Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ವಿಶ್ವಕಪ್ ಟೂರ್ನಿಯಲ್ಲಿ ದಕ್ಷಿಣ ಆಫ್ರಿಕಾಗೆ ನಿಷೇಧದ ಆತಂಕ: ಇಲ್ಲಿದೆ ಕಾರಣ

ಭಾರತದಲ್ಲಿ ನಡೆಯುತ್ತಿರುವ ವಿಶ್ವಕಪ್ ಟೂರ್ನಿಯಲ್ಲಿ ಮೊದಲ ಪಂದ್ಯದಲ್ಲಿಯೇ ಅಮೋಘ ಪ್ರದರ್ಶನ ನೀಡಿರುವ ದಕ್ಷಿಣ ಆಫ್ರಿಕಾ ತಂಡ ಟೂರ್ನಿಯಲ್ಲಿ ಉಳಿದ ತಂಡಗಳಿಗೆ ಸಂದೇಶ ರವಾನಿಸಿದೆ. ಈ ಬಾರಿಯ ವಿಶ್ವಕಪ್‌ನಲ್ಲಿ ಚಾಂಪಿಯನ್ ಪಟ್ಟಕ್ಕೇರುವ ನೆಚ್ಚಿನ ತಂಡಗಳ ಪೈಕಿ ಒಂದು ಎನ್ನುವ ಸಂದೇಶವನ್ನು ರವಾನಿಸಿದೆ. ಇಂಥಾ ಸಂದರ್ಭದಲ್ಲಿ ದಕ್ಷೀಣ ಆಫ್ರಿಕಾ ಕ್ರಿಕೆಟ್ ಅಭಿಮಾನಿಗಳಿಗೆ ಆಘಾತಕಾರಿಯುಂಟು ಮಾಡುವ ಸುದ್ದಿಯೊಂದು ಹೊರಬಿದ್ದಿದೆ.

ದಕ್ಷಿಣ ಆಫ್ರಿಕಾ ಪ್ರಸ್ತುತ ನಡೆಯುತ್ತಿರುವ ವಿಶ್ವಕಪ್ ಟೂರ್ನಿಯಲ್ಲಿ ನಿಷೇಧಕ್ಕೆ ಒಳಗಾಗುವ ಆತಂಕಕ್ಕೆ ಸಿಲುಕಿದೆ. ಕ್ರಿಕೆಟ್ ಬಜ್ ವರದಿಯ ಪ್ರಕಾರ ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡ ವರ್ಲ್ಡ್ ಆಂಟಿ ಡೋಪಿಂಗ್ ಏಜೆನ್ಸಿ(WADA)ಯ ನಿಯಮಗಳನ್ನು ದಕ್ಷಿಣ ಆಫ್ರಿಕಾ ಅನುಸರಿಸಿಲ್ಲ ಎನ್ನುವ ಕಾರಣಕ್ಕೆ ಈಗ ಈ ಸಂಕಷ್ಟಕ್ಕೆ ಸಿಲುಕಿದೆ. ಈ ಕಾರಣದಿಂದಾಗಿ ದಕ್ಷಿಣ ಆಫ್ರಿಕಾ ವಿಶ್ವಕಪ್‌ನಿಂದ ನಿರ್ಬಂಧಕ್ಕೆ ಒಳಗಾಗುವ ಸಾಧ್ಯತೆಯೂ ಇದೆ.

World cup 2023: South Africa Cricket team faces WADA ban at ODI World Cup: here is why?

ದಕ್ಷಿಣ ಆಫ್ರಿಕಾದ ರಾಷ್ಟ್ರೀಯ ಉದ್ದೀಪನ ಮದ್ದು ವಿರೋಧಿ ಸಂಸ್ಥೆ (NADO) 2021ರಲ್ಲಿ ನೀತಿ ಸಂಹಿತೆಯೊಂದನ್ನು ಜಾರಿಗೆ ತಂದಿತ್ತು. ಇದನ್ನು ದಕ್ಷಿಣ ಆಫ್ರಿಕಾ ಕ್ರಿಕೆಟ್ ಸಂಸ್ಥೆ ಪಾಲಿಸಿಲ್ಲ ಎಂದು ವರದಿಯಾಗಿದೆ. ಇದೇ ಕಾರಣದಿಂದಾಗಿ ಇದೀಗ ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡಕ್ಕೆ ವಿಶ್ವಕಪ್ ಟೂರ್ನಿಯಲ್ಲಿ ದೊಡ್ಡ ಸಂಕಷ್ಟವೊಂದು ಎದುರಾಗುವ ಆತಂಕವಿದೆ.

ಟೂರ್ನಿಯಿಂದಲೇ ನಿಷೇಧಕ್ಕೆ ಒಳಗಾಗಲಿದೆಯಾ ದ. ಆಫ್ರಿಕಾ?
ಇನ್ನು ಈ ಪ್ರಕಟಣದಲ್ಲಿ ದಕ್ಷಿಣ ಆಫ್ರಿಕಾ ತಪ್ಪಿತಸ್ಥ ಎಂದು ಕಂಡು ಬಂದಲ್ಲಿ ವಿಶ್ವಕಪ್‌ನಿಂದ ಸಂಪೂರ್ಣವಾಗಿ ಹೊರಬೀಳುವ ಆತಂಕವನ್ನು ತಳ್ಳಿ ಹಾಕಲಾಗಿದೆ. ಅಂದರೆ ಸಂಪೂರ್ಣವಾಗಿ ತಂಡಕ್ಕೆ ನಿಷೇಧ ಹೇರುವ ಸಾಧ್ಯತೆಯಿಲ್ಲ. ಆದರೆ ವಿಶ್ವಕಪ್ ಟೂರ್ನಿಯಲ್ಲಿ ದಕ್ಷಿಣ ಆಫ್ರಿಕಾ ತಂಡ ತನ್ನ ದೇಶದ ಧ್ವಜದ ಅಡಿಯಲ್ಲಿ ಆಡುವ ಅವಕಾಶವನ್ನು ಕಳೆದುಕೊಳ್ಳಲಿದೆ ಎನ್ನಲಾಗಿದೆ.

ಅದ್ಭುತ ಆರಂಭ ಪಡೆದುಕೊಂಡ ದಕ್ಷಿಣ ಆಪ್ರಿಕಾ
ಇನ್ನು ಈ ಬಾರಿಯ ವಿಶ್ವಕಪ್ ಟೂರ್ನಿಯಲ್ಲಿ ದಕ್ಷಿಣ ಆಫ್ರಿಕಾ ತಂಡ ಅದ್ಭುತ ಆರಂಭವನ್ನು ಪಡೆದುಕೊಂಡಿದೆ. ಶ್ರೀಲಂಕಾ ತಂಡದ ವಿರುದ್ಧ ಮೊದಲ ಮೊದಲ ಪಂದ್ಯವನ್ನು ಆಡುವ ಮೂಲಕ ಟೂರ್ನಿಯಲ್ಲಿ ತನ್ನ ಅಭಿಯಾನವನ್ನು ಆರಂಭಿಸಿತ್ತು. ಈ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾದ ಮೂವರು ಆಟಗಾರರು ಅಮೋಘ ಶತಕವನ್ನು ಸಿಡಿಸಿದ್ದು 400ಕ್ಕೂ ಅಧಿಕ ರನ್‌ಗಳನ್ನು ಪೇರಿಸಿದ ಸಾಧನೆ ಮಾಡಿತು. 429 ರನ್‌ಗಳ ಗುರಿಯನ್ನು ಶ್ರೀಲಂಕಾಗೆ ನೀಡಿದ ಆಫ್ರಿಕಾ ಬಳಿಕ ಲಂಕಾ ಪಡೆಯನ್ನು 326 ರನ್‌ಗಳಿಗೆ ಕಟ್ಟು ಹಾಕಿದೆ. ಈ ಮೂಲಕ ಮೊದಲ ಪಂದ್ಯದಲ್ಲಿ 102 ರನ್‌ಗಳ ಅಂತರದ ಬೃಹತ್ ಗೆಲುವು ಸಾಧಿಸಿದೆ.

ದಕ್ಷಿಣ ಆಫ್ರಿಕಾ ತಂಡ ತನ್ನ ಮುಂದಿನ ಪಂದ್ಯವನ್ನು ಗುರುವಾರ ಆಡಲಿದ್ದು ಆಸ್ಟ್ರೇಲಿಯಾ ತಂಡ ಎದುರಾಳಿಯಾಗಿ ಕಣಕ್ಕಿಳಿಯಲಿದೆ. ಲಕ್ನೋದ ಏಕಾನ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯಲಿದ್ದು ಎರಡು ಬಲಿಷ್ಠ ತಮಡಗಳ ನಡುವಿನ ಈ ಸೆಣೆಸಾಟ ಸಾಕಷ್ಟು ಕುತೂಹಲ ಮೂಡಿಸಿದೆ.

Story first published: Monday, October 9, 2023, 17:44 [IST]
Other articles published on Oct 9, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+