For Quick Alerts
ALLOW NOTIFICATIONS  
For Daily Alerts
 

ವಿಶ್ವಕಪ್‌ಗೆ 15 ಆಟಗಾರರ ಬಲಿಷ್ಠ ಪಡೆಯನ್ನು ಘೋಷಣೆ ಮಾಡಿದ ಆಸ್ಟ್ರೇಲಿಯಾ

ಮುಂಬರುವ ಐಸಿಸಿ ಪುರುಷರ ಏಕದಿನ ವಿಶ್ವಕಪ್ ಟೂರ್ನಿಗೆ ತನ್ನ 15 ಆಟಗಾರರ ಪಡೆಯನ್ನು ಘೋಷಣೆ ಮಾಡಿದೆ. ಅಂದಹಾಗೆ ಆಸ್ಟ್ರೇಲಿಯಾ 18 ಆಟಗಾರರ ತಂಡವನ್ನು ಕಳೆದ ತಿಂಗಳು ಪ್ರಕಟಿಸಿತ್ತು. ಇದರಲ್ಲಿ ಮೂವರನ್ನು ಹೊರಗಿಟ್ಟು ಈಗ ಅಂತಿಮ 15 ಆಟಗಾರರ ಪಡೆಯನ್ನು ಘೋಷಣೆ ಮಾಡಿದೆ. ಅರೋನ್ ಹಾರ್ಡೀ, ನಾಥನ್ ಎಲ್ಲೀಸ್ ಹಾಗೂ ತನ್ವೀಸ್ ಸಂಘ ತಂಡದಿಂದ ಹೊರಬಿದ್ದ ಮೂವರು ಆಟಗಾರರಾಗಿದ್ದಾರೆ.

ಪ್ಯಾಟ್ ಕಮ್ಮಿನ್ಸ್ ಅವರು ತಂಡವನ್ನು ಮುನ್ನಡೆಸಲಿದ್ದು ಬೌಲಿಂಗ್ ವಿಭಾಗದಲ್ಲಿ ಅವರಿಗೆ ಜೋಶ್ ಹೇಜಲ್‌ವುಡ್ ಹಾಗೂ ವಿಚೆಲ್ ಸ್ಟಾರ್ಕ್ ಸಾಥ್ ನೀಡಲಿದ್ದಾರೆ. ಎಲ್ಲೀಸ್ ಬದಲಿಗೆ ಶಾನ್ ಅಬಾಟ್ ತಂಡದಲ್ಲಿ ಬ್ಯಾಕಲ್ ವೇಗಿಯಾಗಿ ಸ್ಥಾನವನ್ನು ಗಿಟ್ಟಿಸಿಕೊಂಡಿದ್ದಾರೆ. ಆಶ್ಟನ್ ಅಗರ್ ಹಾಗೂ ಆಡಂ ಜಂಪಾ ಸ್ಪಿನ್ನರ್‌ಗಳಾಗಿ ತಂಡದಲ್ಲಿದ್ದಾರೆ.

World cup 2023: Pat Cummins led 15 embers Australian squad announced for world cup

ಇನ್ನು ಆಸ್ಟ್ರೇಲಿಯಾದ ಬ್ಯಾಟಿಂಗ್ ಲೈನ್‌ಅಪ್ ಬಹಳ ಬಲಿಷ್ಠವಾಗಿದೆ. ಡೇವಿಡ್ ವಾರ್ನರ್, ಸ್ಟೇವ್ ಸ್ಮಿತ್ ಮತ್ತು ಟ್ರಾವಿಡ್ ಹೆಡ್ ಅಗ್ರ ಕ್ರಮಾಂಕದಲ್ಲಿ ಆಡಲಿದ್ದಾರೆ. ಉಳಿದಂತೆ ಮಿಚೆಲ್ ಮಾರ್ಶ್, ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕಸ್ ಸ್ಟೋಯ್ನಿಸ್ ಮತ್ತು ಕ್ಯಾಮರೂನ್ ಗ್ರೀನ್ ಆಲ್‌ರೌಂಡರ್‌ಗಳಾದ ಈ ತಂಡಕ್ಕೆ ಮತ್ತಷ್ಟು ಬಲವನ್ನು ತುಂಬಲಿದ್ದಾರೆ.

ಇನ್ನು ಅಲೆಕ್ಸ್ ಕ್ಯಾರಿ ಹಾಗೂ ಜೋಶ್ ಇಂಗ್ಲೀಸ್ ವಿಕೆಟ್ ಕೀಪರ್ ಬ್ಯಾಟರ್‌ಗಳಾಗಿ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಇದರಲ್ಲಿ ಕ್ಯಾರಿ ಮೊದಲ ಆಯ್ಕೆಯ ಸ್ಪಿನ್ನರ್ ಆಗಿ ಆಡುವ ಬಳಗದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ. 2019ರ ವಿಶ್ವಕಪ್‌ನಲ್ಲಿಯೂ ಇವರು ಅದ್ಭುತ ಪ್ರದರ್ಶನ ನೀಡಿ ಮಿಂಚಿದ್ದರು.

ಸದ್ಯ ಆಸ್ಟ್ರೇಲಿಯಾ ತಂಡ ದಕ್ಷಿಣ ಆಫ್ರಿಕಾದಲ್ಲಿದ್ದು ದ. ಆಫ್ರಿಕಾ ತಂಡದ ವಿರುದ್ಧ ಸರಣಿಯಲ್ಲಿ ಭಾಗವಹಿಸುವ ಮೂಲಕ ವಿಶ್ವಕಪ್‌ಗೆ ಸಿದ್ಧತೆಯನ್ನು ನಡೆಸುತ್ತಿದೆ. ಅದಾದ ಬಳಿಕ ಆಸ್ಟ್ರೇಲಿಯಾ ತಂಡ ಭಾರತಕ್ಕೆ ಪ್ರಯಾಣಿಸಲಿದ್ದು ಮೂರು ಪಂದ್ಯಗಳ ಏಕದಿನ ಸರಣಿಯನ್ನು ಆಡಲಿದೆ. ಇದು ಎರಡು ತಂಡಗಳಿಗೂ ವಿಶ್ವಕಪ್‌ಗೆ ಮುನ್ನ ಕೊನೆಯ ದ್ವಿಪಕ್ಷೀಯ ಸರಣಿಯಾಗಿರಲಿದೆ.

ಆಸ್ಟ್ರೇಲಿಯಾದ ವಿಶ್ವಕಪ್ ತಂಡ: ಪ್ಯಾಟ್ ಕಮಿನ್ಸ್ (ನಾಯಕ), ಸ್ಟೀವ್ ಸ್ಮಿತ್, ಅಲೆಕ್ಸ್ ಕ್ಯಾರಿ, ಜೋಶ್ ಇಂಗ್ಲಿಸ್, ಸೀನ್ ಅಬಾಟ್, ಆಷ್ಟನ್ ಅಗರ್, ಕ್ಯಾಮೆರಾನ್ ಗ್ರೀನ್, ಜೋಶ್ ಹ್ಯಾಜಲ್‌ವುಡ್, ಟ್ರಾವಿಸ್ ಹೆಡ್, ಮಿಚ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕಸ್ ಸ್ಟೊಯಿನಿಸ್, ಡೇವಿಡ್ ವಾರ್ನರ್, ಆಡಮ್ ಝಂಪಾ, ಮಿಚೆಲ್ ಸ್ಟಾರ್ಕ್.

Story first published: Wednesday, September 6, 2023, 8:48 [IST]
Other articles published on Sep 6, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+