ಅಂಕಪಟ್ಟಿಯಲ್ಲಿ ಭಾರತಕ್ಕೆ ಭರ್ಜರಿ ಮೇಲುಗೈ: ಅಫ್ಘಾನಿಸ್ತಾನದ ವಿರುದ್ಧ ಗೆದ್ದ ಭಾರತ ಈಗ ಯಾವ ಸ್ಥಾನದಲ್ಲಿದೆ?
ಭಾರತ vs ಅಫ್ಘಾನಿಸ್ತಾನ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಪ್ರದರ್ಶನ ನೀಡಿದ್ದು ಅಮೋಘ ಗೆಲುವು ಸಾಧಿಸಿದೆ. ಮತ್ತೊಮ್ಮೆ ಭಾರತ ಈ ಪಂದಗಯದಲ್ಲಿ ಸರ್ವಾಂಗೀಣ ಪ್ರದರ್ಶನ ನೀಡುವ ಮೂಲಕ ವಿಶ್ವಕಪ್ ಟೂರ್ನಿಯಲ್ಲಿ ಅದ್ಭುತ ಓಟವನ್ನು ಮುಂದುವರಿಸಿದೆ. ಈ ಮೂಲಕ ಮುಂದಿನ ಶನಿವಾರ ನಡೆಯಲಿರುವ ಈ ಬಾರಿಯ ವಿಶ್ವಕಪ್ ಟೂರ್ನಿಯ ಲೀಗ್ ಹಂತದ ಅತೊ ದೊಡ್ಡ ಕಾಳಗ ಎಂದೇ ಗುರುತಿಸಿಕೊಂಡಿರುವ ಭಾರತ ಹಾಗೂ ಪಾಕಿಸ್ತಾನ ಪಂದ್ಯಕ್ಕೆ ಸಿದ್ಧವಾಗಿದೆ.
ಇನ್ನು ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾದ ಭರ್ಜರಿ ಗೆಲುವಿನ ಮೂಲಕ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆಗಳು ಆಗಿದೆ. ಅಲ್ಲದೆ ರನ್‌ರೇಟ್‌ನಲ್ಲಿಯೂ ಭಾರತ ತಂಡ ಸಾಕಷ್ಟು ಉತ್ತಮ ಸ್ಥಿತಿಯಲ್ಲಿದ್ದು ಮೊದಲ ಸ್ಥಾನದ ಮೇಲೆ ಚಿತ್ತ ನೆಟ್ಟಿರುವುದು ಸ್ಪಷ್ಟವಾಗಿದೆ.

ಎರಡನೇ ಸ್ಥಾನಕ್ಕೇರಿದ ಭಾರತ ತಂಡ
ಇನ್ನು ಅಫ್ಘಾನಿಸ್ತಾನ ತಂಡವನ್ನು ಮಣಿಸುವ ಮೂಲಕ ಟೀಮ್ ಇಂಡಿಯಾ ಈ ಬಾರಿಯ ವಿಶ್ವಕಪ್ ಟೂರ್ನಿಯ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರುವಲ್ಲಿ ಯಶಸ್ವಿಯಾಗಿದೆ. ಟೂರ್ನಿಯಲ್ಲಿ ಈಗಾಗಲೇ ಆಡಿರುವ ಎರಡು ಪಂದ್ಯಗಲ್ಲಿ ಎರಡು ಗೆಲುವು ಸಾಧಿಸಿರುವ ಭಾರತ ನಾಲ್ಕು ಅಂಕಗಳನ್ನು ಖಾತೆಯಲ್ಲಿ ಹೊಂದಿದೆ. ಇನ್ನು ನೆಟ್‌ರನ್‌ರೇಟ್‌ನಲಕ್ಲಿಯೂ ಭಾರತ ಉತ್ತಮವಾಗಿರುವ ಕಾರಣ ಈ ಸ್ಥಾನವನ್ನು ಗಿಟ್ಟಿಸಿಕೊಳ್ಳಲು ಸಾಧ್ಯವಾಗಿದೆ.
ಅಗ್ರ ಸ್ಥಾನದಲ್ಲಿ ಕಿವೀಸ್ ಪಡೆ
ಇನ್ನು ಪ್ರಸ್ತಿತ ಅಂಕಪಟ್ಟಿಯಲ್ಲಿ ನ್ಯೂಜಿಲೆಂಡ್ ತಂಡವೇ ಮೊದಲ ಸ್ಥಾನದಲ್ಲಿ ಮುಂದುವರಿಸಿದೆ. ಕಿವೀಸ್ ಪಡೆ ಕೂಡ ಎರಡು ಗೆಲುವು ಸಾಧಿಸಿ ನಾಲ್ಕು ಅಂಕ ಪಡೆದುಕೊಂಡಿದೆ. ಆದರೆ ನ್ಯೂಜಿಲೆಂಡ್ ತಂಡದ ನೆಟ್‌ರನ್‌ರೇಟ್ ಭಾರತಕ್ಕಿಂತ ಉತ್ತಮವಾಗಿದ್ದು ಅಗ್ರಸ್ಥಾನದಲ್ಲಿ ಮುಂದುವರಿಸಿದೆ. ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ನ್ಯೂಜಿಲೆಂಡ್ ಭರ್ಜರಿ ಗೆಲುವು ಸಾಧಿಸುವ ಮೂಲಕ ಗಮನ ಸೆಳೆದಿದ್ದು ಅದಾದ ಬಳಿಕ ನೆದರ್ಲೆಂಡ್ಸ್ ತಂಡವನ್ನು ಕೂಡ 99 ರನ್‌ಗಳ ಅಂತರದಿಂದ ಮಣಿಸಿತ್ತು.
ಟಾಸ್ 4ನಲ್ಲಿರುವ ಉಳಿದ ತಂಡಗಳು
ಇನ್ನು ಅಂಕಪಟ್ಟಿಯಲ್ಲಿ ಟಾಪ್ 4ನಲ್ಲಿ ಸ್ಥಾನವನ್ನು ಉಳಿಸಿಕೊಳ್ಳುವುದು ಎಲ್ಲಾ ತಂಡಗಳಿಗೂ ಪ್ರಮುಖವಾಗಿರಲಿದೆ. ರೌಂಡ್ ರಾಬಿನ್ ಮಾದರಿಯಲ್ಲಿ ಈ ಬಾರಿಯ ವಿಶ್ವಕಪ್ ಟೂರ್ನಿ ನಡೆಯಲಿದ್ದು ಸೆಮಿಫೈನಲ್‌ಗೆ ಪ್ರವೇಶಿಸಲು ಇದು ನಿರ್ಣಾಯಕವಾಗಿರಲಿದೆ. ಪಾಕಿಸ್ತಾನ ತಂಡ ಆಡಿರುವ ಎರಡು ಪಂದ್ಯಗಳಲ್ಲಿ ಎರಡು ಗೆಲುವು ಸಾಧಿಸಿ ನಾಲ್ಕು ಅಂಕ ಪಡೆದುಕೊಂಡಿರುವ ಮತ್ತೊಂದು ತಂಡವಾಗಿದ್ದು ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಇನ್ನು ದಕ್ಷಿಣ ಆಫ್ರಿಕಾ ಒಂದು ಪಂದ್ಯದಲ್ಲಿ ಒಂದು ಗೆಲುವು ಸಾಧಿಸಿ ನಾಲ್ಕನೇ ಸ್ಥಾನದಲ್ಲಿದೆ.
ಉಳಿದ ತಂಡಗಳ ಸ್ಥಾನ
ಇನ್ನು ಹಾಲಿ ಚಾಂಪಿಯನ್ ಇಂಗ್ಲೆಂಡ್ ಆರಂಭಿಕ ಪಂದ್ಯದಲ್ಲಿ ಸೋಲು ಅನುಭವಿಸಿದ್ದು ನಂತರ ಬಾಂಗ್ಲಾದೇಶದ ವಿರುದ್ಧ ಗೆಲುವು ಸಾಧಿಸಿದೆ. ಈ ಮೂಲಕ ಅಂಕಪಟ್ಟಿಯಲ್ಲಿ ಪ್ರಸ್ತುತ ಐದನೇ ಸ್ಥಾನದಲ್ಲಿದೆ. ಬಾಂಗ್ಲಾದೇಶ ತಂಡ ಆರನೇ ಸ್ಥಾನದಲ್ಲಿದೆ. ಇನ್ನು ಆಸ್ಟ್ರೇಲಿಯಾ ಭಾರತದ ವಿರುದ್ಧ ಮೊದಲ ಪಂದ್ಯದಲ್ಲಿ ಸೋಲು ಅನುಭವಿಸಿದ್ದು 7ನೇ ಸ್ಥಾನವನ್ನು ಪಡೆದುಕೊಂಡಿದೆ. ಶ್ರೀಲಂಕಾ, ನೆದರ್ಲೆಂಡ್ಸ್ ಮತ್ತು ಅಫ್ಘಾನಿಸ್ತಾನ ತಂಡಗಳು ಎರಡು ಪಂದ್ಯಗಳನ್ನು ಆಡಿದ ಬಳಿಕವೂ ಗೆಲುವಿನ ಖಾತೆ ತೆರೆಯದ ತಂಡಗಳಾಗಿದ್ದು ಕ್ರಮವಾಗಿ 8,9 ಹಾಗೂ 10ನೇ ಸ್ಥಾನದಲ್ಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications