World Cup 2023 Warm-up Match: ಭಾರತದಲ್ಲಿ ಇಂದಿನಿಂದ ವಿಶ್ವಕಪ್ ಹಬ್ಬ; 3 ಅಭ್ಯಾಸ ಪಂದ್ಯಗಳ ಮಾಹಿತಿ
ಭಾರತದಲ್ಲಿ 2023ರ ಐಸಿಸಿ ಏಕದಿನ ವಿಶ್ವಕಪ್ ಪಂದ್ಯಾವಳಿಯು ಅಭ್ಯಾಸ ಪಂದ್ಯಗಳ ಮೂಲಕ ಇಂದಿನಿಂದ (ಶುಕ್ರವಾರ, ಸೆಪ್ಟೆಂಬರ್ 29) ಆರಂಭವಾಗುತ್ತಿದೆ. ಅಕ್ಟೋಬರ್ 5ರಂದು ಅಧಿಕೃತವಾಗಿ ಮುಖ್ಯ ಪಂದ್ಯಾವಳಿಗೆ ಚಾಲನೆ ಸಿಗಲಿದೆ.
ವಿಶ್ವದ 10 ತಂಡಗಳು 46 ದಿನಗಳ ಕಾಲ 48 ಮುಖ್ಯ ಪಂದ್ಯಗಳನ್ನು ಆಡುವ ಮೂಲಕ ದೊಡ್ಡ ಕ್ರಿಕೆಟ್ ಹಬ್ಬಕ್ಕೆ ಭಾರತ ಸಾಕ್ಷಿಯಾಗಲಿದೆ. ಅಭ್ಯಾಸ ಪಂದ್ಯಗಳ ತಾಣಗಳು ಸೇರಿ 12 ಸ್ಥಳಗಳಲ್ಲಿ ವಿಶ್ವಕಪ್ ಪಂದ್ಯಾವಳಿ ನಡೆಯುತ್ತಿದೆ.

ಆತಿಥೇಯ ಭಾರತ ಸೇರಿದಂತೆ ಪಾಕಿಸ್ತಾನ, ಶ್ರೀಲಂಕಾ, ಆಸ್ಟ್ರೇಲಿಯಾ, ನ್ಯೂಜಿಲೆಂಡ್, ಬಾಂಗ್ಲಾದೇಶ, ಅಫ್ಘಾನಿಸ್ತಾನ, ಇಂಗ್ಲೆಂಡ್, ದಕ್ಷಿಣ ಆಫ್ರಿಕಾ, ನೆದರ್ಲ್ಯಾಂಡ್ಸ್ ತಂಡಗಳು 2023ರ ಏಕದಿನ ವಿಶ್ವಕಪ್‌ನಲ್ಲಿ ಭಾಗಿಯಾಗಲಿವೆ.
2023ರ ಐಸಿಸಿ ಏಕದಿನ ವಿಶ್ವಕಪ್ ಪಂದ್ಯಾವಳಿಯನ್ನು ಅಹಮದಾಬಾದ್, ಚೆನ್ನೈ, ಬೆಂಗಳೂರು, ಮುಂಬೈ, ಪುಣೆ, ಧರ್ಮಶಾಲಾ, ದೆಹಲಿ, ಕೋಲ್ಕತ್ತಾ, ಹೈದರಾಬಾದ್, ಲಕ್ನೋ ಸ್ಥಳಗಳಲ್ಲಿ ಮುಖ್ಯ ಪಂದ್ಯಗಳು ನಡೆಯಲಿವೆ. ಇನ್ನು ಗುವಾಹಟಿ ಮತ್ತು ತಿರುವನಂತಪುರಂನಲ್ಲಿ ಅಭ್ಯಾಸ ಪಂದ್ಯಗಳ ಆಯೋಜನೆಯಾಗಿವೆ.
ಇಂದಿನ ವಿಶ್ವಕಪ್ ಅಭ್ಯಾಸ ಪಂದ್ಯಗಳು
1) ಪಾಕಿಸ್ತಾನ vs ನ್ಯೂಜಿಲೆಂಡ್: ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಶುಕ್ರವಾರ, ಸೆಪ್ಟೆಂಬರ್ 29ರಂದು ನ್ಯೂಜಿಲೆಂಡ್ ಮತ್ತು ಪಾಕಿಸ್ತಾನ ತಂಡಗಳು ಸೆಣಸಾಡಲಿವೆ.
ಉಭಯ ತಂಡಗಳು ಇತ್ತೀಚೆಗೆ ನಿರಾಶಾದಾಯಕ ಅಭಿಯಾನಗಳಿಂದ ಬರುತ್ತಿದ್ದಾರೆ. ಪಾಕಿಸ್ತಾನ ತಂಡ 2023ರ ಏಷ್ಯಾ ಕಪ್‌ನಿಂದ ಸೋತು ಹೊರಬಿದ್ದ ನಂತರ ವಿಶ್ವಕಪ್‌ಗೆ ಆಗಮಿಸಿದೆ. ಇನ್ನು ನ್ಯೂಜಿಲೆಂಡ್ ಬಾಂಗ್ಲಾದೇಶ ವಿರುದ್ಧ ಏಕದಿನ ಸರಣಿ ಗೆದ್ದರೂ, ಇಂಗ್ಲೆಂಡ್ ವಿರುದ್ಧ ವೈಫಲ್ಯ ಅನುಭವಿಸಿತ್ತು.
ನ್ಯೂಜಿಲೆಂಡ್ vs ಪಾಕಿಸ್ತಾನ ಸಂಭಾವ್ಯ ಆಡುವ 11ರ ಬಳಗ
ನ್ಯೂಜಿಲೆಂಡ್: ಡೆವೊನ್ ಕಾನ್ವೇ, ಕೇನ್ ವಿಲಿಯಮ್ಸನ್ (ನಾಯಕ), ಡೆರಿಲ್ ಮಿಚೆಲ್, ಜೇಮ್ಸ್ ನೀಶಾಮ್, ಮಿಚೆಲ್ ಸ್ಯಾಂಟ್ನರ್, ಗ್ಲೆನ್ ಫಿಲಿಪ್ಸ್, ಟಾಮ್ ಲ್ಯಾಥಮ್ (ವಿಕೆಟ್ ಕೀಪರ್), ಮ್ಯಾಟ್ ಹೆನ್ರಿ, ಟಿಮ್ ಸೌಥಿ, ಇಶ್ ಸೋಧಿ, ಟ್ರೆಂಟ್ ಬೌಲ್ಟ್.

ಪಾಕಿಸ್ತಾನ: ಬಾಬರ್ ಅಜಂ (ನಾಯಕ), ಅಘಾ ಸಲ್ಮಾನ್, ಫಖರ್ ಜಮಾನ್, ಇಮಾಮ್-ಉಲ್-ಹಕ್, ಸೌದ್ ಶಕೀಲ್, ಇಫ್ತಿಕರ್ ಅಹ್ಮದ್, ಮೊಹಮ್ಮದ್ ನವಾಜ್, ಶಾದಾಬ್ ಖಾನ್, ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಶಾಹೀನ್ ಅಫ್ರಿದಿ, ಹ್ಯಾರಿಸ್ ರೌಫ್.
2) ಬಾಂಗ್ಲಾದೇಶ vs ಶ್ರೀಲಂಕಾ ಅಭ್ಯಾಸ ಪಂದ್ಯ
ಗುವಾಹಟಿಯ ಬರ್ಸಾಪರ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಶುಕ್ರವಾರ, ಸೆಪ್ಟೆಂಬರ್ 29ರಂದು ಬಾಂಗ್ಲಾದೇಶ ಮತ್ತು ಶ್ರೀಲಂಕಾ ತಂಡಗಳು ಅಭ್ಯಾಸ ಪಂದ್ಯದಲ್ಲಿ ಸೆಣಸಾಡಲಿವೆ.
ಉಭಯ ತಂಡಗಳು ಇತ್ತೀಚಿಗೆ 2023ರ ಏಷ್ಯಾ ಕಪ್‌ನಲ್ಲಿ ಆಡಿದ್ದವು. ಬಾಂಗ್ಲಾದೇಶ ಸೂಪರ್ 4 ಹಂತದಲ್ಲಿ ಹೊರಬಿದ್ದರೆ, ಶ್ರೀಲಂಕಾ ತಂಡವು ಫೈನಲ್‌ನಲ್ಲಿ ಭಾರತ ವಿರುದ್ಧ ಹೀನಾಯ ಸೋಲು ಅನುಭವಿಸಿತು. ಸದ್ಯ ಶ್ರೀಲಂಕಾ ತಂಡವು ಗಾಯದ ಸಮಸ್ಯೆಯನ್ನು ಎದುರಿಸುತ್ತಿದೆ.
ಶ್ರೀಲಂಕಾ vs ಬಾಂಗ್ಲಾದೇಶ ವಿಶ್ವಕಪ್ ಪೂರ್ಣ ತಂಡಗಳು
ಬಾಂಗ್ಲಾದೇಶ ತಂಡ: ತಂಝೀದ್ ಹಸನ್, ಲಿಟ್ಟನ್ ದಾಸ್(ವಿಕೆಟ್ ಕೀಪರ್), ನಜ್ಮುಲ್ ಹೊಸೈನ್ ಶಾಂಟೊ, ಶಕೀಬ್ ಅಲ್ ಹಸನ್(ನಾಯಕ), ಮುಶ್ಫಿಕರ್ ರಹೀಮ್, ತೌಹಿದ್ ಹೃದೋಯ್, ಮಹಮ್ಮದುಲ್ಲಾ, ಮಹೇದಿ ಹಸನ್, ಮೆಹಿದಿ ಹಸನ್ ಮಿರಾಜ್, ತಂಝಿಮ್ ಹಸನ್ ಸಾಕಿಬ್, ಹಸನ್ ಮಹಮೂದ್, ನಸುಮ್ ಅಹ್ಮದ್, ತಸ್ಕಿನ್ ಅಹ್ಮದ್, ಮುಸ್ತಾಫಿಜುರ್ ರೆಹಮಾನ್, ಶೋರಿಫುಲ್ ಇಸ್ಲಾಂ.
ಶ್ರೀಲಂಕಾ ತಂಡ: ಪಾಥುಮ್ ನಿಸ್ಸಾಂಕ, ಕುಸಾಲ್ ಪೆರೇರಾ, ಕುಸಲ್ ಮೆಂಡಿಸ್(ವಿಕೆಟ್ ಕೀಪರ್), ಸದೀರ ಸಮರವಿಕ್ರಮ, ಚರಿತ್ ಅಸಲಂಕಾ, ಧನಂಜಯ ಡಿ ಸಿಲ್ವ, ದಸುನ್ ಶನಕ(ನಾಯಕ), ದುನಿತ್ ವೆಲ್ಲಲಾಗೆ, ದುಶನ್ ಹೇಮಂತ, ಮತೀಶ ಪತಿರಣ, ಕಸುನ್ ರಜಿತಾ, ಲಹಿರು ಕುಮಾರ, ಮಹೀಶ್ ತೀಕ್ಷಣ, ದಿಲ್ಶನ್ ಮಧುಶಂಕ, ದಿಮುತ್ ಕರುಣಾರತ್ನೆ.
3) ದಕ್ಷಿಣ ಆಫ್ರಿಕಾ vs ಅಫ್ಘಾನಿಸ್ತಾನ ಅಭ್ಯಾಸ ಪಂದ್ಯ
ತಿರುವನಂತಪುರಂನ ಗ್ರೀನ್‌ಫೀಲ್ಡ್ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಶುಕ್ರವಾರ, ಸೆಪ್ಟೆಂಬರ್ 29ರಂದು ದಕ್ಷಿಣ ಆಫ್ರಿಕಾ ಮತ್ತು ಅಫ್ಘಾನಿಸ್ತಾನ ತಂಡಗಳು ಮತ್ತೊಂದು ಅಭ್ಯಾಸ ಪಂದ್ಯದಲ್ಲಿ ಮುಖಾಮುಖಿಯಾಗುತ್ತಿವೆ.
ವರದಿಗಳ ಪ್ರಕಾರ, ತುರ್ತಾಗಿ ಕುಟುಂಬ ಸೇರಲು ನಾಯಕ ಟೆಂಬಾ ಬವುಮಾ ತವರಿಗೆ ಮರಳಿದ್ದಾರೆ. ಆದರೆ, ಅಕ್ಟೋಬರ್ 7ರಂದು ದೆಹಲಿಯಲ್ಲಿ ಶ್ರೀಲಂಕಾ ವಿರುದ್ಧದ ದಕ್ಷಿಣ ಆಫ್ರಿಕಾದ ವಿಶ್ವಕಪ್ ಮೊದಲ ಪಂದ್ಯದಲ್ಲಿ ಟೆಂಬಾ ಬವುಮಾ ತಂಡವನ್ನು ಕೂಡಿಕೊಳ್ಳುವ ನಿರೀಕ್ಷೆ ಇದೆ.
ದಕ್ಷಿಣ ಆಫ್ರಿಕಾ vs ಅಫ್ಘಾನಿಸ್ತಾನ ವಿಶ್ವಕಪ್ ಪೂರ್ಣ ತಂಡಗಳು
ಅಫ್ಘಾನಿಸ್ತಾನ ತಂಡ: ರಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್), ಇಬ್ರಾಹಿಂ ಝದ್ರಾನ್, ರಹಮತ್ ಶಾ, ಹಶ್ಮತುಲ್ಲಾ ಶಾಹಿದಿ (ನಾಯಕ), ನಜಿಬುಲ್ಲಾ ಝದ್ರಾನ್, ಮೊಹಮ್ಮದ್ ನಬಿ, ಇಕ್ರಮ್ ಅಲಿಖಿಲ್, ರಶೀದ್ ಖಾನ್, ಮುಜೀಬ್ ಉರ್ ರಹಮಾನ್, ಫಜಲ್ಹಕ್ ಫಾರೂಕಿ, ನವೀನ್-ಉಲ್-ಹಕ್, ಅಜ್ಮತುಲ್ಲಾ ಒಮರ್ಜಾಯ್, ಅಬ್ದುಲ್ ರಹಮಾನ್, ರಿಯಾಜ್ ಹಸನ್, ನೂರ್ ಅಹ್ಮದ್.
ದಕ್ಷಿಣ ಆಫ್ರಿಕಾ ತಂಡ: ಕ್ವಿಂಟನ್ ಡಿ ಕಾಕ್(ವಿಕೆಟ್ ಕೀಪರ್), ರೀಜಾ ಹೆಂಡ್ರಿಕ್ಸ್, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಐಡೆನ್ ಮಾರ್ಕ್ರಾಮ್(ನಾಯಕ), ಹೆನ್ರಿಚ್ ಕ್ಲಾಸೆನ್, ಡೇವಿಡ್ ಮಿಲ್ಲರ್, ಮಾರ್ಕೊ ಜಾನ್ಸೆನ್, ಆಂಡಿಲ್ ಫೆಹ್ಲುಕ್ವಾಯೊ, ಜೆರಾಲ್ಡ್ ಕೋಟ್ಜಿ, ಕೇಶವ್ ಮಹಾರಾಜ್, ಲುಂಗಿ ಎನ್‌ಗಿಡಿ, ಕಗಿಸೊ ರಬಾಡಾ, ಲಿಜಾದ್ ವಿಲಿಯಮ್ಸ್, ತಬ್ರೈಜ್ ಶಮ್ಸಿ.
ವಿಶ್ವಕಪ್ ಅಭ್ಯಾಸ ಪಂದ್ಯಗಳ ಸಮಯ
2023ರ ಏಕದಿನ ವಿಶ್ವಕಪ್‌ನ ಎಲ್ಲಾ ಅಭ್ಯಾಸ ಪಂದ್ಯಗಳು ಭಾರತೀಯ ಕಾಲಮಾನ ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿವೆ. 1.30ಕ್ಕೆ ಟಾಸ್ ನಡೆಯಲಿದೆ.
ವಿಶ್ವಕಪ್ ಅಭ್ಯಾಸ ಪಂದ್ಯಗಳ ಟಿವಿ ಮತ್ತು ಲೈವ್ ಸ್ಟ್ರೀಮಿಂಗ್ ವಿವರ
2023ರ ಏಕದಿನ ವಿಶ್ವಕಪ್‌ನ ಎಲ್ಲಾ ಅಭ್ಯಾಸ ಪಂದ್ಯಗಳನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಚಾನೆಲ್‌ಗಳಲ್ಲಿ ನೇರಪ್ರಸಾರ ಮಾಡಲಾಗುತ್ತದೆ ಮತ್ತು ಡಿಸ್ನಿ+ ಹಾಟ್‌ಸ್ಟಾರ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಆಗಿ ವೀಕ್ಷಿಸಬಹುದು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications