For Quick Alerts
ALLOW NOTIFICATIONS  
For Daily Alerts
 

World Cup 2023 Points Table: ಇಂಗ್ಲೆಂಡ್‌ ವಿರುದ್ಧ ಗೆದ್ದ ಅಫ್ಘಾನಿಸ್ತಾನ 6ನೇ ಸ್ಥಾನ: ಆಸ್ಟ್ರೇಲಿಯಾಗೆ ಕೊನೆಯ ಸ್ಥಾನ!

ಭಾನುವಾರ, ಅಕ್ಟೋಬರ್ 15ರಂದು ನವದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ 2023ರ ಐಸಿಸಿ ಏಕದಿನ ವಿಶ್ವಕಪ್‌ನ 13ನೇ ಪಂದ್ಯದಲ್ಲಿ ಕ್ರಿಕೆಟ್ ಜನಕ ಹಾಗೂ ಹಾಲಿ ಚಾಂಪಿಯನ್ ಇಂಗ್ಲೆಂಡ್ ತಂಡದ ವಿರುದ್ಧ ಅಫ್ಘಾನಿಸ್ತಾನ ತಂಡ 69 ರನ್‌ಗಳ ಐತಿಹಾಸಿಕ ಗೆಲುವು ಸಾಧಿಸಿದೆ.

ಅನಿರೀಕ್ಷಿತ ರೀತಿಯಲ್ಲಿ ಬಲಿಷ್ಠ ಇಂಗ್ಲೆಂಡ್ ತಂಡಕ್ಕೆ ದುರ್ಬಲ ಎನಿಸಿಕೊಂಡಿದ್ದ ಅಫ್ಘಾನಿಸ್ತಾನ ವಿಶ್ವಕಪ್‌ನಲ್ಲಿ ಮೊದಲ ಬಾರಿಗೆ ಸೋಲಿನ ರುಚಿ ತೋರಿಸಿದೆ. ಇನ್ನು ಅಫ್ಘಾನಿಸ್ತಾನ ತಂಡಕ್ಕೆ ಏಕದಿನ ವಿಶ್ವಕಪ್‌ನಲ್ಲಿ ಇದು ಎರಡನೇ ಗೆಲುವಾಗಿದೆ.

World Cup 2023 Points Table: Afghanistan Takes 6th Place After win Against England: 10th Place for Australia

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಅಫ್ಘಾನಿಸ್ತಾನ ತಂಡ ರಹಮಾನುಲ್ಲಾ ಗುರ್ಬಾಜ್ ಮತ್ತು ಇಕ್ರಮ್ ಅಲಿಖಿಲ್ ಅವರ ಅರ್ಧಶತಕದ ನೆರವಿನಿಂದ 49.5 ಓವರ್‌ಗಳಲ್ಲಿ 284 ರನ್‌ಗಳಿಗೆ ಸರ್ವಪತನ ಕಂಡಿತು.

285 ರನ್‌ಗಳ ಸವಾಲಿನ ಗುರಿ ಬೆನ್ನಟ್ಟಿದ ಇಂಗ್ಲೆಂಡ್‌ ತಂಡ 40.3 ಓವರ್‌ಗಳಲ್ಲಿ ಕೇವಲ 215 ರನ್‌ಗಳಿಗೆ ಆಲೌಟ್ ಆಗಿ 69 ರನ್‌ಗಳಿಂದ ಹೀನಾಯ ಸೋಲು ಅನುಭವಿಸಿತು.

ಇನ್ನು 2023ರ ಐಸಿಸಿ ಏಕದಿನ ವಿಶ್ವಕಪ್‌ನ ಅಂಕಪಟ್ಟಿಯಲ್ಲಿ ದೊಡ್ಡ ಬದಲಾವಣೆಯಾಗಿದ್ದು, ಇಂಗ್ಲೆಂಡ್‌ ವಿರುದ್ಧ ಗೆದ್ದ ಅಫ್ಘಾನಿಸ್ತಾನ 6ನೇ ಸ್ಥಾನಕ್ಕೆ ಏರಿಕೆ ಕಂಡಿದ್ದರೆ, ಇಂಗ್ಲೆಂಡ್ 5ನೇ ಸ್ಥಾನದಲ್ಲಿ ಮುಂದುವರೆದಿದೆ.

ಶನಿವಾರದಂದು ಪಾಕಿಸ್ತಾನ ವಿರುದ್ಧ 7 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದ್ದ ಭಾರತ ತಂಡ ಮೂರು ಪಂದ್ಯಗಳಲ್ಲಿ 6 ಅಂಕಗಳನ್ನು ಪಡೆದು 2023ರ ಏಕದಿನ ವಿಶ್ವಕಪ್‌ನ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿ ಮುಂದುವರೆದಿದೆ.

World Cup 2023 Points Table: Afghanistan Takes 6th Place After win Against England: 10th Place for Australia

ಇನ್ನು ಮೂರು ಪಂದ್ಯಗಳಲ್ಲಿ 6 ಅಂಕಗಳನ್ನು ಹೊಂದಿರುವ ನ್ಯೂಜಿಲೆಂಡ್ ತಂಡ ನೆಟ್‌ ರನ್‌ರೇಟ್‌ನಲ್ಲಿ ಭಾರತಕ್ಕಿಂತ ಕಡಿಮೆ ದರ ಸಾಧಿಸಿ ಎರಡನೇ ಸ್ಥಾನದಲ್ಲಿದ್ದರೆ, ದಕ್ಷಿಣ ಆಫ್ರಿಕಾ ತಂಡ 2 ಪಂದ್ಯಗಳಿಂದ 4 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದೆ. 3 ಪಂದ್ಯಗಳಿಂದ 4 ಅಂಕಗಳನ್ನು ಹೊಂದಿರುವ ಪಾಕಿಸ್ತಾನ ನಾಲ್ಕನೇ ಸ್ಥಾನದಲ್ಲಿದೆ.

ಮೂರು ಪಂದ್ಯಗಳಲ್ಲಿ ಒಂದು ಗೆಲುವಿನೊಂದಿಗೆ 2 ಅಂಕ ಸಂಪಾದಿಸಿರುವ ಬಾಂಗ್ಲಾದೇಶ 7ನೇ ಸ್ಥಾನದಲ್ಲಿದ್ದರೆ, ಗೆಲುವಿನ ಖಾತೆ ತೆರೆಯಲು ವಿಫಲವಾಗಿರುವ ಶ್ರೀಲಂಕಾ, ನೆದರ್ಲ್ಯಾಂಡ್ಸ್ ಮತ್ತು ಆಸ್ಟ್ರೇಲಿಯಾ ತಂಡಗಳು ನಂತರದ ಸ್ಥಾನದಲ್ಲಿವೆ.

ಗಮನಾರ್ಹವಾಗಿ, ಐದು ಬಾರಿಯ ವಿಶ್ವಕಪ್ ಚಾಂಪಿಯನ್ ಆಸ್ಟ್ರೇಲಿಯಾ ತಂಡ 2023ರ ಐಸಿಸಿ ಏಕದಿನ ವಿಶ್ವಕಪ್‌ನ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನ ಅಂದರೆ, 10ನೇ ಸ್ಥಾನದಲ್ಲಿರುವುದು ಅಚ್ಚರಿಯಾಗಿದೆ.

ಸೋಮವಾರ, ಅಕ್ಟೋಬರ್ 16ರಂದು ಲಕ್ನೋದ ಏಕನಾ ಸ್ಟೇಡಿಯಂನಲ್ಲಿ ನಡೆಯುವ 14ನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವು ಶ್ರೀಲಂಕಾ ತಂಡವನ್ನು ಎದುರಿಸಲಿದೆ.

ಇನ್ನು ಅಫ್ಘಾನಿಸ್ತಾನ ನೀಡಿದ್ದ 285 ರನ್‌ಗಳ ಚೇಸಿಂಗ್‌ನಲ್ಲಿ ಇಂಗ್ಲೆಂಡ್ ಪರ ಇನ್ನಿಂಗ್ಸ್ ಆರಂಭಿಸಿದ ಜಾನಿ ಬೈರ್‌ಸ್ಟೋವ್ ಮತ್ತು ಡಾವಿಡ್ ಮಲಾನ್ ಉತ್ತಮ ಆರಂಭ ಒದಗಿಸುವಲ್ಲಿ ವಿಫಲರಾದರು. ತಂಡದ ಮೊತ್ತ 3 ರನ್‌ಗಳಾಗಿದ್ದಾಗ ಜಾನಿ ಬೈರ್‌ಸ್ಟೋವ್ ವಿಕೆಟ್ ಒಪ್ಪಿಸಿದರು.

ನಂತರ ಬಂದ ಜೋ ರೂಟ್ 11 ರನ್ ಗಳಿಸಿ ಔಟಾದರೆ, ದೊಡ್ಡ ಮೊತ್ತ ಗಳಿಸುವ ನಿರೀಕ್ಷೆ ಮೂಡಿಸಿದ್ದ ಡಾವಿಡ್ ಮಲಾನ್ 39 ಎಸೆತಗಳಲ್ಲಿ 4 ಬೌಂಡರಿ ಸಮೇತ 32 ರನ್ ಗಳಿಸಿ ಔಟಾದರು. ನಾಯಕ ಜೋಸ್ ಬಟ್ಲರ್ ಕೇವಲ 9 ರನ್‌ಗಳಿಗೆ ಪೆವಿಲಿಯನ್ ಸೇರಿದರು.

ಈ ವೇಳೆ ಕ್ರೀಸ್‌ಗೆ ಬಂದು ಇಂಗ್ಲೆಂಡ್ ತಂಡಕ್ಕೆ ಆಸರೆಯಾಗಿದ್ದ ಹ್ಯಾರಿ ಬ್ರೂಕ್ 61 ಎಸೆತಗಳಲ್ಲಿ 7 ಬೌಂಡರಿ ಮತ್ತು 1 ಸಿಕ್ಸರ್ ಮೂಲಕ 66 ರನ್ ಗಳಿಸಿ ವಿಕೆಟ್ ಒಪ್ಪಿಸುತ್ತಿದ್ದಂತೆ ಇಂಗ್ಲೆಂಡ್‌ನ ಸೋಲು ಖಚಿತವಾಯಿತು.

ಸ್ಫೋಟಕ ಬ್ಯಾಟರ್ ಲಿಯಾಮ್ ಲಿವಿಂಗ್‌ಸ್ಟೋನ್ 10 ರನ್, ಸ್ಯಾಮ್ ಕರ್ರಾನ್ 10 ರನ್, ಕ್ರಿಸ್ ವೋಕ್ಸ್ 9 ರನ್ ಗಳಿಸಿದರೆ, ಆದಿಲ್ ರಶೀದ್ 20 ರನ್, ಮಾರ್ಕ್ ವುಡ್ 18 ರನ್ ಮತ್ತು ರೀಸ್ ಟೋಪ್ಲೆ 15 ರನ್ ಗಳಿಸಿದರು. ಆದರೆ, ತಂಡವನ್ನು ಗೆಲುವಿನ ಗುರಿ ತಲುಪಿಸಲು ಸಾಧ್ಯವಾಗಲಿಲ್ಲ.

ಬೌಲಿಂಗ್‌ನಲ್ಲಿ ಅಫ್ಘಾನಿಸ್ತಾನ ತಂಡದ ಪರ ಮಿಂಚಿದ ರಶೀದ್ ಖಾನ್ 9.3 ಓವರ್‌ಗಳಲ್ಲಿ 37 ರನ್ ನೀಡಿ 3 ವಿಕೆಟ್ ಪಡೆದರೆ, ಮುಜೀಬ್-ಉರ್-ರೆಹಮಾನ್ 10 ಓವರ್‌ಗಳಲ್ಲಿ 51 ರನ್ ನೀಡಿ 3 ವಿಕೆಟ್ ಕಬಳಿಸಿದರು. ಮೊಹಮ್ಮದ್ ನಬಿ 6 ಓವರ್‌ಗಳಲ್ಲಿ 16 ರನ್ ನೀಡಿ 2 ವಿಕೆಟ್ ಪಡೆದರೆ, ಉಳಿದಂತೆ ಫಜಲ್ಹಕ್ ಫಾರೂಕಿ ಮತ್ತು ನವೀನ್-ಉಲ್-ಹಕ್ ತಲಾ ಒಂದೊಂದು ವಿಕೆಟ್ ಪಡೆದರು.

Story first published: Monday, October 16, 2023, 7:25 [IST]
Other articles published on Oct 16, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+