For Quick Alerts
ALLOW NOTIFICATIONS  
For Daily Alerts
 

World Cup 2023 Qualifiers Super 6: ಶ್ರೀಲಂಕಾ vs ನೆದರ್ಲ್ಯಾಂಡ್ಸ್ ಪಂದ್ಯದ ಟಾಸ್ ವರದಿ, ಆಡುವ 11ರ ಬಳಗ

ಶುಕ್ರವಾರ, ಜೂನ್ 30ರಂದು ಜಿಂಬಾಬ್ವೆಯ ಬುಲವಾಯೊದ ಕ್ವೀನ್ಸ್ ಸ್ಪೋರ್ಟ್ ಕ್ಲಬ್‌ನಲ್ಲಿ ನಡೆಯುತ್ತಿರುವ 2023ರ ಐಸಿಸಿ ಪುರುಷರ ಕ್ರಿಕೆಟ್ ವಿಶ್ವಕಪ್ ಕ್ವಾಲಿಫೈಯರ್‌ನ ಸೂಪರ್ 6 ಪಂದ್ಯದಲ್ಲಿ ಶ್ರೀಲಂಕಾ ಮತ್ತು ನೆದರ್ಲ್ಯಾಂಡ್ಸ್ ತಂಡಗಳು ಮುಖಾಮುಖಿಯಾಗಿವೆ.

ಟಾಸ್ ಗೆದ್ದ ಶ್ರೀಲಂಕಾ ತಂಡದ ನಾಯಕ ದಸುನ್ ಶನಕ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ನೆದರ್ಲ್ಯಾಂಡ್ಸ್ ತಂಡ ಮೊದಲು ಬೌಲಿಂಗ್ ಮಾಡಲಿದೆ.

World Cup 2023 Qualifiers Super 6: Sri Lanka vs Netherlands Toss Report And Playing 11

ಅಕ್ಟೋಬರ್-ನವೆಂಬರ್‌ನಲ್ಲಿ ಭಾರತದಲ್ಲಿ ನಡೆಯಲಿರುವ 2023ರ ಐಸಿಸಿ ವಿಶ್ವಕಪ್ ಮುಖ್ಯ ಸುತ್ತಿನಲ್ಲಿ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಳ್ಳಲು ಶ್ರೀಲಂಕಾ ತಂಡ ಎದುರು ನೋಡುತ್ತಿದೆ.
ಮುಖ್ಯ ಸುತ್ತಿಗೆ ಅರ್ಹತೆ ಪಡೆಯುವ ಸ್ಪರ್ಧೆಯಲ್ಲಿರುವ ಆರು ತಂಡಗಳ ಪೈಕಿ ಶ್ರೀಲಂಕಾ 2 ಪಂದ್ಯಗಳಲ್ಲಿ 2 ಗೆಲುವಿನೊಂದಿಗೆ ಎರಡನೇ ಸ್ಥಾನವನ್ನು ಪಡೆದುಕೊಂಡಿದೆ.

ನೆದರ್ಲ್ಯಾಂಡ್ಸ್ ವಿರುದ್ಧ ಶ್ರೀಲಂಕಾ ಗೆಲುವು ಸಾಧಿಸಿದರೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಲಿದೆ. ಮತ್ತೊಂದೆಡೆ, ನೆದರ್ಲ್ಯಾಂಡ್ಸ್ ತಂಡ 2 ಪಂದ್ಯಗಳಲ್ಲಿ ಒಂದು ಗೆಲುವು ದಾಖಲಿಸಿದ್ದು, ಪಾಯಿಂಟ್ ಪಟ್ಟಿಯಲ್ಲಿ 4 ನೇ ಸ್ಥಾನದಲ್ಲಿದೆ.

ಶ್ರೀಲಂಕಾ vs ನೆದರ್ಲ್ಯಾಂಡ್ಸ್ ತಂಡಗಳ ಆಡುವ 11ರ ಬಳಗ

ಶ್ರೀಲಂಕಾ: ಪಾಥುಮ್ ನಿಸ್ಸಾಂಕ, ದಿಮುತ್ ಕರುಣಾರತ್ನೆ, ಕುಸಲ್ ಮೆಂಡಿಸ್ (ವಿಕೆಟ್ ಕೀಪರ್), ಸದೀರ ಸಮರವಿಕ್ರಮ, ಚರಿತ್ ಅಸಲಂಕ, ಧನಂಜಯ ಡಿ ಸಿಲ್ವ, ದಸುನ್ ಶನಕ (ನಾಯಕ), ವನಿಂದು ಹಸರಂಗ, ಮಹೇಶ್ ತೀಕ್ಷಣ, ಲಹಿರು ಕುಮಾರ, ದಿಲ್ಶನ್ ಮಧುಶಂಕ.

ನೆದರ್ಲ್ಯಾಂಡ್ಸ್: ವಿಕ್ರಮಜಿತ್ ಸಿಂಗ್, ಮ್ಯಾಕ್ಸ್ ಒ'ಡೌಡ್, ವೆಸ್ಲಿ ಬ್ಯಾರೆಸಿ, ಬಾಸ್ ಡಿ ಲೀಡೆ, ತೇಜ ನಿಡಮನೂರು, ಸ್ಕಾಟ್ ಎಡ್ವರ್ಡ್ಸ್ (ನಾಯಕ/ವಿಕೆಟ್ ಕೀಪರ್), ಸಾಕಿಬ್ ಜುಲ್ಫಿಕರ್, ಲೋಗನ್ ವ್ಯಾನ್ ಬೀಕ್, ಶರೀಜ್ ಅಹ್ಮದ್, ರಯಾನ್ ಕ್ಲೈನ್, ಆರ್ಯನ್ ದತ್.

Story first published: Friday, June 30, 2023, 12:40 [IST]
Other articles published on Jun 30, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+