Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

World Cup 2023: ಜಹೀರ್, ಶ್ರೀನಾಥ್ ಹಿಂದಿಕ್ಕಿ ಭಾರತ ಪರ ಐತಿಹಾಸಿಕ ದಾಖಲೆ ನಿರ್ಮಿಸಿದ ಮೊಹಮ್ಮದ್ ಶಮಿ!

ಗುರುವಾರ, ನವೆಂಬರ್ 2ರಂದು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಶ್ರೀಲಂಕಾ ವಿರುದ್ಧದ 2023ರ ಐಸಿಸಿ ಏಕದಿನ ವಿಶ್ವಕಪ್ ಪಂದ್ಯದಲ್ಲಿ ಆತಿಥೇಯ ಭಾರತ ತಂಡ ಎದುರಾಳಿ ಶ್ರೀಲಂಕಾ ವಿರುದ್ಧ ದಾಖಲೆಯ 302 ರನ್‌ಗಳ ಅಂತರದಿಂದ ಗೆಲುವು ಸಾಧಿಸಿತು.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ವಿರಾಟ್ ಕೊಹ್ಲಿ, ಶುಭ್ಮನ್ ಗಿಲ್ ಮತ್ತು ಶ್ರೇಯಸ್ ಅಯ್ಯರ್ ಅವರ ಭರ್ಜರಿ ಅರ್ಧಶತಕಗಳ ನೆರವಿನಿಂದ 50 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 357 ರನ್‌ಗಳನ್ನು ಕಲೆಹಾಕಿತು.

World Cup 2023: Mohammed Shami Becomes Highest Wicket Taker For India In ODI World Cup History

ನಂತರ 358 ರನ್‌ಗಳ ಬೃಹತ್ ಗುರಿ ಬೆನ್ನಟ್ಟಿದ ಶ್ರೀಲಂಕಾ ತಂಡ ಐತಿಹಾಸಿಕ ಪತನ ಕಂಡಿತು ಮತ್ತು ಕೇವಲ 19.4 ಓವರ್‌ಗಳಲ್ಲಿ 55 ರನ್‌ಗಳಿಗೆ ಸರ್ವಪತನ ಕಂಡಿತು.

ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿದ ವೇಗಿ ಮೊಹಮ್ಮದ್ ಶಮಿ 5 ಓವರ್‌ಗಳಲ್ಲಿ 18 ರನ್ ನೀಡಿ 5 ವಿಕೆಟ್ ಗೊಂಚಲು ಪಡೆದರು. ಗಮನಾರ್ಹವಾಗಿ ಇದು ವಿಶ್ವಕಪ್‌ನಲ್ಲಿ ಮೂರನೇ ಬಾರಿಗೆ ಈ ಸಾಧನೆ ಮಾಡಿದರು.

ಇದೇ ವೇಳೆ ಮೊಹಮ್ಮದ್ ಶಮಿ ಅವರು ಏಕದಿನ ವಿಶ್ವಕಪ್ ಇತಿಹಾಸದಲ್ಲಿ ಭಾರತದ ಪರ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡರು.

World Cup 2023: Mohammed Shami Becomes Highest Wicket Taker For India In ODI World Cup History

ಮೊಹಮ್ಮದ್ ಶಮಿ ಅವರು ಏಕದಿನ ವಿಶ್ವಕಪ್‌ನಲ್ಲಿ 45 ವಿಕೆಟ್‌ಗಳನ್ನು ಕಬಳಿಸುವ ಮೂಲಕ ಮಾಜಿ ವೇಗಿಗಳಾದ ಜಹೀರ್ ಖಾನ್ ಮತ್ತು ಜಾವಗಲ್ ಶ್ರೀನಾಥ್ ಅವರನ್ನು ಹಿಂದಿಕ್ಕಿದರು.

ಏಕದಿನ ವಿಶ್ವಕಪ್‌ನಲ್ಲಿ ಭಾರತದ ಪರ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್‌ಗಳು

45 - ಮೊಹಮ್ಮದ್ ಶಮಿ
44 - ಜಹೀರ್ ಖಾನ್
44 - ಜಾವಗಲ್ ಶ್ರೀನಾಥ್
33 - ಜಸ್ಪ್ರೀತ್ ಬುಮ್ರಾ
31 - ಅನಿಲ್ ಕುಂಬ್ಳೆ

ವಿಶ್ವದಲ್ಲಿ ಆಸ್ಟ್ರೇಲಿಯಾದ ಮಾಜಿ ಬೌಲರ್ ಗ್ಲೆನ್ ಮೆಕ್‌ಗ್ರಾತ್ ಅವರು 71 ವಿಕೆಟ್‌ಗಳೊಂದಿಗೆ ಏಕದಿನ ವಿಶ್ವಕಪ್ ಇತಿಹಾಸದಲ್ಲಿ ಅತಿ ಹೆಚ್ಚು ವಿಕೆಟ್ ಪಡೆದವರ ಪೈಕಿ ಅಗ್ರಸ್ಥಾನದಲ್ಲಿದ್ದಾರೆ. ಮೊಹಮ್ಮದ್ ಶಮಿ ಇದೀಗ ಅಗ್ರ 10 ರೊಳಗೆ ಪ್ರವೇಶಿಸಿದರು.

ಸಕ್ರಿಯ ಅಂತಾರಾಷ್ಟ್ರೀಯ ಕ್ರಿಕೆಟಿಗರಲ್ಲಿ ಮಿಚೆಲ್ ಸ್ಟಾರ್ಕ್ ಮತ್ತು ಟ್ರೆಂಟ್ ಬೌಲ್ಟ್ ಕ್ರಮವಾಗಿ 56 ಮತ್ತು 49 ವಿಕೆಟ್‌ಗಳೊಂದಿಗೆ ಪಟ್ಟಿಯಲ್ಲಿ ಮೊಹಮ್ಮದ್ ಶಮಿ ಅವರಿಗಿಂತ ಮೇಲಿದ್ದಾರೆ.

ಏಕದಿನ ವಿಶ್ವಕಪ್‌ಗಳಲ್ಲಿ ಹೆಚ್ಚು 5-ವಿಕೆಟ್ ಗೊಂಚಲು ಪಡೆದ ಬೌಲರ್‌ಗಳು

3 - ಮಿಚೆಲ್ ಸ್ಟಾರ್ಕ್ - ಆಸ್ಟ್ರೇಲಿಯಾ
3 - ಮೊಹಮ್ಮದ್ ಶಮಿ - ಭಾರತ

Story first published: Thursday, November 2, 2023, 21:00 [IST]
Other articles published on Nov 2, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+