Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಭಾರತ vs ನ್ಯೂಜಿಲೆಂಡ್: ಕಿವೀಸ್ ವಿರುದ್ಧ ಸೆಣೆಸಾಡಲು ಧರ್ಮಶಾಲಾಗೆ ಬಂದಿಳಿದ ರೋಹಿತ್ ಪಡೆ

ಸತತ ನಾಲ್ಕನೇ ಪಂದ್ಯವನ್ನು ಗೆದ್ದುಕೊಂಡಿರುವ ಟೀಮ್ ಇಂಡಿಯಾ ವಿಶ್ವಕಪ್‌ನಲ್ಲಿ ತನ್ನ ಅಭಿಯಾನವನ್ನು ಯಶಸ್ವಿಯಾಗಿ ಮುಂದುವರಿಸಿದೆ. ಬಾಂಗ್ಲಾದೇಶ ವಿರುದ್ಧ ಪುಣೆಯಲ್ಲಿ ಸುಲಭ ಗೆಲುವು ಸಾಧಿಸಿದ ಭಾರತ ಇದೀಗ ಮತ್ತೊಂದು ಕಠಿಣ ಪೈಪೋಟಿಗೆ ಸಿದ್ಧವಾಗಿದೆ. ನ್ಯೂಜಿಲೆಂಡ್ ತಂಡವನ್ನು ಮುಂದಿನ ಪಂದ್ಯದಲ್ಲಿ ಭಾರತ ಎದುರಿಸಲಿದ್ದು ಧರ್ಮಶಾಲಾದಲ್ಲಿ ಈ ಪಂದ್ಯ ಆಯೋಜನೆಯಾಗಲಿದೆ.

ಭಾನುವಾರ ನಡೆಯಲಿರುವ ಈ ಪಂದ್ಯವನ್ನಾಡಲು ಭಾರತ ಇದೀಗ ಹಿಮಾಚಲ ಪ್ರದೇಶದ ಧರ್ಮಶಾಲಾಗೆ ಪ್ರಯಾಣ ಬೆಳೆಸಿತು. ಪುಣೆಯ ಪ್ರಯಾಣ ಬೆಳೆಸಿದ ಭಾರತ ತಮಡ ಈಗಾಘಲೇ ಧರ್ಮಶಾಲಾಗೆ ತಲುಪಿದ್ದು ಶನಿವಾರ ಅಭ್ಯಾಸ ನಡೆಸಲಿದೆ. ಈ ಮೂಲಕ ಭಾನುವಾರ ನಡೆಯಲಿರುವ ಪೈಪೋಟಿಯ ಪಂದ್ಯಕ್ಕೆ ಸನ್ನಧವಾಗಲಿದೆ.

World cup 2023: Rohit Sharma led team India reaches Dharamshala for crunch IND vs NZ WC clash

ಕಿವೀಸ್ ವಿರುದ್ಧದ ಪಂದ್ಯಕ್ಕಿಲ್ಲ ಪಾಂಡ್ಯ

ಇನ್ನು ನ್ಯೂಜಿಲೆಂಡ್ ವಿರುದ್ಧ ಭಾನುವಾರ ನಡೆಯಲಿರುವ ಪಂದ್ಯಕ್ಕೆ ಟೀಮ್ ಇಂಡಿಯಾದಲ್ಲಿ ಒಂದು ಬದಲಾವಣೆ ಅನಿವಾರ್ಯವಾಗಿದೆ. ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಗಾಯಕ್ಕೆ ತುತ್ತಾಗಿದ್ದರು. ಹೀಗಾಗಿ ಹಾರ್ದಿಕ್ ಮುಂದಿನ ಪಂದ್ಯದಿಂದ ಹೊರಗುಳಿಯುವುದು ಇದೀಗ ಖಚಿತವಾಗಿದೆ. ಹೀಗಾಗಿ ಹಾರ್ದಿಕ್ ಪಾಂಡ್ಯ ಬದಲಿಗೆ ಟೀಮ್ ಇಂಡಿಯಾದಲ್ಲಿ ಯಾರಿಗೆ ಆಡುವ ಬಳಗದಲ್ಲಿ ಅವಕಾಶ ದೊರೆಯಲಿದೆ ಎನ್ನುವುದು ತೀವ್ರ ಕುತೂಹಲ ಮೂಡಿಸಿದೆ.

ಟೀಮ್ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ಮೊಹಮ್ಮದ್ ಶಮಿ, ರವಿಚಂದ್ರನ್ ಅಶ್ವಿನ್

ನ್ಯೂಜಿಲೆಂಡ್: ಡೆವೊನ್ ಕಾನ್ವೆ, ವಿಲ್ ಯಂಗ್, ಕೇನ್ ವಿಲಿಯಮ್ಸನ್, ರಚಿನ್ ರವೀಂದ್ರ, ಡೇರಿಲ್ ಮಿಚೆಲ್, ಟಾಮ್ ಲ್ಯಾಥಮ್ (ವಿಕೆಟ್ ಕೀಪರ್), ಗ್ಲೆನ್ ಫಿಲಿಪ್ಸ್, ಮಾರ್ಕ್ ಚಾಪ್ಮನ್, ಮಿಚೆಲ್ ಸ್ಯಾಂಟ್ನರ್, ಮ್ಯಾಟ್ ಹೆನ್ರಿ, ಲಾಕಿ ಫರ್ಗುಸನ್, ಟ್ರೆಂಟ್ ಬೌಲ್ಟ್, ಇಶ್ ಸೋಧಿ, ಜೇಮ್ಸ್ ನೀಶಮ್, ಟಿಮ್ ಸೌಥಿ

Story first published: Friday, October 20, 2023, 16:35 [IST]
Other articles published on Oct 20, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+