ಪವಾಡದ ನಿರೀಕ್ಷೆಯಲ್ಲಿದ್ದ ಪಾಕ್‌ಗೆ ಇಂಗ್ಲೆಂಡ್ ಶಾಕ್: 4ನೇ ತಂಡವಾಗಿ ಸೆಮಿಫೈನಲ್‌ಗೆ ಲಗ್ಗೆಯಿಟ್ಟ ಕಿವೀಸ್
ವಿಶ್ವಕಪ್ ಟೂರ್ನಿಯ ಲೀಗ್ ಹಂತದಲ್ಲಿ ಒಂದು ಪಂದ್ಯ ಬಾಕಿಯಿರುವಂತೆಯೇ ಸೆಮಿ ಫೈನಲ್‌ನಲ್ಲಿ ಆಡುವ ನಾಲ್ಕು ತಂಡಗಳು ಯಾವುದು ಎನ್ನುವುದು ಖಚಿತವಾಗಿದೆ. ಕೊನೆಯ ಸ್ಥಾನಕ್ಕಾಗಿ ನ್ಯೂಜಿಲೆಂಡ್ ಮತ್ತು ಪಾಕಿಸ್ತಾನದ ಮಧ್ಯೆ ಪೈಪೋಟಿಯಿತ್ತು. ಆದರೆ ನ್ಯೂಜಿಲೆಂಡ್ ತಂಡ ಗುರುವಾರ ನಡೆದ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಭರ್ಜರೊಯಾಗಿ ಗೆಲುವು ಸಾಧಿಸಿದ ಬಳಿಕ ಸೆಮಿಫೈನಲ್ ಪ್ರವೇಶವನ್ನು ಬಹುತೇಕ ಖಚಿತಪಡಿಸಿಕೊಂಡಿತ್ತು. ಆದರೆ ಪಾಕ್ ತಂಡಕ್ಕೆ ಒಂದು ಸಣ್ಣ ಅವಕಾಶವಿದ್ದ ಕಾರಣ ಇಂಗ್ಲೆಂಡ್ ವಿರುದ್ಧದ ಪಂದ್ಯ ಈ ದೃಷ್ಟಿಯಿಂದ ಮಹತ್ವ ಪಡೆದುಕೊಂಡಿತ್ತು.
ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಪಾಕಿಸ್ತಾನ ತಂಡ ಗೆಲುವು ಸಾಧಿಸುವುದರ ಜೊತೆಗೆ ಕಿವಿಸ್ ನೆಟ್ ರನ್‌ರೇಟ್ ಹಿಂದಿಕ್ಕುವಂತಾ ಪ್ರದರ್ಶನ ನೀಡಬೇಕಿತ್ತು. ಆದರೆ ಈ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಟಾಸ್ ಗೆದ್ದು ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ತಕ್ಷಣವೇ ಇದು ಅಸಂಭವ ಎನಿಸಿಕೊಂಡಿತ್ತು. ಯಾಕೆಂದರೆ ಇಂಗ್ಲೆಂಡ್ ತಂಡ ನೀಡುವ ಗುರಿಯನ್ನು ಪಾಕಿಸ್ತಾನ ತಂಡ 284 ಎಸೆತಗಳು ಬಾಕಿಯಿರುವಂತೆ ಗೆಲ್ಲಬೇಕಿತ್ತು. ಅದು ಅಸಾಧ್ಯವಾಗಿದೆ.

ಪಾಕಿಸ್ತಾನ ತಂಡದ ವಿರುದ್ಧದ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಮೊದಲಿಗೆ ಬ್ಯಾಟಿಂಗ್ ನಡೆಸಿ 337/9 ರನ್‌ಗಳನ್ನು ಕಲೆಹಾಕಿದೆ. ಬಳಿಕ ಬ್ಯಾಟಿಂಗ್‌ನಲ್ಲಿಯೂ ಪಾಕಿಸ್ತಾನ ಕಳಪೆ ಪ್ರದರ್ಶನ ನೀಡಿದೆ. ಈ ಮೂಲಕ ಪಾಕಿಸ್ತಾನ ತಂಡ ಈ ಬಾರಿಯ ವಿಶ್ವಕಪ್ ಟೂರ್ನಿಯಿಂದ ಅಧಿಕೃತವಾಗಿ ಹೊರಬಿದ್ದಂತಾಗಿದ್ದು ಐದನೇ ಸ್ಥಾನಿಯಾಗಿ ವಿಶ್ವಕಪ್ ಅಭಿಯಾನ ಅಂತ್ಯಗೊಳಿಸಿದೆ.
ಇನ್ನು ಟೀಮ್ ಇಂಡಿಯಾ ಈ ವಿಶ್ವಕಪ್‌ನಲ್ಲಿ ಅಗ್ರ ಸ್ಥಾನಿಯಾಗಿ ಸೆಮಿಫೈನಲ್ ಪ್ರವೇಶ ಪಡೆದುಕೊಂಡಿದೆ. ಆಡಿರುವ 8 ಪಂದ್ಯಗಳಲ್ಲಿ ಭಾರತ 16 ಅಂಕಗಳನ್ನು ಗಳಿಸಿದ್ದು ಭಾನುವಾರ ಕೊನೆಯ ಲೀಗ್ ಪಂದ್ಯವನ್ನು ನೆದರ್ಲೆಂಡ್ಸ್ ವಿರುದ್ಧ ಆಡಲಿದೆ. ಇನ್ನು ದಕ್ಷಿಣ ಆಫ್ರಿಕಾ ತಂಡ 14 ಅಂಕಗಳೊಂದಿಗೆ ಎರಡನೇ ಸ್ಥಾನಿಯಾಗಿ ಸೆಮಿಪೈನಲ್ ಪ್ರವೇಶ ಪಡೆದುಕೊಂಡಿದೆ. ಆಸ್ಟ್ರೇಲಿಯಾ ತಂಡ ಕೂಡ 14 ಅಂಕಗಳನ್ನು ಪಡೆದುಕೊಂಡಿದ್ದು ನೆಟ್‌ರನ್‌ರೇಟ್‌ನ ಆಧಾರದಲ್ಲಿ ಮೂರನೇ ಸ್ಥಾನವನ್ನು ಪಡೆದುಕೊಂಡಿದೆ. ಇನ್ನು ನ್ಯೂಜಿಲೆಂಡ್ ತಂಡ 10 ಅಂಕಗಳೊಂದಿಗೆ ನಾಲ್ಕನೇ ಸ್ಥಾನಿಯಾಗಿ ಸೆಮಿಫೈನಲ್ ಸ್ಥಾನ ಖಚಿತಪಡಿಸಿಕೊಂಡಿದೆ.
ಇನ್ನು ವಿಶ್ವಕಪ್ ಟೂರ್ನಿಯ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯ ನವೆಂಬರ್ 15ರಂದು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಆಯೋಜನೆಯಾಗಲಿದೆ. ಇನ್ನು ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಹಾಗೂ ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಲಿದ್ದು ನವೆಂಬರ್ 16 ಗುರುವಾರ ಕೊಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಈ ಪಂದ್ಯ ಆಯೋಜನೆಯಾಗಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications