World Cup 2023: ವಿಶ್ವಕಪ್ ಅಭ್ಯಾಸ ಪಂದ್ಯಗಳ ವೇಳಾಪಟ್ಟಿ; ಭಾರತದ ಪಂದ್ಯ ಯಾವಾಗ? ಟಿವಿ, ಲೈವ್ ಸ್ಟ್ರೀಮ್ ವಿವರ
ಕೆಲವೇ ದಿನಗಳಲ್ಲಿ 2023ರ ಐಸಿಸಿ ಪುರುಷರ ಏಕದಿನ ಕ್ರಿಕೆಟ್ ವಿಶ್ವಕಪ್ ಪಂದ್ಯಾವಳಿ ಆರಂಭವಾಗಲಿದ್ದು, ಭಾರತದಲ್ಲಿ ಅಕ್ಟೋಬರ್ 5ರಿಂದ ನವೆಂಬರ್ 19ರವರೆಗೆ ಒಂದೂವರೆ ತಿಂಗಳು ಕ್ರಿಕೆಟ್ ಹಬ್ಬ ನಡೆಯಲಿದೆ.
ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿ ಮುಗಿಯುತ್ತಿದ್ದಂತೆಯೇ, ಐಸಿಸಿ ಪಂದ್ಯಾವಳಿಗೆ ಭಾರತ ತಂಡ ಸಜ್ಜಾಗಲಿದೆ. ನಂ.1 ಏಕದಿನ ತಂಡವಾಗಿ ವಿಶ್ವಕಪ್ ಪ್ರವೇಶಿಸಲಿದೆ.

ಅಕ್ಟೋಬರ್ 5ರಂದು ಅಹಮದಾಬಾದ್‌ನಲ್ಲಿ ಕಳೆದ ವಿಶ್ವಕಪ್‌ನ ಚಾಂಪಿಯನ್ ಇಂಗ್ಲೆಂಡ್ ಮತ್ತು ರನ್ನರ್-ಅಪ್ ನ್ಯೂಜಿಲೆಂಡ್ ತಂಡಗಳು ನಡುವೆ ರೋಚಕ ಉದ್ಘಾಟನಾ ಪಂದ್ಯದಲ್ಲಿ ಸೆಣಸಾಡಲಿವೆ. ಮುಖ್ಯ ಪಂದ್ಯಾವಳಿಗೂ ಮುನ್ನ ಎಲ್ಲಾ ಹತ್ತು ತಂಡಗಳೂ ಅಭ್ಯಾಸ ಪಂದ್ಯಗಳನ್ನು ಗುವಾಹಟಿ, ಹೈದರಾಬಾದ್ ಮತ್ತು ತಿರುವನಂತಪುರಂನಲ್ಲಿ ಆಡಲಿವೆ.
ಶುಕ್ರವಾರ, ಸೆಪ್ಟೆಂಬರ್ 29ರಂದು ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ಪ್ರೇಕ್ಷಕರಿಲ್ಲದೆ ಖಾಲಿ ಮೈದಾನದಲ್ಲಿ ಮಾಜಿ ಚಾಂಪಿಯನ್ ಪಾಕಿಸ್ತಾನ ತಂಡವು 2019ರ ವಿಶ್ವಕಪ್ ರನ್ನರ್-ಅಪ್ ನ್ಯೂಜಿಲೆಂಡ್ ತಂಡದ ವಿರುದ್ಧ ಮುಖಾಮುಖಿಯಾಗಲಿದೆ.

ಶುಕ್ರವಾರದ ಇತರ ಪಂದ್ಯಗಳಲ್ಲಿ 1996ರ ವಿಶ್ವಕಪ್ ಚಾಂಪಿಯನ್ ಶ್ರೀಲಂಕಾ ಏಷ್ಯಾದ ಎದುರಾಳಿ ಬಾಂಗ್ಲಾದೇಶ ತಂಡವನ್ನು ಗುವಾಹಟಿಯ ಬರ್ಸಾಪರಾ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಎದುರಿಸಲಿದೆ ಮತ್ತು ದಕ್ಷಿಣ ಆಫ್ರಿಕಾವು ತಿರುವನಂತಪುರಂನಲ್ಲಿ ಅಫ್ಘಾನಿಸ್ತಾನ ತಂಡವನ್ನು ಎದುರಿಸಲಿದೆ.
ಶನಿವಾರ ಗುವಾಹಟಿಯಲ್ಲಿ ನಡೆಯಲಿರುವ ಅಭ್ಯಾಸ ಪಂದ್ಯದಲ್ಲಿ ಆತಿಥೇಯ ಭಾರತ ತಂಡ ಹಾಲಿ ಚಾಂಪಿಯನ್ ಇಂಗ್ಲೆಂಡ್ ವಿರುದ್ಧ ಸೆಣಸಾಡಲಿದೆ. ಐದು ಬಾರಿಯ ಏಕದಿನ ವಿಶ್ವಕಪ್ ವಿಜೇತ ಆಸ್ಟ್ರೇಲಿಯಾ ತಂಡ ಶನಿವಾರದಂದೇ ತಿರುವನಂತಪುರಂನಲ್ಲಿ ನೆದರ್ಲ್ಯಾಂಡ್ಸ್ ವಿರುದ್ಧ ಕಣಕ್ಕಿಳಿಯಲಿದೆ.
ಈಗಾಗಲೇ ನೆದರ್ಲ್ಯಾಂಡ್ಸ್, ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ ಮತ್ತು ಅಫ್ಘಾನಿಸ್ತಾನ ತಂಡಗಳು ಭಾರತಕ್ಕೆ ಬಂದಿಳಿದಿವೆ. ಎಲ್ಲಾ ವಿಶ್ವಕಪ್ ಅಭ್ಯಾಸ ಪಂದ್ಯಗಳು ಭಾರತೀಯ ಕಾಲಮಾನ ಮಧ್ಯಾಹ್ನ 2 ಗಂಟೆಗೆ ಪ್ರಾರಂಭವಾಗುತ್ತವೆ.
2023ರ ಐಸಿಸಿ ಏಕದಿನ ವಿಶ್ವಕಪ್ ಅಭ್ಯಾಸ ಪಂದ್ಯಗಳ ಸಂಪೂರ್ಣ ವೇಳಾಪಟ್ಟಿ
ಶುಕ್ರವಾರ, ಸೆಪ್ಟೆಂಬರ್ 29:
ಬಾಂಗ್ಲಾದೇಶ vs ಶ್ರೀಲಂಕಾ - ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂ, ಗುವಾಹಟಿ
ದಕ್ಷಿಣ ಆಫ್ರಿಕಾ vs ಅಫ್ಘಾನಿಸ್ತಾನ - ಗ್ರೀನ್‌ಫೀಲ್ಡ್ ಅಂತಾರಾಷ್ಟ್ರೀಯ ಕ್ರೀಡಾಂಗಣ, ತಿರುವನಂತಪುರಂ
ನ್ಯೂಜಿಲೆಂಡ್ vs ಪಾಕಿಸ್ತಾನ - ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣ, ಹೈದರಾಬಾದ್
ಶನಿವಾರ, ಸೆಪ್ಟೆಂಬರ್ 30:
ಭಾರತ vs ಇಂಗ್ಲೆಂಡ್ - ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂ, ಗುವಾಹಟಿ
ಆಸ್ಟ್ರೇಲಿಯಾ vs ನೆದರ್ಲ್ಯಾಂಡ್ಸ್ - ಗ್ರೀನ್‌ಫೀಲ್ಡ್ ಅಂತಾರಾಷ್ಟ್ರೀಯ ಕ್ರೀಡಾಂಗಣ, ತಿರುವನಂತಪುರಂ
ಸೋಮವಾರ, ಅಕ್ಟೋಬರ್ 2:
ಇಂಗ್ಲೆಂಡ್ vs ಬಾಂಗ್ಲಾದೇಶ - ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂ, ಗುವಾಹಟಿ
ನ್ಯೂಜಿಲೆಂಡ್ vs ದಕ್ಷಿಣ ಆಫ್ರಿಕಾ - ಗ್ರೀನ್‌ಫೀಲ್ಡ್ ಅಂತಾರಾಷ್ಟ್ರೀಯ ಕ್ರೀಡಾಂಗಣ, ತಿರುವನಂತಪುರಂ
ಮಂಗಳವಾರ, ಅಕ್ಟೋಬರ್ 3:
ಅಫ್ಘಾನಿಸ್ತಾನ vs ಶ್ರೀಲಂಕಾ - ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂ, ಗುವಾಹಟಿ
ಭಾರತ vs ನೆದರ್ಲ್ಯಾಂಡ್ಸ್ - ಗ್ರೀನ್‌ಫೀಲ್ಡ್ ಅಂತಾರಾಷ್ಟ್ರೀಯ ಕ್ರೀಡಾಂಗಣ, ತಿರುವನಂತಪುರಂ
ಪಾಕಿಸ್ತಾನ vs ಆಸ್ಟ್ರೇಲಿಯಾ - ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣ, ಹೈದರಾಬಾದ್
ವಿಶ್ವಕಪ್ ಅಭ್ಯಾಸ ಪಂದ್ಯಗಳ ಟಿವಿ ಮತ್ತು ಲೈವ್ ಸ್ಟ್ರೀಮಿಂಗ್ ವಿವರ
2023ರ ಐಸಿಸಿ ಏಕದಿನ ವಿಶ್ವಕಪ್ ಅಭ್ಯಾಸ ಪಂದ್ಯಗಳನ್ನು ಭಾರತದಲ್ಲಿ ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಚಾನೆಲ್‌ಗಳಲ್ಲಿ ನೇರಪ್ರಸಾರವಾಗಲಿವೆ. ಡಿಸ್ನಿ+ ಹಾಟ್‌ಸ್ಟಾರ್ ವೆಬ್‌ಸೈಟ್ ಮತ್ತು ಅಪ್ಲಿಕೇಶನ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಆಗಿ ವೀಕ್ಷಿಸಬಹುದು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications