Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

World Cup 2023: ಸೆಮಿಫೈನಲ್‌ನಲ್ಲಿ ಕಿವೀಸ್ ಕಿವಿ ಹಿಂಡಲು ಈ ಮೂವರು ಆಟಗಾರರು ಸಿದ್ಧ!

2023ರ ಐಸಿಸಿ ಏಕದಿನ ವಿಶ್ವಕಪ್‌ ಪಂದ್ಯಾವಳಿಯ ಮೊದಲ ಸೆಮಿಫೈನಲ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಲೀಗ್ ಹಂತದ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆದಿರುವ ಭಾರತ ಉಪಾಂತ್ಯದಲ್ಲಿ ಕಿವೀಸ್ ತಂಡವನ್ನು ಎದುರಿಸಲಿದೆ.

ಬುಧವಾರ, ನವೆಂಬರ್ 15ರಂದು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯ ವಿಶ್ವದ ಕ್ರಿಕೆಟ್ ಅಭಿಮಾನಿಗಳ ಚಿತ್ತ ಕದ್ದಿದೆ. ಈ ಬಾರಿಯ ವಿಶ್ವಕಪ್‌ನಲ್ಲಿ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಮತ್ತು ಮಾಜಿ ನಾಯಕ ವಿರಾಟ್ ಕೊಹ್ಲಿ ಭಾರತದ ಪರ ಅದ್ಭುತ ಪ್ರದರ್ಶನ ನೀಡಿದ್ದಾರೆ.

ಕೊಹ್ಲಿ ಮತ್ತು ರೋಹಿತ್ ಜೊತೆಗೆ ವೇಗಿ ಮೊಹಮ್ಮದ್ ಶಮಿ ಕೂಡ ಎಲ್ಲರ ಮನಸೆಳೆದಿದ್ದಾರೆ. ಈ ಮೂವರು ಆಟಗಾರರು ನ್ಯೂಜಿಲೆಂಡ್ ತಂಡಕ್ಕೆ ಸಿಂಹಸ್ವಪ್ನವಾಗಬಲ್ಲರು ಎಂದು ಅಂದಾಜಿಸಲಾಗಿದೆ.

3-indian-players-can-perform-well-against-new-zealand

ಈ ಬಾರಿಯ ಟೂರ್ನಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎಂದರೆ, ಅದು ಟೀಮ್ ಇಂಡಿಯಾದ ಚೇಸಿಂಗ್ ಮಾಸ್ಟರ್ ವಿರಾಟ್ ಕೊಹ್ಲಿ. ಈತ ಆಡಿದ 9 ಪಂದ್ಯಗಳಲ್ಲಿ 594 ರನ್ ಗಳಿಸಿದ್ದಾರೆ. ಇದರಲ್ಲಿ ಎರಡು ಶತಕ ಮತ್ತು 5 ಅರ್ಧಶತಕಗಳು ಒಳಗೊಂಡಿವೆ.

ನ್ಯೂಜಿಲೆಂಡ್ ವಿರುದ್ಧದ ಕೊನೆಯ ಪಂದ್ಯದಲ್ಲಿ ವಿರಾಟ್ ಕೊಹ್ಲಿ 95 ರನ್ ಗಳಿಸಿದ್ದರು. ಕೇವಲ 5 ರನ್‌ಗಳಿಂದ ಶತಕ ವಂಚಿತರಾಗಿದ್ದರು. ಆದರೆ, ಭಾರತದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. ವಿರಾಟ್ ಕೊಹ್ಲಿ ಈ ಬಾರಿಯೂ ನ್ಯೂಜಿಲೆಂಡ್ ತಂಡದ ಸದ್ದಡಗಿಸಬಹುದು ಎಂದು ಅಂದಾಜಿಸಲಾಗಿದೆ. ಫಾರ್ಮ್‌ನಲ್ಲಿರುವ ಅವರು ಹಲವು ಸ್ಫೋಟಕ ಇನ್ನಿಂಗ್ಸ್‌ಗಳನ್ನು ಆಡಿದ್ದಾರೆ.

ಇನ್ನು ನ್ಯೂಜಿಲೆಂಡ್ ವಿರುದ್ಧದ ಕೊನೆಯ ಪಂದ್ಯದಲ್ಲಿ ಭಾರತದ ನಾಯಕ ರೋಹಿತ್ ಶರ್ಮಾ ಸ್ಫೋಟಕ 46 ರನ್ ಗಳಿಸಿ ಔಟಾದರು. ಆದರೆ ಈ ಬಾರಿ ತವರಿನಂಗಳದಲ್ಲಿ ಆಡುವುದರಿಂದ ಅಭಿಮಾನಿಗಳು ಅವರಿಂದ ಉತ್ತಮ ಪ್ರದರ್ಶನವನ್ನು ನಿರೀಕ್ಷಿಸುತ್ತಿದ್ದಾರೆ.

ರೋಹಿತ್ ಶರ್ಮಾ ಇದುವರೆಗೆ ಆಡಿದ 9 ಪಂದ್ಯಗಳಲ್ಲಿ 503 ರನ್ ಗಳಿಸಿದ್ದಾರೆ. ಒಂದು ಶತಕ ಮತ್ತು ಮೂರು ಅರ್ಧಶತಕಗಳನ್ನು ಕೂಡ ಗಳಿಸಿದ್ದಾರೆ.

3-indian-players-can-perform-well-against-new-zealand

ಟೀಮ್ ಇಂಡಿಯಾದ ವೇಗಿ ಮೊಹಮ್ಮದ್ ಶಮಿ ಈ ಬಾರಿ ಐದು ಪಂದ್ಯಗಳನ್ನಾಡಿದ್ದು, 16 ವಿಕೆಟ್ ಕಬಳಿಸಿದ್ದಾರೆ. ಅವರ ಉತ್ತಮ ಪ್ರದರ್ಶನವನ್ನು ಪರಿಗಣಿಸಿ, ಶಮಿ ಪಂದ್ಯದ ಗತಿಯನ್ನೇ ಬದಲಿಸಬಲ್ಲರು ಎಂದು ಊಹಿಸಲಾಗಿದೆ.

ಮೊಹಮ್ಮದ್ ಶಮಿ ನ್ಯೂಜಿಲೆಂಡ್ ತಂಡವನ್ನು ಕಟ್ಟಿಹಾಕಲು ತಂತ್ರವನ್ನು ರೂಪಿಸಿಕೊಂಡಿದ್ದಾರೆ. ಲೀಗ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ 5 ವಿಕೆಟ್ ಪಡೆದಿದ್ದ ಶಮಿ ಮೇಲೆ ಅಪಾರವಾದ ಭರವಸೆಯನ್ನು ಇಟ್ಟುಕೊಳ್ಳಲಾಗಿದೆ.

ಏಕದಿನ ವಿಶ್ವಕಪ್ ಪಂದ್ಯಾವಳಿಯ ಮೊದಲ ಸೆಮಿಫೈನಲ್ ನಂತರ, ಎರಡನೇ ಸೆಮಿಫೈನಲ್ ದಕ್ಷಿಣ ಆಫ್ರಿಕಾ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯಲಿದೆ ಎಂದು ನಾವು ನಿಮಗೆ ಹೇಳಬೇಕಿದೆ.

ಈ ಪಂದ್ಯ ನವೆಂಬರ್ 16ರಂದು ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆಯಲಿದೆ. ಇದಾದ ನಂತರ ನವೆಂಬರ್ 19ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಫೈನಲ್ ಪಂದ್ಯ ನಡೆಯಲಿದೆ.

Story first published: Tuesday, November 14, 2023, 15:37 [IST]
Other articles published on Nov 14, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+