World Cup 2023: ಒಂದು ಕ್ಯಾಲೆಂಡರ್ ವರ್ಷದಲ್ಲಿ ಈ ಸಾಧನೆ ಮಾಡಿದ ಮೊದಲ ಭಾರತೀಯ ರೋಹಿತ್ ಶರ್ಮಾ
ಭಾನುವಾರ, ಅಕ್ಟೋಬರ್ 22ರಂದು ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆಯತ್ತಿರುವ 2023ರ ಐಸಿಸಿ ಏಕದಿನ ವಿಶ್ವಕಪ್‌ನ 21ನೇ ರೋಚಕ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವು ಆತಿಥೇಯ ಭಾರತ ತಂಡದ ವಿರುದ್ಧ 273 ರನ್‌ಗಳ ಸವಾಲಿನ ಮೊತ್ತ ಕಲೆಹಾಕಿದೆ.
ನ್ಯೂಜಿಲೆಂಡ್ ನೀಡಿದ 274 ರನ್‌ಗಳ ಗುರಿ ಬೆನ್ನಟ್ಟಿದ ಭಾರತ ತಂಡದ ಆರಂಭಿಕ ಬ್ಯಾಟರ್‌ಗಳಾದ ನಾಯಕ ರೋಹಿತ್ ಶರ್ಮಾ ಮತ್ತು ಶುಭ್ಮನ್ ಗಿಲ್ ಉತ್ತಮ ಆರಂಭ ಒದಗಿಸಿದರು. ಈ ಜೋಡಿ ಮೊದಲ ವಿಕೆಟ್‌ಗೆ 71 ರನ್‌ಗಳ ಜೊತೆಯಾಟ ನೀಡಿತು.

ಶುಭ್ಮನ್ ಗಿಲ್ 31 ಎಸೆತಗಳಲ್ಲಿ 5 ಬೌಂಡರಿ ಸಮೇತ 26 ರನ್ ಗಳಿಸಿ ಔಟಾದರೆ, ರೋಹಿತ್ ಶರ್ಮಾ 40 ಎಸೆತಗಳಲ್ಲಿ 4 ಬೌಂಡರಿ ಹಾಗೂ 4 ಸಿಕ್ಸರ್‌ಗಳ ಮೂಲಕ 46 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು.
ಇದೇ ವೇಳೆ ನಾಯಕ ರೋಹಿತ್ ಶರ್ಮಾ ಒಂದು ಕ್ಯಾಲೆಂಡರ್ ವರ್ಷದಲ್ಲಿ ಏಕದಿನ ಪಂದ್ಯಗಳಲ್ಲಿ 50 ಸಿಕ್ಸರ್‌ಗಳನ್ನು ಬಾರಿಸಿದ ಮೊದಲ ಭಾರತೀಯ ಬ್ಯಾಟರ್ ಎನಿಸಿದರು.
ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಟಾಮ್ ಲ್ಯಾಥಮ್ ನಾಯಕತ್ವದ ನ್ಯೂಜಿಲೆಂಡ್ ವಿರುದ್ಧದ 2023ರ ವಿಶ್ವಕಪ್ ಪಂದ್ಯದಲ್ಲಿ 36 ವರ್ಷದ ರೋಹಿತ್ ಶರ್ಮಾ ಈ ಸಾಧನೆ ಮಾಡಿದರು.
ನಾಗ್ಪುರ ಮೂಲದ ರೋಹಿತ್ ಶರ್ಮಾ ನ್ಯೂಜಿಲೆಂಡ್‌ನ ರನ್-ಚೇಸ್‌ನಲ್ಲಿ ಎರಡನೇ ಓವರ್‌ನ ಅಂತಿಮ ಎಸೆತದಲ್ಲಿ ಮ್ಯಾಟ್ ಹೆನ್ರಿ ಅವರ ಬೌಲಿಂಗ್‌ನಲ್ಲಿ ಮಿಡ್-ವಿಕೆಟ್‌ನಲ್ಲಿ ಬೃಹತ್ ಸಿಕ್ಸರ್ ಸಿಡಿಸಿದ ನಂತರ ಈ ಮೈಲಿಗಲ್ಲು ಸ್ಥಾಪಿಸಿದರು. 2017ರಲ್ಲಿ 46 ಸಿಕ್ಸರ್‌ಗಳ ತಮ್ಮದೇ ದಾಖಲೆಯನ್ನು ಮುರಿದರು.

ಒಂದು ಕ್ಯಾಲೆಂಡರ್ ವರ್ಷದಲ್ಲಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ದಾಖಲೆ ಸದ್ಯ ಎಬಿ ಡಿವಿಲಿಯರ್ಸ್ ಹೆಸರಿನಲ್ಲಿದೆ. 2015ರಲ್ಲಿ ದಕ್ಷಿಣ ಆಫ್ರಿಕಾದ ಮಾಜಿ ಬ್ಯಾಟರ್ 18 ಇನ್ನಿಂಗ್ಸ್‌ಗಳಿಂದ 58 ಸಿಕ್ಸರ್‌ಗಳನ್ನು ಸಿಡಿಸಿದ್ದರು. ವೆಸ್ಟ್ ಇಂಡೀಸ್‌ನ ಕ್ರಿಸ್ ಗೇಲ್ 2019ರಲ್ಲಿ 56 ಸಿಕ್ಸರ್‌ಗಳನ್ನು ಬಾರಿಸಿರುವ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ.
ಪ್ರಸ್ತುತ ನಡೆಯುತ್ತಿರುವ ಏಕದಿನ ವಿಶ್ವಕಪ್‌ನಲ್ಲಿ ರೋಹಿತ್ ಶರ್ಮಾ ಅದ್ಭುತ ಫಾರ್ಮ್‌ನಲ್ಲಿದ್ದಾರೆ. ಪ್ಯಾಟ್ ಕಮಿನ್ಸ್ ನಾಯಕತ್ವದ ಆಸ್ಟ್ರೇಲಿಯಾ ವಿರುದ್ಧದ ಭಾರತದ ಮೊದಲ ಪಂದ್ಯದಲ್ಲಿ ಅವರು ಡಕ್ ಆಗಿದ್ದರೂ, ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಹಶ್ಮತುಲ್ಲಾ ಶಾಹಿದಿ ನಾಯಕತ್ವದ ಅಫ್ಘಾನಿಸ್ತಾನ ವಿರುದ್ಧ ಶತಕ ಬಾರಿಸುವ ಮೂಲಕ ಅನುಭವಿ ತಮ್ಮ ಸಾಮರ್ಥ್ಯ ಸಾಬೀತುಪಡಿಸಿದರು.
ಈ ಮೂಲಕ ಏಕದಿನ ವಿಶ್ವಕಪ್‌ನ ಇತಿಹಾಸದಲ್ಲಿ ಭಾರತೀಯ ಬ್ಯಾಟರ್‌ಗಳ ಪೈಕಿ ವೇಗದ ಶತಕಕ್ಕಾಗಿ ಕಪಿಲ್ ದೇವ್ ಅವರ ದಾಖಲೆಯನ್ನು ರೋಹಿತ್ ಶರ್ಮಾ ಮುರಿದರು.
ಇದಕ್ಕೂ ಮುನ್ನ ಅಕ್ಟೋಬರ್ 14ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಪಾಕಿಸ್ತಾನ ಬೌಲಿಂಗ್ ದಾಳಿ ವಿರುದ್ಧ 86 ರನ್ ಗಳಿಸಿದರು.
ನಂತರ, ಅವರು ಅಕ್ಟೋಬರ್ 19ರಂದು ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಜ್ಮುಲ್ ಹೊಸೈನ್ ಶಾಂಟೋ ನಾಯಕತ್ವದ ಬಾಂಗ್ಲಾದೇಶ ವಿರುದ್ಧ ಭಾರತದ ರನ್-ಚೇಸ್‌ನಲ್ಲಿ 48 ರನ್‌ಗಳನ್ನು ಬಾರಿಸಿದರು. ಒಟ್ಟಾರೆ 50 ಓವರ್‌ಗಳ ಮಾದರಿಯಲ್ಲಿ ರೋಹಿತ್ ಶರ್ಮಾ ಅದ್ಭುತ ಫಾರ್ಮ್‌ನಲ್ಲಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications