Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ವಿಶ್ವಕಪ್ 2023: ಭಾರತದ 2ನೇ ಅಭ್ಯಾಸ ಪಂದ್ಯವೂ ಮಳೆಗೆ ಆಹುತಿ

ಭಾರತ ಇಂದು ನೆದರ್ಲೆಂಡ್ಸ್ ತಂಡದ ವಿರುದ್ಧ ಎರಡನೇ ಅಭ್ಯಾಸ ಪಂದ್ಯವನ್ನಾಡಲು ಸಜ್ಜಾಗಿತ್ತು. ಆದರೆ ಈ ಪಂದ್ಯ ಕೂಡ ಮಳೆಗೆ ಸಂಪೂರ್ಣವಾಗಿ ಆಹುತಿಯಾಗಿದೆ. ಈ ಪಂದ್ಯಕ್ಕಾಗಿ ಭಾರತ ಹಾಗೂ ನೆದರ್ಲೆಂಡ್ಸ್ ಎರಡು ತಂಡಗಳು ಕೂಡ ತಿರುವನಂತಪುರಂಗೆ ಬಂದಿಳಿದಿದ್ದವು. ಆದರೆ ಮುಂಜಾನೆಯಿಂದಲೇ ಮಳೆ ಕಾಟ ನೀಡಲು ಆರಂಭಿಸಿರುವ ಕಾರಣ ಪಂದ್ಯ ನಡೆಯುವ ಬಗ್ಗೆ ಅನುಮಾನಗಳು ಎದ್ದಿತ್ತು.

ನಂತರ ಪಂದ್ಯದ ಆರಂಭದ ಸಮಯದಲ್ಲಿಯೂ ಮಳೆ ಮುಂದುವರಿದ ಕಾರಣದಿಂದಾಗಿ ಎರಡನೇ ಅಭ್ಯಾಸ ಪಂದ್ಯಕ್ಕೂ ಅವಕಾಶವೇ ದೊರೆಯಲಿಲ್ಲ. ಮಳೆ ನಿಂತಿದ್ದರೂ ಮೈದಾನದಲ್ಲಿ ಸಾಕಷ್ಟು ನೀರು ನಿಂತಿರುವ ಕಾರಣದಿಂದಾಗಿ ಪಂದ್ಯ ಮುಂದುವರಿಸುವುದು ಅಸಾಧ್ಯವಾಗಿದೆ. ಹೀಗಾಗಿ ಈ ಪಂದ್ಯ ಒಂದೂ ಎಸೆತ ಕಾಣದೆ ರದ್ದಾಗಿದೆ.

World Cup 2023 warmup Match: India vs Netherlands game abandoned due to rain

ಇನ್ನು ಭಾರತ ಇದಕ್ಕೂ ಮುನ್ನ ಇಂಗ್ಲೆಂಡ್ ವಿರುದ್ದ ಅಭ್ಯಾಸ ಪಂದ್ಯವನ್ನು ಆಡಬೇಕಾಗಿತ್ತು. ಗುವಾಹಟಿಯ ಬರ್ಸಾಪರ ಕ್ರೀಡಾಂಗಣದಲ್ಲಿ ನಿಗದಿಯಾಗಿದ್ದ ಆ ಪಂದ್ಯಕ್ಕೂ ಮಳೆ ಅಡ್ಡಿಯುಂಟು ಮಾಡಿತ್ತು. ಹೀಗಾಗಿ ಒಂದೂ ಎಸೆತ ಕಾಣದೆ ಆ ಪಂದ್ಯದಲ್ಲಿಯೂ ಭಾರತ ಹಾಗೂ ಇಂಗ್ಲೆಂಡ್ ಎರಡು ತಂಡಗಳಿಗೂ ಕಣಕ್ಕಿಳಿಯಲು ಸಾಧ್ಯವಾಗಿರಲಿಲ್ಲ.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ವಿಕೆಟ್ ಕೀಪರ್), ಶುಬ್ನ್ ಗಿಲ್, ವಿರಾಟ್ ಕೊಹ್ಲಿ, ಇಶಾನ್ ಕಿಶನ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಕುಲದೀಪ್ ಯಾದವ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್

ನೆದರ್ಲ್ಯಾಂಡ್ಸ್ ಸ್ಕ್ವಾಡ್: ಸ್ಕಾಟ್ ಎಡ್ವರ್ಡ್ಸ್ (ನಾಯಕ & ವಿಕೆಟ್ ಕೀಪರ್), ವಿಕ್ರಮ್‌ಜಿತ್ ಸಿಂಗ್, ಮ್ಯಾಕ್ಸ್ ಓಡೌಡ್, ವೆಸ್ಲಿ ಬ್ಯಾರೆಸಿ, ಬಾಸ್ ಡಿ ಲೀಡೆ, ಕಾಲಿನ್ ಅಕರ್‌ಮನ್, ಸೈಬ್ರಾಂಡ್ ಎಂಗಲ್‌ಬ್ರೆಕ್ಟ್, ಲೋಗನ್ ವ್ಯಾನ್ ಬೀಕ್, ಶರೀಜ್ ಅಹ್ಮದ್, ಆರ್ಯನ್ ದತ್, ರೋಲೋಫ್ ವ್ಯಾನ್ ಡೆರ್ ಮೆರ್ವೆ, ತೇಜಾ ನಿಡಮನೂರು, ಪಾಲ್ ವ್ಯಾನ್ ಮೀಕೆರೆನ್, ರಯಾನ್ ಕ್ಲೈನ್, ಸಾಕಿಬ್ ಜುಲ್ಫಿಕರ್

Story first published: Tuesday, October 3, 2023, 17:25 [IST]
Other articles published on Oct 3, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+