ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಅಬ್ಬರದ ಶತಕ ಸಿಡಿಸಿ ಭಾರತದ ಸುಲಭ ಗೆಲುವಿಗೆ ಕಾಣವಾದರು. ಆರಂಭದಿಂದಲೇ ಆಕ್ರಮಣಕಾರಿ ಆಟವನ್ನಾಡಿದ ರೋಹಿತ್ ಶರ್ಮಾ ಪಂದ್ಯದಲ್ಲಿ ಅಫ್ಘಾನಿಸ್ತಾನ ತಂಡಕ್ಕೆ ಸಣ್ಣ ಅವಕಾಶವನ್ನೂ ನೀಡದಂತೆ ಅಬ್ಬರಿಸಿದರು. ಈ ಮೂಲಕ ಅಂತಾರಾಷ್ಟ್ರೀತ ಏಕದಿನ ಮಾದರಿಯಲ್ಲಿ 31ನೇ ಶತಕ ಸಿಡಿಸಿದ ರೋಹಿತ್ ಶರ್ಮಾ ವಿರ್ಶವಕಪ್ ಟೂರ್ನಿಯಲ್ಲಿಯೇ 7ನೇ ಶತಕ ಸಿಡಿಸಿ ಸಚಿನ್ ದಾಖಲೆ ಸರಿಗಟ್ಟಿದ್ದಾರೆ.
ಇನ್ನು ಈ ಅಬ್ಬರದ ಪ್ರದರ್ಶನ ನೀಡಿದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬಗ್ಗೆ ಮಾಜಿ ಕ್ರಿಕೆಟಿಗ ಆಕಾಶ್ ಚೋಪ್ರ ಭಾರೀ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ಏಕದಿನ ಕ್ರಿಕೆಟ್ ಮಾದರಿಯ ಅದ್ಭುತ ಆಟಗಾರ ಎನಿಸಿಕೊಂಡಿದ್ದರೂ ರೋಹಿತ್ ಶರ್ಮಾಗೆ ನಿಜವಾಗಿಯೂ ಅವರ ಅರ್ಹತೆಗೆ ತಕ್ಕದಾದ ಗೌರವ ದೊರೆತಿಲ್ಲ ಎಂದು ಬೇಸರ ಹೊರಹಾಕಿದ್ದಾರೆ.

ಬುಧವಾರ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಅಫ್ಘಾನಿಸ್ತಾನದ ವಿರುದ್ಧ ರೋಹಿತ್ ಶರ್ಮಾ ತನ್ನ ಅತ್ಯುತ್ತಮ ಲಯವನ್ನು ಪ್ರದರ್ಶಿಸಿದರು. ಈ ಪಂದ್ಯದಲ್ಲಿ 84 ಎಸೆತಗಳಲ್ಲಿ 131 ರನ್ ಬಾರಿಸುವ ಮೂಲಕ ಭಾರತವನ್ನು 8 ವಿಕೆಟ್‌ಗಳ ಅಂತರದ ಭರ್ಜರಿ ಜಯಕ್ಕೆ ಕಾರಣವಾದರು. 2023ರ ವಿಶ್ವಕಪ್ ಟೂರ್ನಿಯಲ್ಲಿ ಶತಕ ಸಿಡಿಸಿದ ಮೊದಲ ನಾಯಕ ಎನ್ನುವ ಹೆಗ್ಗಳಿಕೆಯನ್ನು ಕೂಡ ತನ್ನದಾಗಿಸಿಕೊಂಡಿದ್ದಾರೆ.
"ರನ್ ಬೆನ್ನಟ್ಟುವ ಸಂದರ್ಭದಲ್ಲಿ ನನ್ನ ಗಮನ ಸಂಪೂರ್ಣವಾಗಿ ಇಶಾನ್ ಕಿಶನ್‌ನ ಮೇಲಿತ್ತು. ನನ್ನ ಪ್ರಕಾರ ಆತನಿಂದ ಉತ್ತಮವಾದ ಬ್ಯಾಟಿಂಗ್ ಬಂದಿದ್ದರೂ ಅದು ಇನ್ನಷ್ಟು ಪರಿಣಾಮಕಾರಿಯಾಗ ಆಡುವ ಅವಕಾಶವಿತ್ತು. ಆದರೆ ಅವರು ತಮ್ಮ ಪ್ರಯತ್ನವನ್ನು ನಡೆಸಿದ್ದಾರೆ. ಅಲ್ಲದೆ ಈ ಸಂದರ್ಭದಲ್ಲಿ ಅವರು ನಾಯಕನ ಆಟಕ್ಕೆ ಬೆಂಬಲವಾಗಿ ನಿಂತಿದ್ದರು" ಎಂದಿದ್ದಾರೆ ಆಕಾಶ್ ಚೋಪ್ರ.
"ರೋಹಿತ್ ಶರ್ಮಾ ವಿಶ್ವಕಪ್‌ನಲ್ಲಿ ಆಡಿವ ಕೇವಲ ಹತ್ತೊಂಬತ್ತು ಪಂದ್ಯಗಳಲ್ಲಿ ಏಳು ಶತಕಗಳನ್ನು ಗಳಿಸಿದ್ದಾರೆ. ಎಂಥಾ ಅದ್ಭುತವಾದ ಆಟಗಾರ ಈತ. ಅವರು ಸಿಕ್ಸರ್‌ಗಳನ್ನು ಬಹಳ ಸುಲಭವಾಗಿ ಬಾರಿಸಬಹುದು ಎನಿಸುವಂತೆ ಬಾರಿಸಿದ್ದಾರೆ. ಏಕದಿನ ಕ್ರಿಕೆಟ್‌ನ ದಿಗ್ಗಜ ಆಟಗಾರನಾಗಿದ್ದರೂ ಆತನಿಗೆ ಸಿಗಬೇಕಾದ ಗೌರವ ದೊರೆಯದಿರುವುದು ದುರದೃಷ್ಟಕರ. ಆತ ಯಾವಾಗ ಅಬ್ಬರಿಸಲು ಆರಂಭಿಸುತ್ತಾರೆಯೋ ಅವತ್ತು ಪಂದ್ಯ ಸಂಪೂರ್ಣವಾಗಿ ಏಕಪಕ್ಷೀಯವಾಗಿರುತ್ತದೆ" ಎಂದಿದ್ದಾರೆ ಆಕಾಶ್ ಚೋಪ್ರ.
ಟೀಮ್ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್
ಬೆಂಚ್: ರವಿಚಂದ್ರನ್ ಅಶ್ವಿನ್, ಮೊಹಮ್ಮದ್ ಶಮಿ, ಸೂರ್ಯಕುಮಾರ್ ಯಾದವ್,
ಅಫ್ಘಾನಿಸ್ತಾನ: ರಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್), ಇಬ್ರಾಹಿಂ ಜದ್ರಾನ್, ರಹಮತ್ ಶಾ, ಹಶ್ಮತುಲ್ಲಾ ಶಾಹಿದಿ (ನಾಯಕ), ನಜಿಬುಲ್ಲಾ ಜದ್ರಾನ್, ಮೊಹಮ್ಮದ್ ನಬಿ, ಅಜ್ಮತುಲ್ಲಾ ಒಮರ್ಜಾಯ್, ರಶೀದ್ ಖಾನ್, ಮುಜೀಬ್ ಉರ್ ರೆಹಮಾನ್, ನವೀನ್-ಉಲ್-ಹಕ್, ಫಜಲ್ಹಕ್ ಫಾರೂಕಿ
ಬೆಂಚ್: ಇಕ್ರಂ ಅಲಿಖಿಲ್, ಅಬ್ದುಲ್ ರೆಹಮಾನ್, ರಿಯಾಜ್ ಹಸನ್, ನೂರ್ ಅಹ್ಮದ್