World cup: ದಕ್ಷಿಣ ಆಫ್ರಿಕಾಗೆ ಮತ್ತೊಂದು ಹಿನ್ನಡೆ: ಇದ್ದಕ್ಕಿದ್ದಂತೆ ತವರಿಗೆ ಮರಳಿದ ನಾಯಕ ಟೆಂಬಾ ಬವುಮಾ!!
ವಿಶ್ವಕಪ್ ಟೂರ್ನಿಗೆ ಸಿದ್ಧತೆ ಆರಂಭಿಸಿದ್ದ ದಕ್ಷಿಣ ಆಫ್ರಿಕಾ ತಂಡಕ್ಕೆ ಮತ್ತೊಂದು ಆಘಾತ ಎದುರಾಗಿದೆ. ತಂಡದ ನಾಯಕ ಟೆಂಬಾ ಬವುಮಾ ವೈಯಕ್ತಿಕ ಕಾರಣಗಳಿಂದಾಗಿ ತವರಿಗೆ ಮರಳಿದ್ದು ಇದು ತಂಡದ ವಿಶ್ವಕಪ್ ಸಿದ್ಧತೆಗೆ ಹಿನ್ನಡೆಯಾಗಬಹುದು ಎನ್ನಲಾಗಿದೆ. ವಿಶ್ವಕಪ್ ಟೂರ್ನಿಗೂ ಮುನ್ನ ನಡೆಯಲಿರುವ ಎರಡು ಅಭ್ಯಾಸ ಪಂದ್ಯಗಳಿಗೂ ಬವುಮಾ ಅಲಭ್ಯವಾಗಲಿದ್ದಾರೆ. ಆದರೆ ವಿಶ್ವಕಪ್ ಟೂರ್ನಿಯ ಮೊದಲ ಪಂದ್ಯದ ವೇಳೆಗೆ ಅವರು ಮತ್ತೆ ತಂಡವನ್ನು ಕೂಡಿಕೊಳ್ಳುವ ನಿರೀಕ್ಷೆಯಿದೆ.
ದಕ್ಷಿಣ ಆಫ್ರಿಕಾ 2 ಅಭ್ಯಾಸ ಪಂದ್ಯಗಳನ್ನು ಆಡಲಿದ್ದು ಮೊದಲ ಪಂದ್ಯ ಸೆಪ್ಟೆಂಬರ್ 29ರಂದು ತಿರುವನಂತಪುರಂನಲ್ಲಿರುವ ಗ್ರೀನ್‌ಫೀಲ್ಡ್ ಇಂಟರ್ನ್ಯಾಷನಲ್ ಸ್ಟೇಡಿಯಂನಲ್ಲಿ ಅಫ್ಘಾನಿಸ್ತಾನದ ವಿರುದ್ಧ ನಡೆಯಲಿದೆ. ಅದಾದ ಬಳಿಕ ಅಕ್ಟೋಬರ್ 2ರಂದು ಅಂತಿಮ ಅಭ್ಯಾಸ ಪಂದ್ಯವನ್ನು ಆಡಲಿದ್ದ ನ್ಯೂಜಿಲೆಂಡ್ ತಂಡವನ್ನು ಎದುರಿಸಲಿದೆ. ಈ ಎರಡು ಪಂದ್ಯಗಳಲ್ಲಿಯೂ ಹಂಗಾಮಿ ನಾಯಕನಾಗಿ ಐಡೆನ್ ಮಾರ್ಕ್ರಮ್ ತಂಡವನ್ನು ಮುನ್ನಡೆಸಲಿದ್ದಾರೆ.

ವಿಶ್ವಕಪ್‌ನಲ್ಲಿ ದಕ್ಷಿಣ ಆಫ್ರಿಕಾ ತಂಡದ ಆರಂಭಿಕ ಪಂದ್ಯ ಶ್ರೀಲಂಕಾ ವಿರುದ್ಧ ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಅಕ್ಟೋಬರ್ 7 ರಂದು ನಡೆಯುವ ಈ ಪಂದ್ಯಕ್ಕೆ ಟೆಂಬಾ ಬವುಮಾ ಮರಳುವ ಸಾಧ್ಯತೆಯಿದೆ. ವೈಯಕ್ತಿಕ ಕಾರಣದಿಂದಾಗಿ ಟೆಂಬಾ ಬವುಮಾ ತವರಿಗೆ ವಾಪಸಾಗಿದ್ದಾರೆ.
ಮತ್ತೊಂದೆಡೆ ದಕ್ಷಿಣ ಆಫ್ರಿಕಾ ತಂಡ ಈಗಾಗಲೇ ಗಾಯದ ಸಮಸ್ಯೆಗೆ ಸಿಲುಕಿದೆ. ತಂಡದ ಇಬ್ಬರು ಪ್ರಮುಖ ವೇಗದ ಬೌಲರ್‌ಗಳು ಗಾಯದ ಕಾರಣದಿಂದಾಗಿ ಈ ಬಾರಿಯ ವಿಶ್ವಕಪ್ ಟೂರ್ನಿಗೆ ಅಲಭ್ಯವಾಗಿದ್ದಾರೆ. ಘಾತಕ ವೇಗಿ ಅನ್ರಿಕ್ ನಾರ್ಕಿಯಾ ಹಾಗೂ ಸಿಸಂಡ ಮಗಲ ಗಾಯದಿಂದಾಗಿ ವಿಶ್ವಕಪ್ ಟೂರ್ನಿಯಿಂದ ಹೊರಬಿದ್ದಿದ್ದಾರೆ.
ದಕ್ಷಿಣ ಆಫ್ರಿಕಾ ತಂಡದ ವಿಶ್ವಕಪ್ ವೇಳಾಪಟ್ಟಿ ಹೀಗಿದೆ.
ಅಕ್ಟೋಬರ್ 7: ದಕ್ಷಿಣ ಆಫ್ರಿಕಾ v ಶ್ರೀಲಂಕಾ (ಅರುಣ್ ಜೇಟ್ಲಿ ಸ್ಟೇಡಿಯಂ, ದೆಹಲಿ)
ಅಕ್ಟೋಬರ್ 12: ದಕ್ಷಿಣ ಆಫ್ರಿಕಾ v ಆಸ್ಟ್ರೇಲಿಯಾ (ಭಾರತ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಏಕನಾ ಕ್ರಿಕೆಟ್ ಸ್ಟೇಡಿಯಂ, ಲಕ್ನೋ)
ಅಕ್ಟೋಬರ್ 17: ದಕ್ಷಿಣ ಆಫ್ರಿಕಾ v ನೆದರ್ಲ್ಯಾಂಡ್ಸ್ (ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂ, ಧರ್ಮಶಾಲಾ)
ಅಕ್ಟೋಬರ್ 21: ದಕ್ಷಿಣ ಆಫ್ರಿಕಾ v ಇಂಗ್ಲೆಂಡ್ (ವಾಂಖೆಡೆ ಸ್ಟೇಡಿಯಂ, ಮುಂಬೈ)
ಅಕ್ಟೋಬರ್ 24: ದಕ್ಷಿಣ ಆಫ್ರಿಕಾ v ಬಾಂಗ್ಲಾದೇಶ (ವಾಂಖೆಡೆ ಸ್ಟೇಡಿಯಂ, ಮುಂಬೈ)
ಅಕ್ಟೋಬರ್ 27: ದಕ್ಷಿಣ ಆಫ್ರಿಕಾ v ಪಾಕಿಸ್ತಾನ (MA ಚಿದಂಬರಂ ಸ್ಟೇಡಿಯಂ, ಚೆಪಾಕ್, ಚೆನ್ನೈ)
ನವೆಂಬರ್ 1: ದಕ್ಷಿಣ ಆಫ್ರಿಕಾ v ನ್ಯೂಜಿಲೆಂಡ್ (ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂ, ಗಹುಂಜೆ, ಪುಣೆ)
ನವೆಂಬರ್ 5: ದಕ್ಷಿಣ ಆಫ್ರಿಕಾ v ಭಾರತ (ಈಡನ್ ಗಾರ್ಡನ್ಸ್, ಕೋಲ್ಕತ್ತಾ)
ನವೆಂಬರ್ 10: ದಕ್ಷಿಣ ಆಫ್ರಿಕಾ ವಿರುದ್ಧ ಅಫ್ಘಾನಿಸ್ತಾನ (ನರೇಂದ್ರ ಮೋದಿ ಸ್ಟೇಡಿಯಂ, ಅಹಮದಾಬಾದ್)
ಈ ಎಲ್ಲಾ ಪಂದ್ಯಗಳು ಭಾರತೀಯ ಕಾಲಮಾನ ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications