For Quick Alerts
ALLOW NOTIFICATIONS  
For Daily Alerts
 

ವಿಶ್ವಕಪ್ 2023 ಫೈನಲ್: ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದ್ದಾರೆ ವಿವಿಧ ಕ್ಷೇತ್ರಗಳ ದಿಗ್ಗಜರು

42 ದಿನಗಳ ರಣರೋಚಕ ಏಕದಿನ ವಿಶ್ವಕಪ್ ಟೂರ್ನಿ ಅಂತ್ಯದ ಹಂತಕ್ಕೆ ಬಂದಿದೆ. ನವೆಂಬರ್ 19 ಭಾನುವಾರ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಫೈನಲ್‌ನಲ್ಲಿ ಮುಖಾಮುಖಿಯಾಗಲಿದ್ದು ನರೇಂದ್ರ ಮೋದಿ ಕ್ರೀಡಾಂಗಣ ಈ ಮೆಗಾ ಪಂದ್ಯಕ್ಕೆ ಆತಿರ್ಥಯ ವಹಿಸಲಿದೆ. ಈ ಫೈನಲ್ ಪಂದ್ಯದ ಆರಂಭಕ್ಕೂ ಮುನ್ನ ವರ್ಣರಂಚಿತ ಸಮಾರೋಪ ಸಮಾರಂಭ ಆಯೋಜನೆಯಾಗಲಿದೆ. ಈ ವಿಶೇಷ ಸಂದರ್ಭದಕ್ಕೆ ಅನೇಕ ಕ್ಷೇತ್ರಗಳ ದಿಗ್ಗಜರು, ತಾರೆಯರು ಭಾಗಿಯಾಗಲಿದ್ದಾರೆ ಜೊತೆಗೆ ಭಾರತೀಯ ವಾಯುಸೇನೆಯ ಸೂರ್ಯಕಿರಣ್ ತಂಡದಿಂದ ಏರ್‌ಶೋ ವಿಶೇಷ ಮೆರುಗು ನೀಡಲಿದೆ.

ಭಾರತ ಕಳೆದ ಹತ್ತು ವರ್ಷಗಳಿಂದ ಐಸಿಸಿ ಟ್ರೋಫಿಗಾಗಿ ಪರಿತಪಿಸುತ್ತಿದೆ. ಇದೀಗ ಆ ಕಾಯುವಿಕೆ ಕೊನೆಯಾಗುವ ನಿರೀಕ್ಷೆಯಿದ್ದು ಈ ಸಂದರ್ಣದಲ್ಲಿ ದೇಶದ ಹಲವು ಗಣ್ಯ ವ್ಯಕ್ತಿಗಳು ಈ ಪಂದ್ಯವನ್ನು ವೀಕ್ಷಿಸಲು ಆಗಮಿಸಲಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಈ ಪಂದ್ಯಕ್ಕೆ ಸಾಕಷ್ಇಯಾಗುವ ಸಾಧ್ಯತೆಯಿದೆ. ಅಲ್ಲದೆ ಆಸ್ಟ್ರೇಲಿಯಾದ ಪ್ರಧಾನಿ ಆಂಟೊನಿ ಅಲ್ಬೆನೀಸ್ ಅವರನ್ನು ಕೂಡ ಈ ಫೈನಲ್ ಪಂದ್ಯಕ್ಕೆ ಆಹ್ವಾನಿಸಲಾಗಿದೆ.

World Cup final: India vs Australia in final match, many stars will attend world cup final event

ಡೆಕ್ಕನ್ ಹೆರಾಲ್ಡ್ ವರದಿಯ ಪ್ರಕಾರ ಭಾರತದ ವಿಶ್ವಕಪ್ ವಿಜೇತ ಮಾಜಿ ನಾಯಕರಾದ ಕಪಿಲ್ ದೇವ್ ಮತ್ತು ಎಂಎಸ್ ಧೋನಿ ಕೂಡ ಮೆಗಾ ಫೈನಲ್‌ನಲ್ಲಿ ಉಪಸ್ಥಿತರಿರಲಿದ್ದಾರೆ. ಇನ್ನು 2011ರ ವಿಶ್ವಕಪ್ ವಿಜೇತ ತಂಡದ ಸದಸ್ಯರಾದ ಸಚಿನ್ ತೆಂಡೂಲ್ಕರ್, ವೀರೇಂದ್ರ ಸೆಹ್ವಾಗ್, ಯುವರಾಜ್ ಸಿಂಗ್ ಮತ್ತು ಇತರರು ಕೂಡ ನರೇಂದ್ರ ಮೋದಿ ಕ್ರೀಡಾಂಗಣಕ್ಕೆ ಆಗಮಿಸುವ ನಿರೀಕ್ಷೆಯಿದೆ. ಪ್ರಸ್ತುತ ಭಾರತದ ಕ್ರಿಕೆಟಿಗರಾದ ಹಾರ್ದಿಕ್ ಪಾಂಡ್ಯ ಮತ್ತು ಯುಜ್ವೇಂದ್ರ ಚಹಾಲ್ ಕೂಡ ಮೆಗಾ ಈವೆಂಟ್‌ಗೆ ಹಾಜರಾಗುವ ನಿರೀಕ್ಷೆಯಿದೆ.

ಇನ್ನು ಹಾಡುಗಾರ ಆದಿತ್ಯ ಗಾಢವಿ, ಸಂಗೀತ ನಿರ್ದೇಶಕ ಪ್ರೀತಮ್ ಚಕ್ರಬರ್ತಿ, ಜೊನಿತಾ ಗಾಂಧಿ ಅವರಿಂದ ಸಂಗೀತ ಕಾರ್ಯಕ್ರಮಗಳು ಕೂಡ ಆಯೋಜನೆಯಾಗಲಿದೆ. ಇನ್ನು ಪ್ರದರ್ಶನ ನೀಡುವ ಕಲಾವಿದರು ಹಾಗೂ ಕ್ರಿಕೆಟಿಗರನ್ನು ಹೊರತುಪಡಿಸಿ ಹಲವು ದಿಗ್ಗಜ ನಟರು ಈ ಕಾರ್ಯಕ್ರಮದಲ್ಲಿ ಭಾಗಿಯಾಗುವ ಸಾಧ್ಯತೆಯಿದೆ. ಅಮಿತಾಬ್ ಬಚ್ಚನ್, ರಜನಿಕಾಂತ್, ಕಮಲ್ ಹಾಸನ್, ಮೋಹನ್‌ಲಾಲ್ ಸೇರಿದಂತೆ ಸಿನಿಮಾ ಕ್ಷೇತ್ರದ ಹಲವು ದಿಗ್ಗಜರು ಭಾಗಿಯಾಗುವ ಸಾಧ್ಯತೆಯಿದೆ.

ಈ ಬಾರಿಯ ವಿಶ್ವಕಪ್ ಟೂರ್ನಿಯಲ್ಲಿ ಭಾಗವಹಿಸುವ ಮೂಲಕ ಭಾರತ ಕ್ರಿಕೆಟ್ ತಂಡ ಐಸಿಸಿ ಏಕದಿನ ವಿಶ್ವಕಪ್‌ನ ಇತಿಹಾಸದಲ್ಲಿ ನಾಲ್ಕನೇ ಬಾರಿಗೆ ಫೈನಲ್ ಪಂದ್ಯದಲ್ಲಿ ಆಡಿದಂತಾಗುತ್ತದೆ. ಇದಕ್ಕೂ ಮುನ್ನ ಭಾರತ ಕ್ರಿಕೆಟ್ ತಮಡ ಮೂರು ಬಾರಿ ವಿಶ್ವಕಪ್ ಫೈಲ್‌ನಲ್ಲಿ ಆಡಿತ್ತು. 1983, 2003 ಮತ್ತು 2011ರ ವಿಶ್ವಕಪ್‌ನಲ್ಲಿ ಭಾರತ ಫೈನಲ್‌ಗೆ ಪ್ರವೇಶ ಪಡೆದುಕೊಂಡಿತ್ತು. 1983ರಲ್ಲಿ ಕಪಿಲ್‌ದೇವ್ ನಾಯಕತ್ವದಲ್ಲಿ ಭಾರತ ಮೊದಲ ಬಾರಿಗೆ ವಿಶ್ವಕಪ್ ಟ್ರೋಫಿ ಗೆದ್ದಿದ್ದರೆ ಬಳಿಕ 2003ರಲ್ಲಿ ಸೌರವ್ ಗಂಗೂಲಿ ನೇತೃಥ್ವದಲ್ಲಿ ಫೈನಲ್‌ಗೆ ಪ್ರವೇಶ ಪಡೆದಿದ್ದು ಆಸ್ಟ್ರೇಲಿಯಾಗೆ ಶರಣಾಗಿತ್ತು. ಅದದ ಬಳಿಕ 2011ರಲ್ಲಿ ಎಂಎಸ್ ಧೋನಿ ನಾಯಕತ್ವದಲ್ಲಿ ಫೈನಲ್ ಆಡಿ ಗೆದ್ದು 28 ವರ್ಷಗಳ ಬಳಿಕ ಚಾಂಪಿಯನ್ ಪಟ್ಟಕ್ಕೇರಿತ್ತು. ಇದೀಗ ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡ 2011ರಲ್ಲಿ ಮಾಡಿದ ಸಾಧನೆಯನ್ನು ಮತ್ತೊಮ್ಮೆ ಪುನರಾವರ್ತನೆ ಮಾಡುವ ಉತ್ಸಾಹದಲ್ಲಿದೆ.

Story first published: Saturday, November 18, 2023, 8:36 [IST]
Other articles published on Nov 18, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+