂಡಿದೆ.

ಇನ್ನು ಪಾಕಿಸ್ತಾನ ತಂಡಕ್ಕೆ ಇನ್ನು ಒಂದು ಪಂದ್ಯ ಮಾತ್ರವೇ ಉಳಿದುಕೊಂಡಿದೆ. ಇಂಗ್ಲೆಂಡ್ ವಿರುದ್ಧದ ಈ ಪಂದ್ಯದಲ್ಲಿ ಪಾಕಿಸ್ತಾನ ತಂಡ ಗೆಲುವು ಸಾಧಿಸಿದರೆ ಮಾತ್ರ ಸಾಕಾಗುವುದಿಲ್ಲ. ಶ್ರೀಲಂಕಾ ತಮಡ ನ್ಯೂಜಿಲೆಂಡ್ ತಂಡವನ್ನು ಮಣಿಸ ಬೇಕಿದೆ ಹಾಗೂ ಅಫ್ಘಾಸ್ತಾನ ತಂಡ ಕೊನೆಯ ಎರಡು ಪಂದ್ಯಗಳಲ್ಲಿಯೂ ಸೋಲು ಅನುಭವಿಸಬೇಕಿದೆ. ಇದು ಸಾಧ್ಯವಾದರೆ ಪಾಕಿಸ್ತಾನ ತಂಡ ನೆಟ್‌ ರನ್‌ರೇಟ್‌ನ ಬಗ್ಗೆ ತಲೆಕೆಡಿಸಿಕೊಳ್ಳದೆ ಸೆಮಿಫೈನ ಲ್‌ಗೆ ಪ್ರವೇಶಿಸಬಹುದು.

ಪಾಕಿಸ್ತಾನದ ಸೆಮಿಫೈನಲ್ ಅವಕಾಶದ ಬಗ್ಗೆ ಮೊಹಮ್ಮದ್ ಕೈಫ್ ಸ್ಟಾರ್‌ಸ್ಪೋರ್ಟ್ಸ್‌ ಜೊತೆಗೆ ಮಾತನಾಡಿದ್ದಾರೆ. ಸೆಮಿಫೈನಲ್‌ನಲ್ಲಿ ಭಾರತಕ್ಕೆ ಪಾಕಿಸ್ತಾನ ತಂಡ ಎದುರಾಳಿಯಾದರೆ ಅದು ಏಕಪಕ್ಷೀಯವಾಗಿರಲಿದೆ ಎಂದಿದ್ದಾರೆ. ಇದಕ್ಕೆ ಅವರು ವಿಶ್ವಕಪ್ ಟೂರ್ನಿಯಲ್ಲಿ ಪಾಕಿಸ್ತಾನ ಹಾಗೂ ಭಾರತ ತಂಡಗಳ ನಡುವಿನ ಮುಖಾಮುಖಿಯ ದಾಖಲೆಯನ್ನು ಉಲ್ಲೇಖಿಸಿದ್ದಾರೆ. ಭಾರತ ಪಾಕಿಸ್ತಾನ ತಂಡವನ್ನು ವಿಶ್ವಕಪ್‌ನಲ್ಲಿ 8-0 ಅಂತರದಿಂದ ಮಣಿಸಿದೆ. ಇನ್ನು ಈ ಬಾರಿಯ ವಿಶ್ವಕಪ್‌ನಲ್ಲಿ ಈ ಎರಡು ತಂಡಗಳು ಮುಖಾಮುಖಿಯಾಗಿದ್ದಾಗ ಭಾರತ 7 ವಿಕೆಟ್‌ಗಳ ಅಂತರದಿಂದ ಗೆದ್ದು ಬೀಗಿತ್ತು.

"ಪಾಕಿಸ್ತಾನ ಸೆಮಿಫೈನಲ್‌ಗೆ ಪ್ರವೇಶಿಸಬಹುದು. ಆದರೆ ಅದು ಏಕಪಕ್ಷೀಯವಾದ ಪಂದ್ಯವಾಗಿರಲಿದೆ. ನಾನು ಇತಿಹಾಸದ ಪುಟಗಳನ್ನು ತೆರೆಯಲು ಬಯಸುತ್ತೇನೆ. ಭಾರತ ಅವರನ್ನು ಬಹಳ ಸುಲಭವಾಗಿ ಮಣಿಸಲಿದೆ. ಆದರೆ ಪಾಕಿಸ್ತಾನ ತಂಡಕ್ಕೆ ಅವಕಾಶ ಇನ್ನೂ ಇದೆ. ಅವರು ಉತ್ತಮವಾಗಿ ಆಡಿ ಇಂಗ್ಲೆಂಡ್ ತಂಡವನ್ನು ಮಣಿಸಿದರೆ ಆ ಅವಕಾಶವಿದೆ. ಆದರೆ ಅವರಿಗೆ ನೆಟ್‌ ರನ್‌ರೇಟ್‌ನ ಸಮಸ್ಯೆ ಇದೆ. ಹಾಗಾಗಿ ಬಹಳ ದೊಡ್ಡ ಅಂತರದಿಂದ ಇಂಗ್ಲೆಂಡ್ ವಿರುದ್ಧ ಗೆಲುವು ಸಾಧಿಸುವ ಅಗತ್ಯವಿದೆ" ಎಂದಿದ್ದಾರೆ ಮೊಹಮ್ಮದ್ ಕೈಫ್.

Story first published: Tuesday, November 7, 2023, 17:14 [IST]
Other articles published on Nov 7, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+