For Quick Alerts
ALLOW NOTIFICATIONS  
For Daily Alerts
 

World Cup 2023 Points Table: ಆಸ್ಟ್ರೇಲಿಯಾ ವಿರುದ್ಧ ಗೆದ್ದು ಅಗ್ರಸ್ಥಾನಕ್ಕೇರಿದ ದಕ್ಷಿಣ ಆಫ್ರಿಕಾ; ಭಾರತದ ಸ್ಥಾನವೇನು?

ಗುರುವಾರ, ಅಕ್ಟೋಬರ್ 12ರಂದು ಲಕ್ನೋದ ಏಕನಾ ಸ್ಟೇಡಿಯಂನಲ್ಲಿ ನಡೆದ 2023ರ ಐಸಿಸಿ ಏಕದಿನ ವಿಶ್ವಕಪ್‌ನ 10ನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ದಕ್ಷಿಣ ಆಫ್ರಿಕಾ ಸಮಗ್ರ ಪ್ರದರ್ಶನ ನೀಡಿ 134 ರನ್‌ಗಳ ದೊಡ್ಡ ಗೆಲುವು ಸಾಧಿಸಿತು.

ಸದ್ಯ ನಡೆಯುತ್ತಿರುವ ವಿಶ್ವಕಪ್ ಪಂದ್ಯಾವಳಿಯಲ್ಲಿ ದಕ್ಷಿಣ ಆಫ್ರಿಕಾದ ಸತತ ಎರಡನೇ ಗೆಲುವಾಗಿದೆ ಮತ್ತು ಈ ಮೂಲಕ, ದಕ್ಷಿಣ ಆಫ್ರಿಕಾ 2023ರ ಏಕದಿನ ವಿಶ್ವಕಪ್ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿತು. ಮತ್ತೊಂದೆಡೆ ಆಸ್ಟ್ರೇಲಿಯಾ ಸತತ ಎರಡನೇ ಸೋಲು ಅನುಭವಿಸಿ ಒಂಬತ್ತನೇ ಸ್ಥಾನಕ್ಕೆ ಕುಸಿದಿದೆ.

World Cup 2023 Points Table: South Africa Takes Top Spot After Win Against Australia; Indias Spot?

ಇನ್ನು ಈವರೆಗೆ ಅಗ್ರಸ್ಥಾನದಲ್ಲಿದ್ದ ನ್ಯೂಜಿಲೆಂಡ್ ತಂಡ ಎರಡನೇ ಸ್ಥಾನಕ್ಕೆ ಕುಸಿದಿದ್ದರೆ, ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡವು ಎರಡನೇ ಸ್ಥಾನದಿಂದ ಮೂರನೇ ಸ್ಥಾನಕ್ಕೆ ಕುಸಿದ ಕಾರಣ, ದಕ್ಷಿಣ ಆಫ್ರಿಕಾ ತಂಡದ ಗೆಲುವು ಭಾರತ ತಂಡಕ್ಕೆ ಕೆಟ್ಟ ಸುದ್ದಿಯಾಗಿದೆ.

ನಾಲ್ಕನೇ ಸ್ಥಾನದಲ್ಲಿ ಪಾಕಿಸ್ತಾನ, ಐದನೇ ಸ್ಥಾನದಲ್ಲಿ ಇಂಗ್ಲೆಂಡ್, ಆರನೇ ಸ್ಥಾನದಲ್ಲಿ ಬಾಂಗ್ಲಾದೇಶ ತಂಡಗಳಿವೆ. ಆಡಿದ ಎಲ್ಲ ಪಂದ್ಯಗಳನ್ನು ಸೋತಿರುವ ಶ್ರೀಲಂಕಾ, ನೆದರ್ಲ್ಯಾಂಡ್ಸ್, ಆಸ್ಟ್ರೇಲಿಯಾ ಮತ್ತು ಅಫ್ಘಾನಿಸ್ತಾನ ನಂತರದ ಸ್ಥಾನಗಳನ್ನು ಪಡೆದಿವೆ.

ಟೀಮ್ ಇಂಡಿಯಾ ತನ್ನ ಮೊದಲ ಎರಡು ಪಂದ್ಯಗಳಲ್ಲಿ ಆಸ್ಟ್ರೇಲಿಯಾ ಮತ್ತು ಅಫ್ಘಾನಿಸ್ತಾನ ವಿರುದ್ಧ ಗೆದ್ದಿದೆ ಮತ್ತು ಇದೀಗ ತನ್ನ ಮುಂದಿನ ಪಂದ್ಯದಲ್ಲಿ ಪಾಕಿಸ್ತಾನ ತಂಡವನ್ನು ಶನಿವಾರ, ಅಕ್ಟೋಬರ್ 14ರಂದು ಎದುರಿಸಲಿದೆ.

World Cup 2023 Points Table: South Africa Takes Top Spot After Win Against Australia; Indias Spot?

ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ಪಂದ್ಯದ ಕುರಿತು ಮಾತನಾಡುವುದಾದರೆ, ಕ್ವಿಂಟನ್ ಡಿ ಕಾಕ್ ಈ ವಿಶ್ವಕಪ್‌ನಲ್ಲಿ ಸತತ ಎರಡನೇ ಶತಕವನ್ನು ಬಾರಿಸಿದರು. ಇದು ದಕ್ಷಿಣ ಆಫ್ರಿಕಾ ತಂಡವು ಐದು ಬಾರಿಯ ಚಾಂಪಿಯನ್ ಆಸ್ಟ್ರೇಲಿಯಾವನ್ನು 134 ರನ್‌ಗಳ ಸೋಲಿಸಲು ಸಹಾಯವಾಯಿತು.

ದಕ್ಷಿಣ ಆಫ್ರಿಕಾ 7 ವಿಕೆಟ್‌ಗೆ 311 ರನ್ ಕಲೆಹಾಕಿದ ನಂತರ, ಆಸ್ಟ್ರೇಲಿಯಾ ತಂಡ ಕೇವಲ 70 ರನ್‌ ಗಳಿಸಿದ್ದಾಗ ಆರು ಪ್ರಮುಖ ವಿಕೆಟ್‌ಗಳನ್ನು ಕಳೆದುಕೊಂಡಿತು. ನಂತರ ತಮ್ಮ ನೆಟ್ ರನ್-ರೇಟ್‌ಗೆ ಹಾನಿಯನ್ನು ಮಿತಿಗೊಳಿಸುವ ಪ್ರಯತ್ನದಲ್ಲಿ ಮಾತ್ರ ಗಮನಹರಿಸಿತು.

ಅಂತಿಮವಾಗಿ, ಆಸ್ಟ್ರೇಲಿಯಾ ತಂಡ ಇನ್ನೂ 55 ಎಸೆತಗಳು ಬಾಕಿ ಇರುವಂತೆಯೇ 177 ರನ್‌ಗಳಿಗೆ ಆಲೌಟ್ ಆಯಿತು. ದಕ್ಷಿಣ ಆಫ್ರಿಕಾ ತಂಡಕ್ಕೆ ಇದು ಎರಡು ಪಂದ್ಯಗಳಲ್ಲಿ ಎರಡನೇ ಜಯವಾಗಿದೆ ಮತ್ತು ಆಸ್ಟ್ರೇಲಿಯಾ ತನ್ನ ಎರಡೂ ಪಂದ್ಯಗಳಲ್ಲಿ ಸೋಲು ಕಂಡಿದೆ.

ತನ್ನ ಮೊದಲ ಪಂದ್ಯದಲ್ಲಿ ಭಾರತ ವಿರುದ್ಧ ಆರು ವಿಕೆಟ್‌ಗಳಿಂದ ಸೋತಿದ್ದ ಆಸ್ಟ್ರೇಲಿಯಾ ತಂಡ, ದಕ್ಷಿಣ ಆಫ್ರಿಕಾ ಬ್ಯಾಟಿಂಗ್ ಮಾಡುವಾಗ ಐದು ಕ್ಯಾಚ್‌ಗಳನ್ನು ಕೈಚೆಲ್ಲಿತು ಎಂಬುದು ಗಮನಾರ್ಹ.

312 ರನ್‌ಗಳ ಚೇಸಿಂಗ್ ಆರಂಭಿಸಿದ ನಂತರ ಆಸ್ಟ್ರೇಲಿಯಾ ಬ್ಯಾಟರ್‌ಗಳು ಪ್ರತಿರೋಧ ಒಡ್ಡಲಿಲ್ಲ. ದಕ್ಷಿಣ ಆಫ್ರಿಕಾದ ವೇಗದ ಬೌಲರ್‌ಗಳು ಎದುರಾಳಿ ತಂಡದ ಅಗ್ರ ಕ್ರಮಾಂಕವನ್ನು ಭೇದಿಸಿದ್ದರಿಂದ ನಿಯಮಿತವಾಗಿ ವಿಕೆಟ್‌ಗಳನ್ನು ಕಳೆದುಕೊಳ್ಳಬೇಕಾಯಿತು.

ಬೌಲಿಂಗ್‌ನಲ್ಲಿ ದಕ್ಷಿಣ ಆಫ್ರಿಕಾ ತಂಡದ ಪರ ಕಗಿಸೊ ರಬಾಡ 8 ಓವರ್‌ಗಳಲ್ಲಿ 33 ರನ್ ನೀಡಿ 3 ವಿಕೆಟ್ ಕಬಳಿಸಿದರೆ, ಕೇಶವ್ ಮಹಾರಾಜ್ 10 ಓವರ್‌ಗಳಲ್ಲಿ 30 ರನ್ ನೀಡಿ 2 ವಿಕೆಟ್, ತಬ್ರೈಜ್ ಶಮ್ಸಿ 7.5 ಓವರ್‌ಗಳಲ್ಲಿ 38 ರನ್ ನೀಡಿ 2 ವಿಕೆಟ್ ಪಡೆದರು. ಉಳಿದಂತೆ ಮಾರ್ಕೊ ಜಾನ್ಸೆನ್ 2 ವಿಕೆಟ್ ಮತ್ತು ಲುಂಗಿ ಎನ್‌ಗಿಡಿ 1 ವಿಕೆಟ್ ತಮ್ಮದಾಗಿಸಿಕೊಂಡರು.

Story first published: Thursday, October 12, 2023, 23:48 [IST]
Other articles published on Oct 12, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+