ಕ್ರಿಕೆಟ್ ವಿಶ್ವಕಪ್ ಇಂದಿನಿಂದ ಆರಂಭ: 2019ರ ವಿಶ್ವಕಪ್‌ನ ಸೋಲಿಗೆ ಸೇಡು ತೀರಿಸಿಕೊಳ್ಳುತ್ತಾ ಇಂಗ್ಲೆಂಡ್
ಅಭಿಮಾನಿಗಳು ತೀವ್ರ ಕುತೂಹಲದಿಂದ ಕಾಯುತ್ತಿರುವ ಏಕದಿನ ವಿಶ್ವಕಪ್ ಟೂರ್ನಿ ಇಂದಿನಿಂದಲೇ ಆರಂಭವಾಗುತ್ತಿದೆ. 2019ರ ವಿಶ್ವಕಪ್‌ನ ಫೈನಲಿಸ್ಟ್‌ಗಳಾದ ಇಂಗ್ಲೆಂಡ್ ಹಾಗೂ ನ್ಯೂಜಿಲೆಂಡ್ ತಂಡಗಳು ಅಹ್ಮದಾಬಾದ್‌ನಲ್ಲಿ ಮುಖಾಮುಖಿಯಾಗುವ ಮೂಲಕ ಈ ಮೆಗಾ ಟೂರ್ನಿಗೆ ಚಾಲನೆ ದೊರೆಯಲಿದೆ.
ಹಾಲಿ ಚಾಂಪಿಯನ್ ಆಗಿರುವ ಇಂಗ್ಲೆಂಡ್ ತಂಡ ಈ ಬಾರಿಯ ವಿಶ್ವಕಪ್‌ನಲ್ಲಿಯೂ ಬಲಿಷ್ಠವಾಗಿದ್ದು ಕಪ್ ಗೆಲ್ಲುವ ನೆಚ್ಚಿನ ತಂಡ ಎನಿಸಿಕೊಂಡಿದೆ. ಕುತೂಹಲಕಾರಿಯೆಂದರೆ ಪ್ರಸ್ತುತ ಏಕದಿನ ಕ್ರಿಕೆಟ್‌ನ ಶ್ರೇಯಾಂಖದಲ್ಲಿ ಇಂಗ್ಲೆಂಡ್ ತಂಡ ಟಾಪ್ 3 ಸ್ಥಾನದಲ್ಲಿ ಇಲ್ಲದಿದ್ದರೂ ಇಂಗ್ಲೆಂಡ್ ವಿಶ್ವಕಪ್ ಗೆಲ್ಲುವ ಫೇವರೀಟ್ ಎನಿಸಿಕೊಂಡಿದ್ದು ಬಲಿಷ್ಠ ಆಟಗಾರರ ಪಡೆಯೊಂದಿಗೆ ಕಣಕ್ಕಿಳಿಯುತ್ತಿದೆ. ಜೋಸ್ ಬಟ್ಲರ್ ನಾಯಕತ್ವದಲ್ಲಿ ಇಂಗ್ಲೆಂಡ್ ಎಲ್ಲಾ ವಿಭಾಗದಸಲ್ಲಿಯೂ ಸಮತೋಲಿತವಾಗಿದ್ದು ಬಲಿಷ್ಠವಾಗಿರುವುದರಲ್ಲಿ ಅನುಮಾನವಿಲ್ಲ.

ಮತ್ತೊಂದೆಡೆ 2015 ಮತ್ತು 2019ರ ಫೈನಲಿಸ್ಟ್ ತಂಡವಾಗಿರುವ ನ್ಯೂಜಿಲೆಂಡ್ ಮತ್ತೊಮ್ಮೆ ಐಸಿಸಿ ಪಂದ್ಯಾವಳಿಯಲ್ಲಿ ಟ್ರೋಫಿಯನ್ನು ಗೆಲ್ಲುವ ಕನಸಿನೊಂದಿಗೆ ಕಣಕ್ಕಿಳಿಯುತ್ತಿದೆ. ಆದರೆ ಈ ಬಾರಿಯ ವಿಶ್ವಕಪ್ ಟೂರ್ನಿಯಲ್ಲಿ ನ್ಯೂಜಿಲೆಂಡ್ ತಂಡ ವಿಶ್ವಕಪ್ ಗೆಲ್ಲುವ ನೆಚ್ಚಿನ ತಂಡ ಎನಿಸಿಕೊಂಡಿಲ್ಲ. ಆದರೆ ಈ ವಿಶ್ವಕಪ್‌ನಲ್ಲಿ ಮತ್ತೊಮ್ಮೆ ಕಿವೀಸ್ ಪಡೆ ಡಾರ್ಕ್ ಹಾರ್ಸ್ ಎನಿಸಿಕೊಂಡಿದೆ.
2019ರಲ್ಲಿ ಇಂಗ್ಎಂಡ್‌ನ ಆತೊರ್ಥಯದಲ್ಲಿ ನಡೆದ ವಿಶ್ವಕಪ್ ಟೂರ್ನಿಯಲ್ಲಿ ಆತಿಥೇಯ ಇಂಗ್ಲೆಂಡ್ ವಿರುದ್ಧ ನ್ಯೂಜಿಲೆಂಡ್ ತಂಡ ಫೈನಲ್‌ನಲ್ಲಿ ಮುಖಾಮುಖುಯಾಗಿತ್ತು. ವಿಶ್ವಕಪ್ ಟೂರ್ನಿಯ ಇತಿಹಾಸದಲ್ಲೇ ನಡೆದ ಅತ್ಯಂತ ರೋಚಕ ಫೈನಲ್ ಪಂದ್ಯ ಎನಿಸಿಕೊಂಡ ಪೈನಲ್ಸ್‌ನಲ್ಲಿ ಮೊದಲಿಗೆ ಎರಡೂ ತಂಡಗಳು ಟೈನಲ್ಲಿ ಅಂತ್ಯಗೊಂಡ ಬಳಿಕ ಸೂಪರ್ ಓವರ್‌ನಲ್ಲಿ ಫಲಿತಾಂಶ ಕಂಡುಕೊಳ್ಳಲು ನಿರ್ಧರಿಸಲಾಗಿತ್ತು. ಈ ಸೂಪರ್ ಓವರ್ ಕೂಡ ರೋಚಕವಾಗಿ ಟೈ ಆದ ಕಾರಣ ಅಂತಿಮವಾಗಿ ಬೌಂಡರಿಗಳ ಆಧಾರದಲ್ಲಿ ಇಂಗ್ಲೆಂಡ್ ತಂಡವನ್ನು ವಿಜೇತ ತಂಡ ಎಂದು ಘೋಷಣೆ ಮಾಡಲಾಗಿತ್ತು.
ಇಂಗ್ಲೆಂಡ್ ತಂಡ: ಜೋಸ್ ಬಟ್ಲರ್ (c & wk), ಜಾನಿ ಬೈರ್‌ಸ್ಟೋ, ಡೇವಿಡ್ ಮಲನ್, ಜೋ ರೂಟ್, ಬೆನ್ ಸ್ಟೋಕ್ಸ್, ಲಿಯಾಮ್ ಲಿವಿಂಗ್‌ಸ್ಟೋನ್, ಮೊಯಿನ್ ಅಲಿ, ಸ್ಯಾಮ್ ಕರ್ರಾನ್, ಕ್ರಿಸ್ ವೋಕ್ಸ್, ಆದಿಲ್ ರಶೀದ್, ಮಾರ್ಕ್ ವುಡ್, ಹ್ಯಾರಿ ಬ್ರೂಕ್, ಗಸ್ ಅಟ್ಕಿನ್ಸನ್, ರೀಸ್ ಟೋಪ್ಲಿ, ಡೇವಿಡ್ ವಿಲ್ಲಿ
ನ್ಯೂಜಿಲೆಂಡ್ ತಂಡ: ಟಾಮ್ ಲ್ಯಾಥಮ್ (c & wk), ಡೆವೊನ್ ಕಾನ್ವೇ, ವಿಲ್ ಯಂಗ್, ಡೇರಿಲ್ ಮಿಚೆಲ್, ಮಾರ್ಕ್ ಚಾಪ್ಮನ್, ಗ್ಲೆನ್ ಫಿಲಿಪ್ಸ್, ರಚಿನ್ ರವೀಂದ್ರ, ಇಶ್ ಸೋಧಿ, ಮ್ಯಾಟ್ ಹೆನ್ರಿ, ಟ್ರೆಂಟ್ ಬೌಲ್ಟ್, ಲಾಕಿ ಫರ್ಗುಸನ್, ಟಿಮ್ ಸೌಥಿ, ಮಿಚೆಲ್ ಸ್ಯಾಂಟ್ನರ್, ಜೇಮ್ಸ್ ನೀಶಮ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications